ಬ್ಯಾಂಕ್, ಪೋಸ್ಟ್ ಆಫೀಸ್‌ನಲ್ಲೂ ಆಧಾರ್‌ ನೋಂದಣಿ, ತಿದ್ದುಪಡಿ

By Kannadaprabha NewsFirst Published Sep 23, 2019, 3:07 PM IST
Highlights

ಇನ್ನೂ ಆಧಾರ್ ಕಾರ್ಡ್ ಮಾಡಿಸಿಕೊಳ್ಳದವರಿಗೆ, ತಿದ್ದುಪಡಿ ಮಾಡಲು ಬಯಸುವವರಿಗೆ ಉಡುಪಿಯಲ್ಲಿ ಸುಲಭ ಅವಕಾಶ ಲಭ್ಯವಾಗಿದೆ. ತಮ್ಮ ಸಮೀಪದ ಬ್ಯಾಂಕ್, ಪೋಸ್ಟ್ ಆಫೀಸ್‌ಗಳಲ್ಲಿಯೂ ಜನರು ಆಧಾರ್ ಕಾರ್ಡ್ ನೋಂದಣಿ ಮಾಡಬಹುದು. ಅದಕ್ಕಾಗಿ ಆಧಾರ್ ಕೇಂದ್ರಗಳಿಗೇ ಓಡಾಡುವ ಸಮಸ್ಯೆ ತಪ್ಪಿದಂತಾಗಿದೆ.  

ಉಡುಪಿ(ಸೆ.23): ಆಧಾರ್‌ ಕಾರ್ಡ್‌ನಲ್ಲಿರುವ ಹೆಸರು, ಜನ್ಮ ದಿನಾಂಕ, ವಿಳಾಸದ ಬದಲಾವಣೆ ಅಥವಾ ತಿದ್ದುಪಡಿ ಮಾಡುವ ಸಲುವಾಗಿ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿಲ್ಲೆಯ ಅಂಚೆ ಇಲಾಖೆಗಳಲ್ಲಿ ಹಾಗೂ ಬ್ಯಾಂಕ್‌ಗಳಲ್ಲಿ ಆಧಾರ್‌ ತಿದ್ದುಪಡಿ ಕೇಂದ್ರಗಳು ಕೆಲಸ ನಿರ್ವಹಿಸುತ್ತಿದ್ದು, ಆಧಾರ್‌ ಕಾರ್ಡ್‌ಗಳನ್ನು ನೋಂದಣಿ ಮಾಡಲು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಈ ಕೇಂದ್ರಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಆಪರೇಟರ್‌ಗಳು ಅಂಚೆ ಇಲಾಖೆಯ ಕೆಲಸದೊಂದಿಗೆ ಪ್ರತಿ ದಿನಕ್ಕೆ 15ರಿಂದ 20 ಜನರ ನೋಂದಣಿ ತಿದ್ದುಪಡಿ ನಡೆಸಲಾಗುತ್ತದೆ ಹಾಗೂ ಟೋಕನ್‌ಗಳನ್ನು ನೀಡಿ ಮುಂದಿನ ದಿನಾಂಕವನ್ನು ನಿಗದಿಪಡಿಸಲಾಗುತ್ತದೆ.

ಈ ಶಾಲೆಗೆ ಶಿಕ್ಷಕರಿದ್ದರೂ ಬರೋದಿಲ್ಲ, ವಿದ್ಯಾರ್ಥಿಗಳ ಗೋಳು ಕೇಳೋರು ಯಾರು..?

ಅಲ್ಲದೆ ತಾಲೂಕು ಕಚೇರಿ ಕುಂದಾಪುರ, ಕಾರ್ಕಳ, ಉಡುಪಿ, ಬ್ರಹ್ಮಾವರ, ಬೈಂದೂರು, ಕಾಪು, ನಾಡ ಕಚೇರಿಗಳಾದ ಕೋಟ, ವಂಡ್ಸೆ, ಅಜೆಕಾರು ಇಲ್ಲಿರುವ ಅಟಲ್‌ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಸ್ಪಂದನ ಕೇಂದ್ರಗಳಲ್ಲಿ ಸಾರ್ವಜನಿಕರು ಹೊಸತಾಗಿ ಆಧಾರ್‌ ಕಾರ್ಡ್‌ ನೋಂದಣಿ ಹಾಗೂ ತಿದ್ದುಪಡಿಗಾಗಿ ಕಚೇರಿ ದಿನದಂದು ಭೇಟಿ ನೀಡಿ ಇದರ ಸದುಪಯೋಗ ಪಡೆದುಕೊಳ್ಳಬಹುದು. ಆಧಾರ್‌ ಕಾರ್ಡ್‌ ನೋಂದಣಿ ಹಾಗೂ ತಿದ್ದುಪಡಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ ಟೋಕನ್‌ ನೀಡಿ ದಿನಾಂಕವನ್ನು ನಿಗದಿಪಡಿಸಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

click me!