ಚಡಚಣದಲ್ಲಿ ಆಕಸ್ಮಿಕ ಬೆಂಕಿ: ಸುಟ್ಟು ಭಸ್ಮವಾದ ಕಬ್ಬು ಬೆಳೆ

Published : Dec 07, 2019, 11:55 AM IST
ಚಡಚಣದಲ್ಲಿ ಆಕಸ್ಮಿಕ ಬೆಂಕಿ: ಸುಟ್ಟು ಭಸ್ಮವಾದ ಕಬ್ಬು ಬೆಳೆ

ಸಾರಾಂಶ

ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ| ಮೂರು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಳೆ ನಾಶ| ಕಂಗಾಲಾದ ರೈತ| ಸೂಕ್ತ ಪರಿಹಾರಕ್ಕೆ ರೈತನ ಆಗ್ರಹ| 

ವಿಜಯಪುರ(ಡಿ.07): ಆಕಸ್ಮಿಕ ವಿದ್ಯುತ್ ತಂತಿ ಹರಿದು ಬಿದ್ದ ಪರಿಣಾಮ ಕಬ್ಬಿನ ಗದ್ದೆಯಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಚಡಚಣ ತಾಲೂಕಿನ ಉಮರಜ ಗ್ರಾಮದಲ್ಲಿ ಘಟನೆ ಇಂದು(ಶನಿವಾರ) ನಡೆದಿದೆ. 

ಬೆಂಕಿ ಹೊತ್ತಿಕೊಂಡ ಪರಿಣಾಮ ಮೂರು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಸಂಪೂರ್ಣವಾಗಿ ಸುಟ್ಟು‌ ಭಸ್ಮವಾಗಿದೆ. ರಾಜಕುಮಾರ ತುಕಾರಾಮ ಲೋಣಿ ಎಂಬುವವರಿಗೆ ಸೇರಿದ ಹೊಲದಲ್ಲಿ ಘಟನೆ ನಡೆದಿದೆ. ಇದರಿಂದ ರಾಜಕುಮಾರ ತುಕಾರಾಮ ಲೋಣಿ ಅವರಿಗೆ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಮೂರು ಎಕರೆಯಲ್ಲಿ ಬೆಳೆದಿದ್ದ ಬೆಂಕಿಗೆ ಆಹುತಿಯಾಗಿದ್ದರಿಂದ ರೈತ ರಾಜಕುಮಾರ ಅವರು ಕಂಗಾಲಾಗಿದ್ದಾರೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾನೆ. ಈ ಸಂಬಂಧ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!