ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಹೆಚ್ಚುವರಿ ಸಾರಿಗೆ ವ್ಯವಸ್ಥೆ

By Kannadaprabha NewsFirst Published Dec 22, 2023, 8:28 PM IST
Highlights

ವಾ.ಕ.ರ.ಸಾ.ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 130 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. 

ಬೆಳಗಾವಿ(ಡಿ.22): ೨೦೨೩ ನೇ ಸಾಲಿನ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ, ವಾ.ಕ.ರ.ಸಾ.ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 130 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. 

ಡಿ. 23 ನಾಲ್ಕನೇ ಶನಿವಾರ, ಡಿ.24 ಭಾನುವಾರ ಮತ್ತು ಡಿ.25 ಸೋಮವಾರ ಕ್ರಿಸ್‌ಮಸ್ ಹಬ್ಬ ಇರುವದರಿಂದ ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಬೆಂಗಳೂರಿನಿಂದ ರಾಜ್ಯ/ಅಂತರರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು ಡಿ.22ರಿಂದ 24 ರವರೆಗೆ ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ. 

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಮೂವರು ಸಿಐಡಿ ಕಸ್ಟಡಿಗೆ

ಹಬ್ಬ ಮುಗಿದ ಮೇಲೆ ಡಿ. 25 ರಂದು ಮತ್ತು ನಂತರದ ದಿನಗಳಂದು ಪ್ರಮುಖ ಸ್ಥಳಗಳಿಂದ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುವುದು. ಸಾರ್ವಜನಿಕರು ಈ ವಿಶೇಷ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುಬೇಕು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

click me!