ಎಚ್‌ಎನ್‌ ವ್ಯಾಲಿ 3ನೇ ಹಂತದ ಶುದ್ಧೀಕರಣಕ್ಕೆ ಕ್ರಮ: ಸಚಿವ ಭೋಸರಾಜು

By Kannadaprabha News  |  First Published Jul 16, 2023, 11:19 AM IST

ಎಚ್‌.ಎನ್‌.ವ್ಯಾಲಿ ಮತ್ತು ಕೆ.ಸಿ. ವ್ಯಾಲಿ ಯೋಜನೆಯಡಿ ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಹಿನ್ನೆಲೆಯಲ್ಲಿ ಶನಿವಾರ ಕಂದವಾರ ಕೆರೆಯ ಪಂಪ್‌ ಹೌಸ್‌ ಸೇರಿದಂತೆ ಸುತ್ತ ಮುತ್ತಲ ಪ್ರದೇಶವನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌. ಭೋಸರಾಜು ಶನಿವಾರ ವೀಕ್ಷಿಸಿ, ಮಾಹಿತಿ ಪಡೆದರು.


ಚಿಕ್ಕಬಳ್ಳಾಪುರ (ಜು.16): ಎಚ್‌.ಎನ್‌.ವ್ಯಾಲಿ ಮತ್ತು ಕೆ.ಸಿ. ವ್ಯಾಲಿ ಯೋಜನೆಯಡಿ ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಹಿನ್ನೆಲೆಯಲ್ಲಿ ಶನಿವಾರ ಕಂದವಾರ ಕೆರೆಯ ಪಂಪ್‌ ಹೌಸ್‌ ಸೇರಿದಂತೆ ಸುತ್ತ ಮುತ್ತಲ ಪ್ರದೇಶವನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌. ಭೋಸರಾಜು ಶನಿವಾರ ವೀಕ್ಷಿಸಿ, ಮಾಹಿತಿ ಪಡೆದರು.

ಚಿಕ್ಕಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ಕಂದವಾರ ಕೆರೆಯ ಪಂಪ್‌ ಹೌಸ್‌ಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎಚ್‌.ಎನ್‌.ವ್ಯಾಲಿ ಮತ್ತು ಕೆ.ಸಿ. ವ್ಯಾಲಿ ನೀರಾವರಿ ಯೋಜನೆಯಿಂದ ರೈತರಿಗೆ ಸಾಕಷ್ಟುಲಾಭ ಆಗಿದೆ. ನಾನು ಭೇಟಿ ನೀಡಿದ ಸ್ಥಳಗಳಲ್ಲಿ ರೈತರು ಖುಷಿ ವ್ಯಕ್ತಪಡಿಸಿದ್ದಾರೆ. ಅಂತರ್ಜಲ ಮಟ್ಟವೃದ್ಧಿಸಿದೆ. ಇದರಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಇಳುವರಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ ಎಂದರು.

Tap to resize

Latest Videos

ಮನೆಗೆ ಬರಲು ನಿರಾಕರಣೆ: ಪತ್ನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ

ನೀರನ್ನು ನೇರ ಬಳಸುವಂತಿಲ್ಲ: ಈ ಯೋಜನೆಯಡಿ ವೃದ್ಧಿಸಿರುವ ಅಂತರ್ಜಲದಿಂದ ಕೃಷಿ ಕೈಗೊಳ್ಳಬಹುದು. ಆದರೆ ಕುಡಿಯುವ ನೀರಿನ ಉದ್ದೇಶಕ್ಕೆ ಹಾಗೂ ಕೃಷಿ ಚಟುವಟಿಕೆಗೆ ಈ ನೀರನ್ನು ನೇರವಾಗಿ ಬಳಸಬಾರದು. ಇಂತಹ ಮಹತ್ವಾಕಾಂಕ್ಷಿ ಯೋಜನೆಯ ನೀರು ಶುದ್ಧಿಕರಣ ಘಟಕಗಳಿಗೆ, ನೀರು ವಿತರಣಾ ಕೇಂದ್ರಗಳಿಗೆ ಪಂಪ್‌ ಹೌಸ್‌ಗಳಿಗೆ ಹಾಗೂ ಕೆರೆಗಳ ಸುತ್ತಮುತ್ತಲ ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಸಮರ್ಪಕವಾಗಿ ಯೋಜನೆಯ ಲಾಭವನ್ನು ರೈತರಿಗೆ ತಲುಪಿಸಲು ಯೋಜಿಸಿದ್ದೇನೆ ಎಂದರು.

