ಶಿರಾ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಲು ಕ್ರಮ: ಡಿಕೆ ಶಿವಕುಮಾರ್

By Kannadaprabha NewsFirst Published Feb 15, 2024, 12:01 PM IST
Highlights

ಎತ್ತಿನಹೊಳೆ ಯೋಜನೆ ಮೂಲಕ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ 200 ಕೆರೆಗಳಿಗೆ ನೀರು ತುಂಬಿಸುವ ಕುರಿತು ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಯೋಜನೆ ರೂಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಬೆಂಗಳೂರು: ಎತ್ತಿನಹೊಳೆ ಯೋಜನೆ ಮೂಲಕ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ 200 ಕೆರೆಗಳಿಗೆ ನೀರು ತುಂಬಿಸುವ ಕುರಿತು ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಯೋಜನೆ ರೂಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಕಾಂಗ್ರೆಸ್‌ ನ ಟಿ.ಬಿ. ಜಯಚಂದ್ರರವರು ಎತ್ತಿನಹೊಳೆ ಯೋಜನೆ ಮುಲಕ ಶಿರಾ ತಾಲೂಕಿನ 200 ಕೆರೆಗಳಿಗೆ ನೀರು ತುಂಬಿಸಲು ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಬೇಕು ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಗಮನ ಸೆಳೆದರು.

ಅದಕ್ಕುತ್ತರಿಸಿದ ಡಿ.ಕೆ. ಶಿವಕುಮಾರ್‌, ಎತ್ತಿನಹೊಳೆ ಯೋಜನೆಯಡಿ ತುಮಕೂರು ಜಿಲ್ಲೆಯ ಕೊರಟಗೆರೆ, ಚಿಕ್ಕನಾಯಕನಹಳ್ಳಿ, ಶಿರಾ, ಮಧುಗಿರಿ ತಾಲೂಕುಗಳ ಅಂತರ್ಜಲ ವೃದ್ಧಿಗಾಗಿ 4.5 ಟಿಎಂಸಿ ನೀರು ಹಂಚಿಕೆ ಮಾಡಲಾಗಿದೆ. ಅದರ ಜತೆಗೆ ಇದೀಗ ಶಿರಾ ತಾಲೂಕಿನ ಕೆರೆಗಳ ಭರ್ತಿಗೆ ಹೆಚ್ಚುವರಿಯಾಗಿ 0.514 ಟಿಎಂಸಿ ನೀರು ಬೇಕು ಎಂದು ಮನವಿಯಿದೆ. ಅದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ, ಎತ್ತಿನಹೊಳೆ ಯೋಜನೆಯನ್ನು ಶೀಘ್ರದಲ್ಲಿ ಅನುಷ್ಠಾನಗೊಳಿಸುವುದು ಸರ್ಕಾರದ ಗುರಿಯಾಗಿದೆ ಎಂದರು

ನೀರಿನ ಬಿಲ್ ಹೆಚ್ಚಳದ ಸುಳಿವು

ವಿಧಾನಸಭೆ (ಫೆ.13): ರಾಜ್ಯದ ಪ್ರತಿಯೊಂದು ಮನೆಗೂ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಗೃಹಜ್ಯೋತಿ ಯೋಜನೆ ಜಾರಿಗೊಳಿಸಿದ ಕಾಂಗ್ರೆಸ್‌ ಸರ್ಕಾರದ ಈಗ ರಾಜಧಾನಿಯ ಜನತೆಗೆ ಜಲಮಂಡಳಿಯ ನೀರಿನ ಬಿಲ್ ಹೆಚ್ಚಳಕ್ಕೆ ಮುಂದಾಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಉಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಬಗ್ಗೆ ಸುಳಿವು ನೀಡಿದ್ದಾರೆ.

ಹೌದು, ರಾಜ್ಯ ವಿಧಾನಸಭೆಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಜಯನಗರದ ಕೊಳಚೆ ಪ್ರದೇಶಗಳಿಗೆ ಕಾವೇರಿ ನೀರು ಕೊಡದ ಬಗ್ಗೆ ಶಾಸಕ ಸಿ.ಕೆ. ರಾಮಮೂರ್ತಿ ಅವರು ಕೇಳಿದ ಪ್ರಶ್ನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಉತ್ತರ ನೀಡಿದರು. ಈ ವೇಳೆ ಜಲಂಮಡಳಿ ನೀರಿನ ದರ ಹೆಚ್ಚಳವಾಗದ ಬಗ್ಗೆ ಪ್ರಸ್ತಾಪವನ್ನು ಮಾಡಿದರು. ಜೊತೆಗೆ. 11 ವರ್ಷಗಳಿಂದ ಬೆಂಗಳೂರಿನಲ್ಲಿ ನೀರಿನ ದರವನ್ನೇ ಹೆಚ್ಚಳ ಮಾಡಲು ಆಗಿಲ್ಲ ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡುತ್ತಾ, ಕಳೆದ 11 ವರ್ಷಗಳಿಂದ ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡಲು ಆಗಿಲ್ಲ. ಆದರೆ, ರಾಜ್ಯದಲ್ಲಿ ಪ್ರತಿ ವರ್ಷ ವಿದ್ಯುತ್ ದರ ಹೆಚ್ಚಾಗುತ್ತಲೇ ಇದೆ. ಆದರೆ, ಇದಿವರೆಗೆ ಮಾತ್ರ ನೀರಿನ ದರವನ್ನು ಮಾತ್ರ ಹೆಚ್ಚಳ ಮಾಡಿಲ್ಲ. ಇದಕ್ಕೆ ರಾಜಕಾರಣವೂ ಕಾರಣವಾಗಿದೆ. ಜೊತೆಗೆ, ವಿವಿಧ ಕಾರಣಗಳಿಂದ ನೀರು ದರವನ್ನು ಹೆಚ್ಚಿಸಿಲ್ಲ. ಈಗ ನೀರು ಸಿಗಬೇಕಾದರೆ ಕೊಳೆಗೇರಿ ಅಭಿವೃದ್ಧಿ ಮಂಡಳಿ (Slum Board) ಅವರು ಪ್ರೋರೇಟಾ ಶುಲ್ಕ ಕಟ್ಟಿದರೆ ಕೊಳಚೆ ಪ್ರದೇಶಗಳಿಗೆ ಕಾವೇರಿ ನೀರು ಸಿಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದೆ. ಅದಕ್ಕೆ ತಕ್ಕಂತೆ ಕುಡಿಯುವ ನೀರಿಗೂ ತೀವ್ರ ಬೇಡಿಕೆ ಉಂಟಾಗುತ್ತಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ತಿಳಿಸಿದರು.

ಪ್ರಧಾನಿ ಮೋದಿಯವರೇ ಉದ್ಯೋಗ ಮೇಳದ ನಾಟಕ ಸಾಕು, 20 ಕೋಟಿ ಉದ್ಯೋಗವೆಲ್ಲಿ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು ನಗರ ಅಭಿವೃದ್ಧಿ ಉಸ್ತುವಾರಿ ಸಚಿವರೂ ಕೂಡ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, 'ಬೆಂಗಳೂರಿನ ಸುಮಾರು ಶೇ.20 ಪ್ರತಿಶತದಷ್ಟು ನೀರಿನ ಅಗತ್ಯವನ್ನು ಟ್ಯಾಂಕರ್‌ಗಳ ಮೂಲಕ ಪೂರೈಸಲಾಗುತ್ತಿದೆ. ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಪ್ರತಿ ವರ್ಷ ನಗರದ ಜನಸಂಖ್ಯೆ 10 ಲಕ್ಷ ಏರಿಕೆಯಾಗುತ್ತಿದೆ. ನೀರಿನ ಸಮಸ್ಯೆ ದೊಡ್ಡದಾಗಿದೆ. ಆದರೆ ಬೆಂಗಳೂರಿನ ಗೌರವ ಮತ್ತು ಹೆಮ್ಮೆಗಾಗಿ ನಾವು ಕುಡಿಯುವ ನೀರಿಗೆ ಆದ್ಯತೆ ನೀಡುತ್ತೇವೆ, ನಾವು ಅದನ್ನು ಸರಿಪಡಿಸುತ್ತೇವೆ ಎಂದು ಹೇಳಿದರು.

click me!