ಬೆಂಗಳೂರು: ಪ್ರತಿ ಕಂಬಕ್ಕೂ ಸಿಸಿ ಕ್ಯಾಮೆರಾ ಹಾಕಿ, ಕಸ ಎಸೆಯುವವರ ಹಿಡೀರಿ, ಡಿಕೆಶಿ

Published : Jul 10, 2024, 10:59 AM ISTUpdated : Jul 10, 2024, 11:22 AM IST
ಬೆಂಗಳೂರು: ಪ್ರತಿ ಕಂಬಕ್ಕೂ ಸಿಸಿ ಕ್ಯಾಮೆರಾ ಹಾಕಿ, ಕಸ ಎಸೆಯುವವರ ಹಿಡೀರಿ, ಡಿಕೆಶಿ

ಸಾರಾಂಶ

ಜನರು ಮನೆಯ ಬಳಿ ಬರುವ ಕಸ ಸಂಗ್ರಹ ವಾಹನಗಳಿಗೆ ಕಸವನ್ನು ಹಾಕದೆ ರಸ್ತೆ ಬದಿ ಎಸೆಯುತ್ತಿದ್ದಾರೆ. ಈ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು ನಗರದ ಪ್ರತಿ ವಿದ್ಯುತ್ ಕಂಬಕ್ಕೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಸೂಚನೆ ನೀಡಲಾಗಿದೆ. ಈಗಾಗಲೇ ಕಸ ಹಾಗೂ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿಯುವವರನ್ನು ಗುರುತಿಸಿ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಹೇಳಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 

ಬೆಂಗಳೂರು(ಜು.10):  ರಸ್ತೆ ಬದಿ ಕಸ ಸುರಿಯುವವರ ವಿರುದ್ಧ ಕ್ರಮ ಕೈಗೊಳ್ಳಲು ನಗರದ ಪ್ರತಿ ವಿದ್ಯುತ್ ಕಂಬಕ್ಕೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಕಣ್ಣಾವಲು ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. 

ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಮನೆಯ ಬಳಿ ಬರುವ ಕಸ ಸಂಗ್ರಹ ವಾಹನಗಳಿಗೆ ಕಸವನ್ನು ಹಾಕದೆ ರಸ್ತೆ ಬದಿ ಎಸೆಯುತ್ತಿದ್ದಾರೆ. ಈ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು ನಗರದ ಪ್ರತಿ ವಿದ್ಯುತ್ ಕಂಬಕ್ಕೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಸೂಚನೆ ನೀಡಲಾಗಿದೆ. ಈಗಾಗಲೇ ಕಸ ಹಾಗೂ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿಯುವವರನ್ನು ಗುರುತಿಸಿ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಹೇಳಿದರು. 
ನಗರದಲ್ಲಿ ಡೆಂಘೀ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ಕೆಲಸ ಮಾಡುತ್ತಿವೆ. ಇಲಾಖೆಗಳ ಮುಖ್ಯಸ್ಥರೊಂದಿಗೆ ಮುಖ್ಯಮಂತ್ರಿಗಳು ಪ್ರತ್ಯೇಕ ಸಭೆ ನಡೆಸುತ್ತಾರೆ ಎಂದರು.

Kodagu: ಮಂಜಿನ ನಗರಿಯಲ್ಲಿ ಸಂಗ್ರಹವಾಗುವ ಕೊಳೆತ ಕಸದಿಂದ ಉತ್ಪತ್ತಿಯಾಗುತ್ತೆ ಸಾವಯವ ಗೊಬ್ಬರ!

2030ಕ್ಕೆ ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ: ಡಿಸಿಎಂ

ಬೆಂಗಳೂರು: ಬೆಂಗಳೂರಿನ ಬೆಳವಣಿಗೆಯನ್ನು ಗಮನಿಸಿ 2ನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕಿದೆ. 2030ರೊಳಗೆ ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಗುರಿ ಹೊಂದಿದ್ದು, ಅದಕ್ಕೆ ಅಗತ್ಯ ವಿರುವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಕೂಡ ಈ ಬಗ್ಗೆ ಪ್ರಸ್ತಾಪಿಸಿ, ಕ್ರಮ ಕೈಗೊಳ್ಳುತ್ತಿದ್ದಾರೆ. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯ ಸರ್ವೇ ಮಾಡಲಾಗುತ್ತಿದೆ ಎಂದರು.

ಯಲಹಂಕ ಬಳಿ ಕ್ರೀಡಾ ನಗರ: ಸಿಎಂ

ಬೆಂಗಳೂರು: ಬೆಂಗಳೂರಿನ ಯಲಹಂಕ ಬಳಿ 60 ಎಕರೆ ಪ್ರದೇಶದಲ್ಲಿ ಕ್ರೀಡಾ ನಗರ ನಿರ್ಮಾಣಕ್ಕೆ ಜಮೀನು ಒದಗಿಸುವ ಪ್ರಸ್ತಾವನೆಯನ್ನು ಸಂಪುಟ ಸಭೆಯಲ್ಲಿ ಇಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕ್ರೀಡಾ ನಗರದ ಜತೆಗೆ ಬೆಂಗಳೂರಿನ ನಾಲ್ಕು ಸ್ಥಳಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ತಲಾ 2 ಎಕರೆ ಜಮೀನು ಗುರುತಿಸಬೇಕು ಹಾಗೂ ಮೈಸೂರಿನಲ್ಲಿ ಸೈಕ್ಲಿಂಗ್ ವೆಲೋಡ್ರಾಂ ನಿರ್ಮಾಣಕ್ಕೆ 14 ಎಕರೆ ಜಮೀನು ಹಸ್ತಾಂತರಿಸುವ ಕಾರ್ಯವನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

PREV
Read more Articles on
click me!

Recommended Stories

ಡೇಂಜರ್ ಡಿಸೆಂಬರ್: ಧಾರವಾಡದಲ್ಲಿ ಧಗಧಗನೇ ಹೊತ್ತಿ ಉರಿದ ಕಾರು, ಇಬ್ಬರು ಪ್ರಾಣಾಪಾಯದಿಂದ ಪಾರು!
ಗುಂಡ್ಲುಪೇಟೆಯಲ್ಲಿ ಹನುಮ ಭಕ್ತರ ಆಕ್ರೋಶ; ಡಿಜೆ ವಶಕ್ಕೆ ಪಡೆದ ಪೊಲೀಸರ ವಿರುದ್ಧ ಭಾರಿ ಪ್ರತಿಭಟನೆ!