ಚೆಕ್ ಬೌನ್ಸ್ ಪ್ರಕರಣ: ಸಚಿವ ಮಧು ಬಂಗಾರಪ್ಪ ರಾಜೀನಾಮೆಗೆ ಎಬಿವಿಪಿ ಆಗ್ರಹ

Published : Jan 03, 2024, 04:00 AM IST
ಚೆಕ್ ಬೌನ್ಸ್ ಪ್ರಕರಣ: ಸಚಿವ ಮಧು ಬಂಗಾರಪ್ಪ ರಾಜೀನಾಮೆಗೆ ಎಬಿವಿಪಿ ಆಗ್ರಹ

ಸಾರಾಂಶ

ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಜನಪ್ರತಿನಿಧಿ ನ್ಯಾಯಾಲಯ ಸಚಿವರಿಗೆ ದಂಡ ವಿಧಿಸಿದೆ. ದಂಡ ಕಟ್ಟಲು ತಪ್ಪಿದರೆ 6 ತಿಂಗಳ ಸೆರೆಮನೆ ವಾಸ ಅನುಭವಿಸಬೇಕು ಎಂದು ತೀರ್ಪಿನಲ್ಲಿ ಆದೇಶಿಸಿದೆ. ರಾಜ್ಯ ಸರ್ಕಾರ ಕೂಡಲೇ ಇವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಮತ್ತು ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ ಎಬಿವಿಪಿ ಕಾರ್ಯಕರ್ತರು 

ಬೆಳಗಾವಿ(ಜ.03):  ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಮಂಗಳವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ನಗರದ ಆರ್ ಪಿಡಿ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. 

ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಜನಪ್ರತಿನಿಧಿ ನ್ಯಾಯಾಲಯ ಸಚಿವರಿಗೆ ದಂಡ ವಿಧಿಸಿದೆ. ದಂಡ ಕಟ್ಟಲು ತಪ್ಪಿದರೆ 6 ತಿಂಗಳ ಸೆರೆಮನೆ ವಾಸ ಅನುಭವಿಸಬೇಕು ಎಂದು ತೀರ್ಪಿನಲ್ಲಿ ಆದೇಶಿಸಿದೆ. ರಾಜ್ಯ ಸರ್ಕಾರ ಕೂಡಲೇ ಇವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಮತ್ತು ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ನನ್ನ ರಾಜೀನಾಮೆ ಕೇಳಲು ನೀವು ಯಾರು ? ನಿಮಗೆ ಏನ್ ಯೋಗ್ಯತೆ ಇದೆ ?: ಮಧು ಬಂಗಾರಪ್ಪ

ಹಲವಾರು ದಿನಗಳಿಂದ ಬಾಕಿ ಉಳಿಸಿಕೊಂಡಿದ್ದ ಹಣವನ್ನು ಮಧು ಬಂಗಾರಪ್ಪನವರು ಚೆಕ್ ನೀಡಿದ್ದರು. ಆದರೆ, ಅದು ಬೌನ್ಸ್ ಆಗಿತ್ತು. ಇದರಿಂದ, ರಾಜೇಶ್ ಎಕ್ಸ್ ಪೋರ್ಟ್ಸ್ ಸಂಸ್ಥೆಯು ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು. ಆಗಿನಿಂದ ವಿಚಾರಣೆ ನಡೆಯುತ್ತಿದ್ದ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತೀರ್ಪು ಹೊರಬಿದ್ದಿದೆ. ನಾವು ರಾಜ್ಯಾದ್ಯಂತ ಹೋರಾಟ ಮಾಡುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ರೋಹಿತ್ ಆಲಕುಂಟೆ, ಸಚಿವ ಹೀರೆಮಠ, ರೋಹಿತ್ ಉಮನಾಬಾದಿಮಠ, ಅಪ್ಪಣ್ಣ ಹಡಪದ, ಮಂಜು ಹಂಚಿನಮನಿ, ಮನೋಜ ಪಾಟೀಲ, ದೇವರಾಜ್, ಮಲ್ಲು ಪೂಜಾರಿ, ದರ್ಶನ ಹೆಗಡೆ ಸೇರಿದಂತೆ ಹಲವು ಕಾರ್ಯಕರ್ತರು ಭಾಗಿಯಾಗಿದ್ದರು.

PREV
Read more Articles on
click me!

Recommended Stories

ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಹೊಸ ಮಾರ್ಗಗಳಿಗೆ ಬರಲಿವೆ ಚಾಲಕ ರಹಿತ ರೈಲು