ಬಾಣಂತಿ ಸಾವಿಗೆ ಕಾರಣರಾದವರ ಮೇಲೆ ಕ್ರಮ: ಸಚಿವ ದಿನೇಶ್ ಗುಂಡೂರಾವ್

By Kannadaprabha News  |  First Published Dec 8, 2024, 8:00 AM IST

ಔಷಧ ಪೂರೈಕೆ ಕಂಪನಿ ವಿರುದ್ಧ ಕ್ರಮಕ್ಕೆ ಈಗಾಗಲೇ ಶಿಫಾರಸು ಮಾಡಲಾಗಿದೆ. ಪೂರೈಕೆ ಮಾಡಿರುವ ಔಷಧ ಗುಣಮಟ್ಟದ ಬಗ್ಗೆ ಹಲವು ಲ್ಯಾಬ್‌ಗಳಲ್ಲಿ ಪರೀಕ್ಷೆಗೆ ಕ್ರಮ ಕೈಗೊಂಡಿದ್ದೇವೆ. ಎಲ್ಲಾ ವರದಿಗಳು ಬಂದ ಬಳಿಕ ಅಂತಿಮ ಕ್ರಮ ಕೈಗೊಳ್ಳುತ್ತೇವೆ. ತಪ್ಪಿಸರ ಮೇಲೆ ಕ್ರಮ ಆಗುವುದರಲ್ಲಿ ಎರಡು ಮಾತಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 


ಬೆಂಗಳೂರು(ಡಿ.08): ಬಾಣಂತಿಯರ ಸಾವಿನ ವಿಚಾರದಲ್ಲಿ ಯಾರೆಲ್ಲ ತಪ್ಪು ಮಾಡಿದ್ದಾರೋ ಅವರ ವಿರುದ್ಧ ಕ್ರಮ ಆಗುವುದರಲ್ಲಿ ಎರಡು ಮಾತಿಲ್ಲ. ಪ್ರಕರಣದ ಬಗ್ಗೆ ಅಭಿವೃದ್ಧಿ ಆಯುಕ್ತರಿಂದ ತನಿಖೆ ನಡೆಯುತ್ತಿದ್ದು, ತನಿಖಾ ವರದಿಯನ್ನು ಅಧಿವೇಶನದಲ್ಲಿ ಮಂಡಿಸುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. 

ವಿಧಾನಸೌಧದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಳ್ಳಾರಿ ಆಸ್ಪತ್ರೆಗಳ ಪರಿಶೀಲನೆಗೆ ಲೋಕಾಯುಕ್ತರು ಹೋಗಿರುವುದನ್ನು ನಾವು ಸ್ವಾಗತಿಸುತ್ತೇವೆ. ಲೋಕಾಯುಕ್ತರ ಭೇಟಿ ಒಳ್ಳೆಯದು. ಸತ್ಯಾಂಶ ಬಹಿರಂಗಗೊಳ್ಳಬೇಕು, ವ್ಯವಸ್ಥೆ ಸರಿ ಹೋಗಬೇಕು ಎಂಬುದೇ ನಮ್ಮ ಉದ್ದೇಶ ಎಂದರು.

Tap to resize

Latest Videos

ಡ್ರಗ್‌ ಇನ್ಸ್‌ಪೆಕ್ಟರ್‌ಗಳು ಹುದ್ದೆಯಲ್ಲಿಲ್ಲ, ಬಾಣಂತಿಯರ ಸಾವಿಗೆ ಕೊನೆಯಿಲ್ಲ!

ಔಷಧ ರೈಕೆ ಕಂಪನಿ ವಿರುದ್ಧ ಕ್ರಮಕ್ಕೆ ಈಗಾಗಲೇ ಶಿಫಾರಸು ಮಾಡಲಾಗಿದೆ. ಪೂರೈಕೆ ಮಾಡಿರುವ ಔಷಧ ಗುಣಮಟ್ಟದ ಬಗ್ಗೆ ಹಲವು ಲ್ಯಾಬ್‌ಗಳಲ್ಲಿ ಪರೀಕ್ಷೆಗೆ ಕ್ರಮ ಕೈಗೊಂಡಿದ್ದೇವೆ. ಎಲ್ಲಾ ವರದಿಗಳು ಬಂದ ಬಳಿಕ ಅಂತಿಮ ಕ್ರಮ ಕೈಗೊಳ್ಳುತ್ತೇವೆ. ತಪ್ಪಿಸರ ಮೇಲೆ ಕ್ರಮ ಆಗುವುದರಲ್ಲಿ ಎರಡು ಮಾತಿಲ್ಲ. ಈಗಾಗಲೇ ಹಲವು ಕ್ರಮ ಕೈಗೊಂಡಿದ್ದು, ಮುಂದೆ ಏನಾಗಬೇಕು ಎಂಬ ಬಗ್ಗೆ ಹಲವು ಆಯಾಮಗಳಲ್ಲಿ ಚರ್ಚಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು. 

