ಆರ್‌ಬಿಐ ₹2000 ಮುಖಬೆಲೆಯ ನೋಟುಗಳನ್ನ ಹಿಂಪಡೆಯುವಿಕೆಗೆ ದೇಶದ ಜನರಿಗೆ ಗಡುವು ನೀಡಿದೆ. ಇನ್ನೇನು ಏಳೆಂಟು ತಿಂಗಳಲ್ಲಿ 2000 ರೂಪಾಯಿ ನೋಟಿಗೆ ಕೊನೆ ಮೊಳೆ ಕೂಡ ಬೀಳಲಿದೆ. ಆದರೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ತೇಜು ಎಂಬ ಯುವಕನ ಬದುಕಲ್ಲಿ ಎಷ್ಟೆ ವರ್ಷಗಳು ಕಳೆದರು ಆ 2000 ರೂಪಾಯಿ ಮುಖಬೆಲೆಯ ನೋಟು ಹಚ್ಚಹಸಿರಾಗೇ ಇರಲಿದೆ.
ವರದಿ : ಆಲ್ದೂರು ಕಿರಣ್ ಏಷ್ಯಾ ನೆಟ್ ಸುವರ್ಣ ನ್ಯೂಸ್ ಚಿಕ್ಕಮಗಳೂರು
ಚಿಕ್ಕಮಗಳೂರು (ಮೇ.22): ಆರ್‌ಬಿಐ ₹2000 ಮುಖಬೆಲೆಯ ನೋಟುಗಳನ್ನ ಹಿಂಪಡೆಯುವಿಕೆಗೆ ದೇಶದ ಜನರಿಗೆ ಗಡುವು ನೀಡಿದೆ. ಇನ್ನೇನು ಏಳೆಂಟು ತಿಂಗಳಲ್ಲಿ 2000 ರೂಪಾಯಿ ನೋಟಿಗೆ ಕೊನೆ ಮೊಳೆ ಕೂಡ ಬೀಳಲಿದೆ. ಆದರೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ತೇಜು ಎಂಬ ಯುವಕನ ಬದುಕಲ್ಲಿ ಎಷ್ಟೆ ವರ್ಷಗಳು ಕಳೆದರು ಆ 2000 ರೂಪಾಯಿ ಮುಖಬೆಲೆಯ ನೋಟು ಹಚ್ಚಹಸಿರಾಗೇ ಇರಲಿದೆ.
undefined
ಮದುವೆಯ ಆಮಂತ್ರಣ ನೋಟಿನಲ್ಲೇ ಮುದ್ರಣ
ಪ್ರಧಾನಿ ಮೋದಿ(PM Narendra Modi) ಮೇಲಿನ ಅಭಿಮಾನಕ್ಕಾಗಿ ತನ್ನ ಮದುವೆಯ ಆಮಂತ್ರಣ ಪತ್ರಿಕೆ(Wedding invitation card)ಯ ಫ್ರೆಂಡ್ಸ್ ಕಾರ್ಡ್‍ನ್ನ 2000 ರೂಪಾಯಿ ನೋಟಿನಲ್ಲೇ ಮುದ್ರಣವನ್ನು ತೇಜು ಹಾಕಿಸಿದ್ದರು. ಆ ಮದುವೆ ಆಮಂತ್ರಣ ಪತ್ರಿಕೆಯನ್ನ ನೋಡಿದರೆ 2000 ರೂಪಾಯಿ ನೋಟನ್ನ ನೋಡುವುದೇ ಬೇಡ ಅಷ್ಟು ಅಚ್ಚುಕಟ್ಟಾಗಿ ಮಾಡಿಸಿದ್ದರು.
