Davanagere News: ನೂತನ ವರ್ಷಾಚರಣೆಗೆ ಗಡುವು; ನಿಯಮ ಮೀರಿದರೆ ಕಾನೂನು ಕ್ರಮ: ಎಸ್‌ಪಿ ಸೂಚನೆ

By Ravi JanekalFirst Published Dec 28, 2022, 7:20 PM IST
Highlights

ಜಿಲ್ಲೆಯಾದ್ಯಂತ ಹೊಸ ವರ್ಷಾಚರಣೆಯನ್ನು ಡಿಸೆಂಬರ್ 31ರ ಮಧ್ಯರಾತ್ರಿ 1ಗಂಟೆವರೆಗೆ ಮಾತ್ರ ಆಚರಿಸಬೇಕು. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್ ಸೂಚನೆ ನೀಡಿದ್ದಾರೆ.

ದಾವಣಗೆರೆ (ಡಿ.28) : ಜಿಲ್ಲೆಯಾದ್ಯಂತ ಹೊಸ ವರ್ಷಾಚರಣೆಯನ್ನು ಡಿಸೆಂಬರ್ 31ರ ಮಧ್ಯರಾತ್ರಿ 1ಗಂಟೆವರೆಗೆ ಮಾತ್ರ ಆಚರಿಸಬೇಕು. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್ ಸೂಚನೆ ನೀಡಿದ್ದಾರೆ.

ಜಿಲ್ಲಾಡಳಿತ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನೂತನ ವರ್ಷಾಚರಣೆ(New year celebration) ವೇಳೆ ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ ರೈಡಿಂಗ್ ಮಾಡುವುದು.  ರಸ್ತೆಯಲ್ಲಿ ಕಿರುಚಾಟ, ಕೂಗಾಟ ಮಾಡಿ ಸಾರ್ವಜನಿಕ ನೆಮ್ಮದಿಗೆ  ಭಂಗ ತರುವುದು. ರಸ್ತೆ ಮಧ್ಯದಲ್ಲಿ ಕೇಕ್ ಕಟ್ ಮಾಡಿ ಹೊಸ ವರ್ಷಾಚರಣೆ ಮಾಡುವ ಮೂಲಕ ಸಾರ್ವಜನಿಕರಿಗೆ ಯಾವುದೇ ತೊಂದರೆ ಕೊಡುವಂತಿಲ್ಲ. ಒಂದು ವೇಳೆ ಈ ರೀತಿ ವರ್ತಿಸಿದರೆ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Davanagere: ತಾರಕಕ್ಕೇರಿದ ಬಿಜೆಪಿ- ಕಾಂಗ್ರೆಸ್‌ನ ಸೋಶಿಯಲ್ ಮೀಡಿಯಾ ವಾರ್!

ಈಗಾಗಲೇ ಹೊಸ ವರ್ಷಾಚರಣೆ ವೇಳೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಭೆ ನಡೆಸಲಾಗಿದೆ. ಪ್ರತ್ಯೇಕ ತಂಡಗಳನ್ನು ರಚಿಸಿದ್ದು, ಸಂಜೆಯಿಂದಲೇ ಕಾರ್ಯಾಚರಣೆ ನಡೆಸಲಿವೆ. ಗುಂಪಾಗಿ ಹೋಗಿ ಗಲಾಟೆ ಮಾಡುವವರು ಕಂಡುಬಂದರೆ ಅವರನ್ನು ಠಾಣೆಗೆ ಕರೆದೊಯ್ಯಲಾಗುವುದು ಎಂದರು.

ಗೃಹ ರಕ್ಷಕ ದಳದ ಸಿಬ್ಬಂದಿ ಬಳಸಿಕೊಂಡು ಗಸ್ತು ಹೆಚ್ಚಿಸಲಾಗುವುದು. ಆದ್ದರಿಂದ ಸೀಮಿತ ಅವಧಿಯಲ್ಲಿಯೇ ಹೊಸ ವರ್ಷಾಚರಣೆಯನ್ನು ಮಾಡಬೇಕು.  ಬಾರ್ ಆ್ಯಂಡ್ ರೆಸ್ಟೋರೆಂಟ್(Bar and Restaurant) ಗಳಲ್ಲಿ ಮಾಸ್ಕ್(Mask) ಕಡ್ಡಾಯ. ಸೀಮಿತ ಜನರು ಇದ್ದರೆ ಮಾತ್ರ ಒಳಗೆ ಮನೆಯೊಳಗೆ ನೂತನ ವರ್ಷಾಚರಣೆ  ಮಾಡಬೇಕು. ಹಿರಿಯ ನಾಗರಿಕರು ಹೊರಗೆ ಹೋಗಬಾರದು. ಕೊರೊನಾ(Coronavirus)ದ ಸಂಭವನೀಯ ಅಲೆ  ಇರುವುದರಿಂದ ಹಿರಿಯ ನಾಗರಿಕರು ಎಚ್ಚರದಿಂದ ಇರಬೇಕು ಎಂದು ಮುನ್ನೆಚ್ಚರಿಕೆ ನೀಡಿದ್ದಾರೆ.

ಆಶಾ ಕಾರ್ಯಕರ್ತೆರಿಗೆ ವಿವಿಧ ಸೌಲಭ್ಯ ಒದಗಿಸಲು ಒತ್ತಾಯ; ಪ್ರತಿಭಟನೆ

ರೆಸ್ಟೋರೇಂಟ್ ಮಾಲೀಕರು, ಸಿಬ್ಬಂದಿ, ಅಡುಗೆ ಸಿಬ್ಬಂದಿ ಎಲ್ಲರೂ ಕಡ್ಡಾಯವಾಗಿ ಬೂಸ್ಟರ್ ಡೋಸ್(Booster dose) ಹಾಕಿಸಿಕೊಂಡಿರಬೇಕು. ಚಿತ್ರಮಂದಿರ(movie theater)ದಲ್ಲಿ ಎನ್ 95 ಮಾಸ್ಕ್(N-95 Mask) ಹಾಕಬೇಕು. ದೇಹದ ಉಷ್ಣಾಂಶವನ್ನು ಎಲ್ಲ ಕಡೆ ಚೆಕ್ ಮಾಡಬೇಕು.. ಕೊರೊನಾ ಲಕ್ಷಣಗಳು ಕಂಡು ಬಂದರೆ ಅಂತಹವರನ್ನು ಆಸ್ಪತ್ರೆಗೆ ಸೇರಿಸಬೇಕು ಎಂದು ಹೇಳಿದ್ದಾರೆ.ಈ ವೇಳೆ ಜಿಲ್ಲಾಧಿಕಾರಿ ಶಿವಾನಂದ ಕಾಪಸಿ, ಜಿಲ್ಲಾ ಪಂಚಾಯತ ಸಿಇಓ ಡಾ.ಚೆನ್ನಪ್ಪ ಇದ್ದರು.

click me!