ಅದಾನಿ ಷೇರು ಕುಸಿತ ಪ್ರಕರಣ: ಎಲ್‌ಐಸಿ ಕಚೇರಿ ಎದುರು ಕಾಂಗ್ರೆಸ್‌ ಪ್ರತಿಭಟನೆ

By Kannadaprabha News  |  First Published Feb 7, 2023, 9:26 AM IST

ಅದಾನಿ ಸಮೂಹ ಸಂಸ್ಥೆಗಳಲ್ಲಿ ಎಲ್‌ಐಸಿ ಹೂಡಿರುವ ಬಂಡವಾಳ ಮತ್ತು ಎಸ್‌ಬಿಐ ಬ್ಯಾಂಕ್‌ ನೀಡಿರುವ ಸಾಲದ ಬಗ್ಗೆ ನ್ಯಾಯಾಂಗ ಅಥವಾ ಲೋಕಸಭಾ ಸದಸ್ಯರ ಜಂಟಿ ಸದನ ಸಮಿತಿ ನೇತೃತ್ವದಲ್ಲಿ ತನಿಖೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಸೋಮವಾರ ನಗರದ ಎಲ್‌ಐಸಿ ಕಚೇರಿ ಎದುರು ಪ್ರತಿಭಟನೆ ಮಾಡಲಾಯಿತು.


ಕಾರವಾರ (ಫೆ.7) : ಅದಾನಿ ಸಮೂಹ ಸಂಸ್ಥೆಗಳಲ್ಲಿ ಎಲ್‌ಐಸಿ ಹೂಡಿರುವ ಬಂಡವಾಳ ಮತ್ತು ಎಸ್‌ಬಿಐ ಬ್ಯಾಂಕ್‌ ನೀಡಿರುವ ಸಾಲದ ಬಗ್ಗೆ ನ್ಯಾಯಾಂಗ ಅಥವಾ ಲೋಕಸಭಾ ಸದಸ್ಯರ ಜಂಟಿ ಸದನ ಸಮಿತಿ ನೇತೃತ್ವದಲ್ಲಿ ತನಿಖೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಸೋಮವಾರ ನಗರದ ಎಲ್‌ಐಸಿ ಕಚೇರಿ ಎದುರು ಪ್ರತಿಭಟನೆ ಮಾಡಲಾಯಿತು.

ಎಲ್‌ಐಸಿ ಮತ್ತು ಎಸ್‌ಬಿಐ ನಮ್ಮ ರಾಷ್ಟ್ರದ ಹೆಮ್ಮೆಯಾಗಿವೆ. ಭಾರತೀಯರು ಕಷ್ಟಪಟ್ಟು ದುಡಿದ ಹಣದಿಂದ ಈ ಸಂಸ್ಥೆಗಳನ್ನು ನಿರ್ಮಿಸಲಾಗಿದೆ. ಆದರೆ ಕೇಂದ್ರ ಸರ್ಕಾರವು ಎಲ್‌ಐಸಿ, ಎಸ್‌ಬಿಐ ಮತ್ತು ಇತರ ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ನಷ್ಟದಲ್ಲಿ ಇರುವ ಅದಾನಿ ಗ್ರೂಪ್‌ನಲ್ಲಿ ಹೂಡಿಕೆ ಮಾಡಲು ಬಲವಂತ ಮಾಡಿದೆ ಎಂದು ಆರೋಪಿಸಿದರು.

Tap to resize

Latest Videos

ಅದಾನಿ ಕಂಪನಿಗೆ ಸಾಕಷ್ಟುನಷ್ಟವಾಗಿದೆ. ಇದರಿಂದಾಗಿ ನರೇಂದ್ರ ಮೋದಿ ಸರ್ಕಾರವು ಅದಾನಿ ಸಮೂಹದಲ್ಲಿ ಎಲ್‌ಐಸಿ ಮತ್ತು ಎಸ್‌ಬಿಐನಂತಹ ಸರ್ಕಾರಿ ಸಂಸ್ಥೆಗಳ ಮೇಲೆ ಅತ್ಯಂತ ಅಪಾಯಕಾರಿ ವಹಿವಾಟುಗಳು ಮತ್ತು ಹೂಡಿಕೆಗಳನ್ನು ಮಾಡಿದೆ. ಇದರಿಂದ ಭಾರತದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ದೂರಿದರು.

ಜಿಲ್ಲೆಯ ಪ್ರಕೃತಿ ಸೌಂದರ್ಯ ಆಸ್ವಾದಿಸಲು ಅರಣ್ಯ ಇಲಾಖೆಯ ಭೂದೃಶ್ಯ ಯಾತ್ರೆ!

ಅದಾನಿ ಗ್ರೂಪ್‌ನಲ್ಲಿ ಎಲ್‌ಐಸಿ ಭಾರಿ ಹೂಡಿಕೆ ಮಾಡಿದ್ದು, ಕಳೆದ ಕೆಲವು ದಿನಗಳಲ್ಲಿ ಎಲ್‌ಐಸಿಯ 39 ಕೋಟಿ ಪಾಲಿಸಿದಾರರು ಮತ್ತು ಹೂಡಿಕೆದಾರರು .33,060 ಕೋಟಿ ಕಳೆದುಕೊಂಡಿದ್ದಾರೆ. ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಮತ್ತು ಇತರ ಭಾರತೀಯ ಬ್ಯಾಂಕ್‌ಗಳು ಅದಾನಿ ಗ್ರೂಪ್‌ಗೆ ಭಾರಿ ಮೊತ್ತದ ಸಾಲಗಳನ್ನು ನೀಡಿವೆ. ಅದಾನಿ ಗ್ರೂಪ್‌ ಭಾರತೀಯ ಬ್ಯಾಂಕ್‌ಗಳಿಗೆ .80,000 ಕೋಟಿ ಬಾಕಿ ಉಳಿಸಿಕೊಂಡಿದೆ ಎಂದು ದೂರಿದರು.

ಎಲ್‌ಐಸಿ, ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳು ಮಾರುಕಟ್ಟೆಮೌಲ್ಯವನ್ನು ಕಳೆದುಕೊಳ್ಳುತ್ತಿರುವ ಕಂಪನಿಗಳಲ್ಲಿ ಹೂಡಿಕೆ ಮಾಡಿ ಕೋಟ್ಯಂತರ ಭಾರತೀಯರು ಕಷ್ಟದಿಂದ ಗಳಿಸಿದ ಉಳಿತಾಯವನ್ನು ಕಳೆದುಕೊಳ್ಳುವಂತಾಗಿದೆ. ಈ ಬಗ್ಗೆ ಸುಪ್ರೀಂ ಕೋರ್ಚ್‌ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ಅಥವಾ ಲೋಕಸಭಾ ಸದಸ್ಯರ ಜಂಟಿ ಸಮಿತಿಯಿಂದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

Education: ಖಾಸಗಿ ಶಾಲೆಗಳಿಂದ ಪಾಲಕರಿಗೆ ಶುಲ್ಕದ ಬರೆ!

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಸಾಯಿ ಗಾಂವಕರ, ಕಾರವಾರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಮೀರ ನಾಯ್ಕ, ಜಿಪಂ ಮಾಜಿ ಸದಸ್ಯ ರತ್ನಾಕರ ನಾಯ್ಕ, ಬಸವರಾಜ ದೊಡ್ಮನಿ, ಶಂಭು ಶೆಟ್ಟಿ, ಸಿ.ಎಫ್‌.ನಾಯ್ಕ, ಜಗದೀಪ ತಂಗೇರಿ ಮೊದಲಾದವರು ಇದ್ದರು.

click me!