ನೋಟಿನಲ್ಲಿರುವ ನಂಬರ್, ನೋಟಿನ ಮಧ್ಯ ಭಾಗದಲ್ಲಿ ಇರುವ ಎಲ್ಲಾ ಭಾಷೆಯಲ್ಲಿ 2000 ರೂಪಾಯಿ ಎಂದು ಇರುವ ಜಾಗದಲ್ಲಿ ತನ್ನ ಹೆಸರಿನ ಜೊತೆ ಮದುವೆಯಾಗುವ ಹುಡುಗಿಯ ಹೆಸರನ್ನ ಹಾಕಿಸಿದ್ದರು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(reserve bank of india) ಎಂದು ಇರುವ ಜಾಗದಲ್ಲಿ ಲವ್ ಬ್ಯಾಂಕ್ ಆಫ್ ಇಂಡಿಯಾ(Love bank of india) ಎಂದು ನಮೂದು ಮಾಡಿಸಿದ್ದರು. ನೋಟಿನ ಮಧ್ಯದಲ್ಲಿ ಮಹಾತ್ಮ ಗಾಂಧಿಜೀಯವರ ಫೋಟೋ ಇರುವ ಜಾಗದಲ್ಲಿ ವಧು-ವರರನ್ನ ಆಶೀರ್ವದಿಸುತ್ತಿರುವ ಗಣಪತಿಯ ಭಾವಚಿತ್ರವಿದೆ. ನೋಟಿನ ಮತ್ತೊಂದು ಬದಿಯಲ್ಲಿ ಸ್ಕ್ಯಾನರ್ ಕೂಡ ಇದ್ದು. ಅದನ್ನ ಸ್ಕ್ಯಾನ್ ಮಾಡಿದರೆ ಕಳಸ ತಾಲೂಕಿನ ಮದುವೆ ಮಂಟಪಕ್ಕೆ ಬರುವ ಮಾರ್ಗ ತೋರಿಸುವಂತಿತ್ತು. ಸುಮಾರು 1500 ಕಾರ್ಡ್ ಮಾಡಿಸಿದ್ದ ಯುವಕ ಸ್ನೇಹಿತರಿಗೆಲ್ಲಾ ಅದೇ ಕಾರ್ಡ್ ಹಂಚಿದ್ದ.
ವೈರಲ್ ಆಗುತ್ತಿರುವ ಕಾರ್ಡ್ :
ಇದೀಗ ಆರ್‌ಬಿಐ 2000 ನೋಟನ್ನ ಹಿಂಪಡೆಯುತ್ತಿರುವಂತೆ ಯುವಕ ತೇಜು ಸ್ನೇಹಿತರು ಆ ನೋಟಿನ ಇನ್ವಿಟೇಷನ್ ಕಾಡ್ ಕಳಿಸಿ ನೆನಪಿಸುತ್ತಿದ್ದಾರೆ.ಅಲ್ಲದೆ ಸಾಮಾಜಿಕ ಜಾಲ ತಾಣದಲ್ಲೂ ಕಾರ್ಡ್ ವೈರಲ್(viral news) ಆಗುತ್ತಿದೆ.ಉಡುಪಿಯಲ್ಲಿ ಪ್ರಿಂಟ್ ಹಾಕಿಸಿದ್ದ ಈ ಕಾರ್ಡನ್ನ ಅಚ್ಚುಕಟ್ಟಾಗಿ ಪ್ರಿಂಟ್ ಹಾಕಿಕೊಡಲು ಉಡುಪಿಯ ಆಪ್‍ಸೆಟ್ ಪ್ರಿಂಟರ್‍ನವರು ಕೂಡ ವಾರಗಟ್ಟಲೇ ಟೈಂ ತೆಗೆದುಕೊಂಡಿದ್ದರು. ಇನ್ನು ಮುಂದೆ ಅದೆಲ್ಲೆ ನೆನಪಷ್ಟೆ. ಮೋದಿ ಮೇಲಿನ ಅಭಿಮಾನಕ್ಕಾಗಿ ವಿಶೇಷವಾಗಿ ಮದುವೆ ಆಮಂತ್ರಣ ಕಾರ್ಡ್ ಮಾಡಿಸಬೇಕೆಂದು ಡಿಫರೆಂಟ್ ಆಗಿ ಕಾರ್ಡ್ ಮಾಡಿಸಿದ್ದ ಕಳಸ ತಾಲೂಕಿನ ಯುವಕನ ಬಾಳಲ್ಲಿ 2000 ರೂಪಾಯಿ ನೋಟು ಎಂದೆಂದೂ ಹಚ್ಚಹಸಿರಾಗಿರಲಿದೆ.