
ಹೊಸಕೋಟೆ(ಅ.05): ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮೂರು ಅಂಗಡಿಗಳು ಆಹುತಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಇಂದು(ಶನಿವಾರ) ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ.
ಹೊಸಕೋಟೆ ಪಟ್ಟಣದ ಪಾರ್ವತಿ ನಗರದಲ್ಲಿ ಘಟನೆ ನಡೆದಿದೆ. ಮೂರು ಅಗ್ನಿಶಾಮಕ ದಳದಿಂದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿವೆ. ಸತತ ಒಂದು ಗಂಟೆಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ. ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ರಾತ್ರೋರಾತ್ರಿ ಕಾರಿಗೆ ಬೆಂಕಿ: ಸಿಸಿಟಿವಿಯಲ್ಲಿ ಬೆಚ್ಚಿ ಬೀಳಿಸುವ ದೃಶ್ಯ ಸೆರೆ!
ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಂಗಡಿ ಮಾಲೀಕರು ಸಂಜೆ ಬಾಗಿಲ ಹಾಕಿಕೊಂಡು ಮನೆಗೆ ಹೋಗಿದ್ದ ಸಂದರ್ಭದಲ್ಲಿ ಅಗ್ಇ ಅವಘಡ ಸಂಭವಿಸಿದೆ. ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.