ರೈತರೋರ್ವರಿಂದ ಲಂಚ ಪಡೆಯುವಾಗ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿಯೋರ್ವರು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.
ದಾವಣಗೆರೆ [ಜ.09]: ಎಸಿಬಿ ಅಧಿಕಾರಿಗಳು ನಡೆಸಿದ ದಾಳಿ ವೇಳೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕ್ಷೇತ್ರಾಧಿಕಾರಿ ಲಂಚ ಪಡೆಯುವ ಸಿಕ್ಕಿ ಬಿದ್ದಿದ್ದಾರೆ.
ದಾವಣಗೆರೆ ನಗರದ ಹೊಸ ಬಸ್ ನಿಲ್ದಾಣದ ಬಳಿ ಇರುವ ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಇಲ್ಲಿನ ಕ್ಷೇತ್ರಾಧಿಕಾರಿ ಮರಿಸ್ವಾಮಿ ರೈತರೋರ್ವರಿಂದ ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದಾರೆ.
ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಕೊಳವೇ ಬಾವಿ ತೋಡಿಸಲು ಹತ್ತು ಸಾವಿರ ರು. ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದಾರೆ.
ಲೈಸನ್ಸ್ ಇಲ್ಲದೇ ಸರ್ಕಾರಿ ಬಸ್ ಓಡಿಸಿದ ಶಾಸಕ: ನಿಯಮ ಉಲ್ಲಂಘಿಸಿದ್ರೂ ಹಾರಿಕೆಯ ಉತ್ತರ!.
ಜಯಾ ನಾಯ್ಕ ಎನ್ನುವ ರೈತರಿಂದ ಲಂಚ ಪಡೆಯುತ್ತಿದ್ದಾಗ ಡಿವೈಎಸ್ಪಿ ಪಾಂಡುರಂಗ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಈ ವೇಳೆ ಅಧಿಕಾರಿ ಮರಿಸ್ವಾಮಿಯನ್ನು ವಶಕ್ಕೆ ಪಡೆದಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಇದೀಗ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.