ಈ ಯೋಜನೆಯಡಿ ಬರುವ ಕೆರೆಗಳ ಒತ್ತುವರಿ ತೆರವಿಗೆ, ಕೆರೆಗಳ ಸಂರಕ್ಷಣೆಗೆ, ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಈಗಾಗಲೇ ಸೂಚಿಸಿದ್ದೇನೆ. 210 ಎಂಎಲ್‌ಡಿ ನೀರು ನಮಗೆ ಎಚ್‌.ಎನ್‌.ವ್ಯಾಲಿಯಿಂದ ನೀರು ದೊರಕಬೇಕಿತ್ತು. 60 ಎಂಎಲ್‌ಡಿ ನೀರಿನ ಕೊರತೆಯಿಂದಾಗಿ ಕಡಿಮೆ ನೀರು ಲಭ್ಯವಾಗುತ್ತಿದೆ. ಮುಂದಿನ ದಿನಗಳಲ್ಲಿ ಬಿಡಬ್ಲ್ಯೂಎಸ್‌ಎಸ್‌ಬಿ ಯವರೊಂದಿಗೆ ಚರ್ಚಿಸಿ ಪೂರ್ಣ ಪ್ರಮಾಣದ ನೀರು ಪಡೆಯಲಾಗುವುದು ಎಂದು ಭರವಸೆ ನೀಡಿದರು.

3ನೇ ಹಂತದ ಶುದ್ಧೀಕರಣಕ್ಕೆ ಕ್ರಮ: ಈಗಾಗಲೇ ಗುರ್ತಿಸಿರುವ ಪ್ರತಿಯೊಂದು ಕೆರೆಗಳಿಗೆ ನೀರು ತುಂಬಿಸುವ ಕಾರ್ಯವನ್ನು ಮಾಡಲಾಗುವುದು. ಕೆರೆಯಿಂದ ಕೆರೆಗೆ ಸಂಪರ್ಕ ಮಾಡುವ ರಾಜ ಕಾಲುವೆಗಳನ್ನು ಅಭಿವೃದ್ಧಿಪಡಿಸಲಾಗುವುದು, ಸ್ಥಳೀಯವಾಗಿ ಕೆರೆಗೆ ಸೇರುವ ಕೊಳಚೆ ನೀರನ್ನು ತಡೆಯಲು ಈಗಾಗಲೇ ಸೂಚನೆ ನೀಡಿದ್ದೇನೆ. ಜೊತೆಗೆ ಎಚ್‌ಎನ್‌ ವ್ಯಾಲಿ ಯೋಜನೆಯಡಿಯ ನೀರನ್ನು 3ನೇ ಹಂತದಲ್ಲಿ ಶುದ್ಧೀಕರಣಗೊಳಿಸಿ ವಿತರಿಸುವ ವಿಚಾರ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಪರಿಶೀಲಿಸಿ 3ನೇ ಹಂತದ ಶುದ್ಧಿಕರಣಕ್ಕೆ ಕ್ರಮವಹಿಸಲಾಗುವುದು ಎಂದರು.

ಕೋಟೆನಾಡಿನಲ್ಲಿ 13 ದಿನದ ಹೆಣ್ಣು ಶಿಶುವಿನ ಮೇಲೆ ಕೋತಿ ದಾಳಿ

ಯೋಜನೆಯ ಎರಡನೇ ಹಂತವಾಗಿ ಈ ಯೋಜನೆಯನ್ನು ಶಿಢ್ಲಘಟ್ಟಹಾಗೂ ಬಾಗೇಪಲ್ಲಿಗೆ ವಿಸ್ತರಣೆ ಮಾಡಲು ಟೆಂಡರ್‌ ಮುಗಿದು ಜನವರಿ 2023ರಲ್ಲಿ ಕಾರ್ಯಾದೇಶ ನೀಡಿದ್ದರೂ ಹೆಚ್ಚಿನ ಪ್ರಗತಿಯನ್ನು ಸಾಧಿಸದ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟಅಧಿಕಾರಿಗಳನ್ನ ತರಾಟೆಗೆ ತಗೆದುಕೊಂಡರು. 18 ತಿಂಗಳ ಗಡುವಿನಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಇಲ್ಲದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವರು ಎಚ್ಚರಿಕೆ ನೀಡಿದರು. ಈ ಸಂಧರ್ಭದಲ್ಲಿ ಬಾಗೇಪಲ್ಲಿ ಶಾಸಕ ಎಸ್‌.ಎನ್‌.ಸುಬ್ಬಾರೆಡ್ಡಿ, ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ, ಸಣ್ಣ ನೀರಾವರಿ ಇಲಾಖೆಯ ಅಭಿಯಂತರರಾದ ರಾಘವನ್‌, ತಹಸೀಲ್ದಾರ್‌ ಗಣಪತಿ ಶಾಸ್ತ್ರಿ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಎನ್‌.ಕೇಶವರೆಡ್ಡಿ , ಅಡ್ಡಗಲ್‌ ಶ್ರೀಧರ್‌, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

click me!