ಚಿಮುಲ್‌ ರದ್ದುಗೊಳಿಸಿ ಸಿದ್ದು ದ್ವೇಷ ಸಾಧನೆ: ಸುಧಾಕರ್‌

By Kannadaprabha News  |  First Published Jul 4, 2023, 8:58 AM IST

ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಖಂಡ ಕೊಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು(ಕೋಚಿಮುಲ್‌) ವಿಭಜಿಸಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಉತ್ಪಾದಕರ ಸಂಘ(ಚಿಮುಲ್‌) ನಿರ್ಮಿಸಲಾಗಿತ್ತು. ಆದರೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದ್ವೇಷದ ರಾಜಕಾರಣಕ್ಕೆ ಮುಂದಾಗಿದ್ದು, ಚಿಮುಲ್‌ ವಜಾಗೊಳಿಸಿದ್ದಾರೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್‌ ಆರೋಪಿಸಿದರು.


  ಚಿಕ್ಕಬಳ್ಳಾಪುರ :  ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಖಂಡ ಕೊಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು(ಕೋಚಿಮುಲ್‌) ವಿಭಜಿಸಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಉತ್ಪಾದಕರ ಸಂಘ(ಚಿಮುಲ್‌) ನಿರ್ಮಿಸಲಾಗಿತ್ತು. ಆದರೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದ್ವೇಷದ ರಾಜಕಾರಣಕ್ಕೆ ಮುಂದಾಗಿದ್ದು, ಚಿಮುಲ್‌ ವಜಾಗೊಳಿಸಿದ್ದಾರೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್‌ ಆರೋಪಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋಲಾರದಿಂದ ಬೇರ್ಪಟ್ಟು ಚಿಕ್ಕಬಳ್ಳಾಪುರ ಪ್ರತ್ಯೇಕ ಜಿಲ್ಲೆಯಾದರೂ ಹಾಲು ಒಕ್ಕೂಟ ಮಾತ್ರ ಬೇರೆಯಾಗಿರಲಿಲ್ಲ. ಹೀಗಾಗಿ ಜಿಲ್ಲೆಯ ಹಾಲು ಉತ್ಪಾದಕರ ಹಿತದೃಷ್ಟಿಯಿಂದ ಒಕ್ಕೂಟವನ್ನು ಕಳೆದ ವರ್ಷ ವಿಭಜನೆ ಮಾಡಲಾಗಿತ್ತು. ಇದರ ವಿರುದ್ಧ ಕೋಚಿಮುಲ್‌ನ ಕೆಲ ನಿರ್ದೇಶಕರು ಹೈಕೋರ್ಚ್‌ ಮೆಟ್ಟಿಲೇರಿದ್ದರು. ಕೋರ್ಟಿನಲ್ಲಿ ಕೇಸಿದ್ದರೂ ಸೇಡಿನ ರಾಜಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಬಂದ ಒಂದೂವರೆ ತಿಂಗಳಲ್ಲಿ ವಿಭಜನೆ ನಿರ್ಧಾರ ವಾಪಸ್‌ ಪಡೆದಿದ್ದಾರೆ. ಇದರಿಂದ ಜಿಲ್ಲೆಯ ಹೈನುಗಾರರಿಗೆ ಅನ್ಯಾಯವಾಗಿದೆ. ಇದರ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದರು.

Tap to resize

Latest Videos

ಇದೇ ವೇಳೆ ಚಿಕ್ಕಬಳ್ಳಾಪುರ ಮೆಡಿಕಲ್‌ ಕಾಲೇಜು ವಿಚಾರವಾಗಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಮೊತ್ತೊಮ್ಮೆ ಮೆಡಿಕಲ್‌ ಉದ್ಘಾಟನೆ ಮಾಡಿಸುತ್ತಾರಂತೆ. ಮೊದಲು ಕಾಮಗಾರಿ ಪೂರ್ಣಗೊಳಿಸಲಿ. ಯಾವ ಚಪಲಕ್ಕೆ ಎರಡನೇ ಬಾರಿ ಉದ್ಘಾಟನೆ ಮಾಡುತ್ತಾರೋ ಮಾಡಲಿ. ನಾವು ಸೋತಿದ್ದೇವೆ ಸತ್ತಿಲ್ಲ ಎಂದರು.

ಸಮ್ಮಿಶ್ರ ಸರ್ಕಾರ ಬೀಳಲು ಸಿದ್ದರಾಮಯ್ಯ ಕಾರಣ

ಚಿಕ್ಕಬಳ್ಳಾಪುರ (ಮೇ.18): ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ 2018ರ ಸಮ್ಮಿಶ್ರ ಸರ್ಕಾರ ಬೀಳಲು ಸಿದ್ದರಾಮಯ್ಯ ಅವರೆ ಮುಖ್ಯ ಕಾರಣ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. ಈ ಸಂಬಂಧ ಡಾ.ಸುಧಾಕರ್‌ ಅವರು ಸರಣಿ ಟ್ವೀಟ್‌ ಮಾಡಿ ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದಿದ್ದಾರೆ. 2018ರಲ್ಲಿ ಅಂದಿನ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ತಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇನೂ ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು ಎಂದು ತಿಳಿಸಿದ್ದಾರೆ. 

2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು ಎಂದಿದ್ದಾರೆ. ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್‌್ಕ ತೆಗೆದುಕೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಸಿದ್ದರಾಮಯ್ಯನವರ ಪ್ರೇರಣೆ, ನೇರ ಅಥವಾ ಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಅರುಣ್‌ ಕುಮಾರ್‌ ಪುತ್ತಿಲ ಎಫೆಕ್ಟ್: ಬಿಜೆಪಿ ವೋಟು ಶೇ.4.90 ಕುಸಿತ!

ಸೋಮಣ್ಣ, ಸುಧಾಕರ್‌ಗೆ ಸಿಎಂ ಸಮಾಧಾನ: ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುನಾವಣೆಯಲ್ಲಿ ಸೋಲು ಅನುಭವಿಸಿದ ತಮ್ಮ ಸಂಪುಟ ಸಹೋದ್ಯೋಗಿಗಳಾಗಿರುವ ಡಾ.ಕೆ. ಸುಧಾಕರ್‌ ಮತ್ತು ವಿ. ಸೋಮಣ್ಣ ಅವರನ್ನು ಖುದ್ದಾಗಿ ಭೇಟಿ ಮಾಡಿ ಸಮಾಧಾನ ಮಾಡಿದ್ದಾರೆ. ಮಂಗಳವಾರ ಉಭಯ ಸಚಿವರ ನಿವಾಸಕ್ಕೆ ತೆರಳಿದ ಬೊಮ್ಮಾಯಿ ಅವರು ಕೆಲಕಾಲ ಮಾತನಾಡಿ ಚುನಾವಣೆಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು. ಅಲ್ಲದೆ, ಸೋಲಿನಿಂದ ವಿಚಲಿತರಾಗದೆ ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷ ಸಂಘಟನೆ ಬಲಪಡಿಸುವತ್ತ ಗಮನಹರಿಸೋಣ ಎಂಬ ಮಾತನ್ನೂ ಹೇಳಿದರು.

click me!