ಪ್ರಾಸಿಕ್ಯೂಷನ್‌ಗೆ ಆದೇಶ: 

ಐವಿ ರಿಂಗರ್‌ಲ್ಯಾಕ್ಟೇಟ್ ಉತ್ಪಾದಕ ಕಂಪನಿ ಪಶ್ಚಿ WOFTD ಫಾರ್ಮಾಸ್ಯುಟಿಕಲ್ಸ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಆದೇಶಿಸಲಾಗುವುದು ಎಂದು ಇದೇ ವೇಳೆ ಸಚಿವ ದಿನೇಶ್ ತಿಳಿಸಿದರು.

ಮೃತ ಬಾಣಂತಿಯರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

ಕೂಡ್ಲಿಗಿ:  ಬಳ್ಳಾರಿಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂ ಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ೬2 ಲಕ್ಷ ಪರಿಹಾರ ವಿತರಿಸಲಾಗುವುದು ಎಂದು ಆರೋಗ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. 

ಶನಿವಾರ ಸಂತ್ರಸ್ತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹೆಚ್ಚಿನ ಪರಿಹಾರ ನೀಡುವ ಕುರಿತು ಸಿಎಂ ಸಿದ್ದರಾಮಯ್ಯ ಜತೆ ಚರ್ಚಿಸಲಾಗುವುದು ಎಂದು ತಿಳಿಸಿದರು. 
ಈ ವರ್ಷ ರಾಜ್ಯದಲ್ಲಿ 347 ಬಾಣಂತಿಯರು ಮೃತಪಟ್ಟಿರುವುದು ಯಾವ ಕಾರಣದಿಂದ ಎಂಬುದರ ಬಗ್ಗೆ ತನಿಖೆ ಮಾಡಲಾಗುತ್ತಿದೆ. ನಾವು ಟೀವಿಗೋಸ್ಕರ ತೋರಿಕೆಗೆ ಮಾಡದೇ ಘಟನೆ ಯನ್ನು ಗಂಭೀರ ವಾಗಿ ಪರಿಗಣಿಸಿದ್ದು, ಇದರ ಹೊಣೆಗಾರಿಕೆ ನಮಗಿದೆ ಎಂದು ಹೇಳಿದರು.

5 ಬಾಣಂತಿಯರ ಬಲಿ ಪಡೆದ ಬಳ್ಳಾರಿ ಆಸ್ಪತ್ರೆಗೆ ಲೋಕಾಯುಕ್ತ ದಾಳಿ

ಬಳ್ಳಾರಿ: ಬಾಣಂತಿಯರ ಸರಣಿ ಸಾವಿನ ಪ್ರಕರಣದ ಮೂಲಕ ರಾಜ್ಯದ ಗಮನ ಸೆಳೆದಿರುವ ಸ್ಥಳೀಯ ಜಿಲ್ಲಾಸತ್ರೆ, ಬಿಮ್ಸ್‌ ಆಸತ್ರೆ ಹಾಗೂ ಜಿಲ್ಲಾ ಔಷಧಿ ಉಗ್ರಾಣಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಶನಿವಾರ ದಿಢೀರ್ ದಾಳಿ ನಡೆಸಿದೆ. 

ಬಾಣಂತಿಯರ ಸಾವಿನ ಕುರಿತು ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಈ ದಾಳಿ ನಡೆಸಲಾಗಿದೆ. ಜಿಲ್ಲಾ ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದ ತಂಡ ಜಿಲ್ಲಾಸತ್ರೆಗೆ, ಬಿಮ್‌ಗೆ ಲೋಕಾಯುಕ್ತ ಡಿವೈಎಸ್ಪಿ ವಸಂತಕುಮಾರ್‌ ಹಾಗೂ ಸಿಪಿಐ ಮಹ್ಮದ್ ರಫೀಕ್ ನೇತೃತ್ವದ ತಂಡದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ಬಾಣಂತಿಯರ ಸಾವಿನ ಪ್ರಕರಣದ ದಾಖಲೆ ಪರಿಶೀಲಿಸಿ ಅದನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಬಾಣಂತಿಯರಿಗೆ ನೀಡಿರುವ ಔಷಧಿಯೂ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಅನೇಕ ದಾಖಲೆಗಳನ್ನು ಕೂಡಾ ಲೋಕಾಯುಕ್ತ ಅಧಿ ಕಾರಿಗಳು ಜಪ್ತಿ ಮಾಡಿದ್ದಾರೆ. ಅಲ್ಲದೆ ಬಾಣಂತಿಯರ ಸಾವಿಗೆ ಕಾರಣವಾಗಿದೆ ಎಂದು ಆರೋಪಿಸಲಾದ ನಿರ್ದಿಷ್ಟ ಬ್ಯಾಚ್‌ನ ಔಷಧಿ (ರಿಂಗರ್ ಲ್ಯಾಕ್ಟೇಟ್ ದ್ರಾವಣ) ಸ್ಯಾಂಪಲ್‌ಗಳನ್ನು ಕೂಡಾ ಅಧಿಕಾರಿಗಳು ಸಂಗ್ರಹಿಸಿದ್ದಾರೆ. 

ಬಾಣಂತಿಯರ ಸಾವು: ಲೋಕಾಯುಕ್ತಕ್ಕೆ ಬಿಜೆಪಿ ದೂರು, ಸಚಿವ ಗುಂಡೂರಾವ್ ರಾಜೀನಾಮೆಗೆ ಆಗ್ರಹ

ದಿಢೀರ್ ದಾಳಿ: 

ಬೆಳಗ್ಗೆ 10.30ರಿಂದ ಸಂಜೆ 4ರ ವರೆಗೆ ಬಿಮ್ಸ್ ಆಸ್ಪತ್ರೆಯಲ್ಲಿ ಅಧಿಕಾರಿಗಳ ಒಂದು ತಂಡ ಪರಿಶೀಲನಾ ಕಾರ್ಯದಲ್ಲಿ ತೊಡಗಿತ್ತು. ಮತ್ತೊಂದು ತಂಡ ಜಿಲ್ಲಾಸ್ಪತ್ರೆಯಲ್ಲಿ ಸಂಜೆ 6.30ರ ವರೆಗೆ ಪರಿಶೀಲನೆ ಹಾಗೂ ದಾಖಲಾತಿಗಳ ಸಂಗ್ರಹ ಕಾರ್ಯ ನಡೆಸಿತು. ಔಷಧಿ ಉಗ್ರಾಣದಲ್ಲಿನ ಮಾಹಿತಿ ಸಂಗ್ರಹ ಕಾರ್ಯ ಸಂಜೆ 7ರ ವರೆಗೂ ಮುಂದುವರಿದಿತ್ತು. 

20 ಜನರ ತಂಡದಿಂದ ದಾಳಿ: 

ಲೋಕಾಯುಕ್ತ ಮೂರು ತಂಡದಲ್ಲಿ ಎಸ್ಪಿ, ಡಿವೈಎಸ್ಪಿ, ನಾಲ್ವರು ಇನ್‌ಸ್ಪೆಕ್ಟರ್‌ಗಳು ಸೇರಿದಂತೆ ಒಟ್ಟು 20 ಜನ ಸಿಬ್ಬಂದಿ ಇದ್ದರು. ಹೊಸಪೇಟೆಯಿಂದ ಸಿಬ್ಬಂದಿ ಕರೆಸಿಕೊಳ್ಳಲಾಗಿತ್ತು. ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ. ಬಸಾರೆಡ್ಡಿ, ಬಿಮ್ಸ್‌ ನಿರ್ದೇಶಕ ಡಾ. ಗಂಗಾಧರಗೌಡ ಸೇರಿ ಜಿಲ್ಲಾಸ್ಪತ್ರೆ ಹಾಗೂ ಬಿಮ್ಸ್‌ನ ವೈದ್ಯಾ ಧಿಕಾರಿಗಳ ಸಮ್ಮುಖದಲ್ಲಿಯೇ ದಾಖಲೆ ಪರಿಶೀಲನೆ ಕಾರ್ಯ ನಡೆಯಿತು. 

click me!