ಬಂಟ್ವಾಳ: ಲಂಚ ಸಮೇತ ಎಸಿಬಿ ಬಲೆ​ ಬಿದ್ದ ಉಪ​ತ​ಹ​ಸೀ​ಲ್ದಾ​ರ್‌

Kannadaprabha News   | Asianet News
Published : Nov 27, 2020, 02:24 PM IST
ಬಂಟ್ವಾಳ: ಲಂಚ ಸಮೇತ ಎಸಿಬಿ ಬಲೆ​ ಬಿದ್ದ ಉಪ​ತ​ಹ​ಸೀ​ಲ್ದಾ​ರ್‌

ಸಾರಾಂಶ

ತಾಯಿಯ ಹೆಸರಲ್ಲಿರುವ ಜಾಗಕ್ಕೆ ಸಂಬಂಧಿಸಿ ಆರ್‌ಟಿಸಿ ತಿದ್ದುಪಡಿ ಮಾಡಿಕೊಡಲು 1500 ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಉಪತಹಸೀಲ್ದಾರ್| 1000 ರು. ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಅಧಿಕಾರಿಗಳ ದಾಳಿ| ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಕಚೇರಿ ಮೇಲೆ ಎಸಿಬಿ ದಾಳಿ|  

ಬಂಟ್ವಾಳ(ನ.27):  ಆರ್‌​ಟಿಸಿ ತಿದ್ದುಪಡಿ ಮಾಡಲೆಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಬಂದ ದೂರಿನನ್ವಯ ದಕ್ಷಿಣ ಕನ್ನಡದ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್‌ ಅಧಿಕಾರಿಗಳು ಬಂಟ್ವಾಳ ತಾಲೂಕು ಕಚೇರಿಗೆ ದಾಳಿ ನಡೆಸಿದ ವೇಳೆ ಉಪತಹಸೀಲ್ದಾರ್‌ ರವಿಶಂಕರ್‌ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದು, ಅವರನ್ನು ಬಂಧಿ​ಸ​ಲಾ​ಗಿದೆ. ಗುರುವಾರ ಮಧ್ಯಾಹ್ನ ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ಕಾರ್ಯಾ​ಚ​ರಣೆ ನಡೆದಿದೆ.

ದೂರುದಾರರು ತಾಯಿಯ ಹೆಸರಲ್ಲಿರುವ ಜಾಗಕ್ಕೆ ಸಂಬಂಧಿಸಿ ಆರ್‌ಟಿಸಿ ತಿದ್ದುಪಡಿ ಮಾಡಿಕೊಡಲು ಉಪತಹಸೀಲ್ದಾರ್‌ 1,500 ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಪ್ರಕರಣ ದಾಖಲಿಸಲಾಗಿದ್ದು, 1,000 ರು. ಲಂಚ ಸ್ವೀಕರಿಸುವ ಸಂದರ್ಭ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ನಿಖಾಹ್‌ ಆದ್ರೂ ಪತಿ ದೂರ: ನ್ಯಾಯಕ್ಕಾಗಿ ಮಸೀದಿ ಮೊರೆ ಹೋದ ಮತಾಂತರಿತ ಪತ್ನಿ

ಪೊಲೀಸ್‌ ಅಧೀಕ್ಷಕ ಬೋಪಯ್ಯ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕೆ.ಸಿ.ಪ್ರಕಾಶ್‌ ನೇತೃತ್ವದಲ್ಲಿ ಪೊಲೀಸ್‌ ನಿರೀಕ್ಷಕರಾದ ಶ್ಯಾಂಸುಂದರ್‌, ಗುರುರಾಜ್‌ ಹಾಗೂ ಸಿಬ್ಬಂದಿ ಹರಿಪ್ರಸಾದ್‌, ರಾಧಾಕೃಷ್ಣ, ಉಮೇಶ್‌, ರಾಧಾಕೃಷ್ಣ ಡಿ.ಎ, ಪ್ರಶಾಂತ್‌ ಎಂ, ವೈಶಾಲಿ, ರಾಜೇಶ್‌ ಪಿ, ರಾಕೇಶ್‌ ವಾಗ್ಮೇನ್‌, ಸತೀಶ್‌ ಹಾಗೂ ಭರತ್‌ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

PREV
click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು