ಅಗ್ನಿ ಅವಘಡ: ಹೊತ್ತಿ ಉರಿದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌

Suvarna News   | Asianet News
Published : Mar 07, 2020, 11:00 AM IST
ಅಗ್ನಿ ಅವಘಡ: ಹೊತ್ತಿ ಉರಿದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌

ಸಾರಾಂಶ

ಬ್ಯಾಂಕ್‌ಗೆ ಆಕಸ್ಮಿಕ ಬೆಂಕಿ| ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಹುಣಶೀಕಟ್ಟಿಯಲ್ಲಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌| ಬೆಂಕಿಗಾಹುತಿಯಾದ ದಾಖಲೆಗಳು| 

ಬೆಳಗಾವಿ(ಮಾ.07): ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನಲ್ಲಿ ದಾಖಲಾತಿಗಳೆಲ್ಲ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ಹುಣಶೀಕಟ್ಟಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. 

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿ ಅವಘಡದಿಂದ ಬ್ಯಾಂಕ್‌ನಲ್ಲಿದ್ದ ಪೀಠೋಪಕರಣ, ಠೇವಣಿ, ಸಾಲದ ದಾಖಲೆ, ಕ್ಯಾಶ್ ಕೌಂಟಿಂಗ್ ಮಷಿನ್‌ಗಳೆಲ್ಲ ಬೆಂಕಿಗಾಹುತಿಯಾಗಿವೆ. ಬ್ಯಾಂಕ್‌ಗೆ ಬೆಂಕಿ ಹೊತ್ತಿಕೊಂಡಿದ್ದನ್ನ ಸ್ಥಳೀಯರು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 
 

PREV
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
Bengaluru Weather: ರಾಜ್ಯಕ್ಕೆ ಈಶಾನ್ಯ ಮಾರುತ- ದಶಕದ ದಾಖಲೆಯ ಚಳಿಗೆ ಸಿದ್ಧರಾಗಿ; ಬೆಂಗಳೂರು ಸ್ಥಿತಿ ಏನು ನೋಡಿ!