ಶಿರಾ ತಾಲೂಕಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಶಿರಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ಯಾರಾಮೆಡಿಕಲ್ ಕೋರ್ಸ್‌ಗಳನ್ನು ಪ್ರಾರಂಭಿಸಲಾಗಿತ್ತು. ಇದರಿಂದ ತಾಲೂಕಿನ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿರುವುದು ಸಂತಸ ತಂದಿದೆ ಎಂದು ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಹೇಳಿದರು.
ಶಿರಾ : ಶಿರಾ ತಾಲೂಕಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಶಿರಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ಯಾರಾಮೆಡಿಕಲ್ ಕೋರ್ಸ್‌ಗಳನ್ನು ಪ್ರಾರಂಭಿಸಲಾಗಿತ್ತು. ಇದರಿಂದ ತಾಲೂಕಿನ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿರುವುದು ಸಂತಸ ತಂದಿದೆ ಎಂದು ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಹೇಳಿದರು.
ಈ ಬಗ್ಗೆ ಮಾತನಾಡಿದ ಅವರು ನಾನುನಾಗಿದ್ದ ವೇಳೆ ನನ್ನನ್ನು ನರ್ಸಿಂಗ್ ಕೌನ್ಸಿಲ್‌ನ ಸದನ ಸದಸ್ಯರನ್ನಾಗಿ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಪ್ಯಾರಾ ಮೆಡಿಕಲ್ ಮಂಡಳಿಯ ಸಭೆಯಲ್ಲಿ ಬೆಂಗಳೂರು ಪ್ಯಾರಾಮೆಡಿಕಲ್ ಮಂಡಳಿಯ ಪ್ರೊ . ಡಾ.ರಂಗನಾಥ್ ಅವರ ಬಳಿ ಚರ್ಚಿಸಿ ಶಿರಾದಲ್ಲಿ ಸಾರ್ವಜನಿಕ ಆಸ್ಪತ್ರೆ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಇರುವುದರಿಂದ ಇಲ್ಲಿ ಪ್ಯಾರಾಮೆಡಿಕಲ್ ಕೋರ್ಸ್ ಪ್ರಾರಂಭಿಸುವಂತೆ ಮನವಿ ಮಾಡಿದ್ದೆ. ನನ್ನ ಮನವಿಗೆ ಸ್ಪಂದಿಸಿದ ಅವರು ತಕ್ಷಣ ಸಿದ್ದತೆಗಳನ್ನು ಮಾಡಿ. 2022ರಲ್ಲಿ ಈ ಕೋರ್ಸುಗಳಿಗೆ ಬೇಕಾದ ಸೌಕರ್ಯಗಳ ಬಗ್ಗೆ ಪರಿಶೀಲಿಸಿ ಜನವರಿ 12, 2023ರಂದು ಸರಕಾರ ಆದೇಶ ಹೊರಡಿಸಿತು.
undefined
ಆದೇಶದಲ್ಲಿ ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ತಲಾ 20 ಸೀಟುಗಳಂತೆ ಡಿಪ್ಲೊಮಾ ಇನ್ ಆಪರೇಷನ್ ಥಿಯೇಟರ್ ಅಂಡ್ ಅನಸ್ತೇಶಿಯಾ ಟೆಕ್ನಾಲಜಿ, ಡಿಪ್ಲೊಮಾ ಇನ್ ಹೆಲ್ತ್ ಇನ್ಸ್‌ಪೆಕ್ಟರ್, ಡಿಪ್ಲೊಮಾ ಇನ್ ಡಯಾಲಿಸಿಸ್ ಟೆಕ್ನಾಲಜಿ, ಡಿಪ್ಲೊಮಾ ಇನ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ, ಡಿಪ್ಲೊಮಾ ಇನ್ ಆಪ್ತಲ್ಮಾಲಜಿ ಟೆಕ್ನಾಲಜಿ, ಡಿಪ್ಲೊಮಾ ಇನ್ ಮೆಡಿಕಲ್ ರೆಕಾರ್ಡ್ ಟೆಕ್ನಾಲಜಿ, ಡಿಪ್ಲೊಮಾ ಇನ್ ಇಮೇಜಿಂಗ್ ಟೆಕ್ನಾಲಜಿ ಕೋರ್ಸ್ ಹೊಸದಾಗಿ ಪ್ರಾರಂಭಿಸಲಾಯಿತು.
ಪ್ಯಾರಾ ಮೆಡಿಕಲ್ ಕೋರ್ಸ್ ಪ್ರಾರಂಭದಿಂದ ತಾಲೂಕಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಿದ್ದು, ನನಗೆ ಸಂತಸ ತಂದಿದೆ ಎಂದು ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಹೇಳಿದರು.