
ಬೆಂಗಳೂರು (ಫೆ. 07): ರಾಹುಲ್ ಗಾಂಧಿ (Rahul Gandhi) ಅವರ ಮುಖ್ಯ ಸಲಹೆಗಾರ ಕೆ.ರಾಜು (K Raju) ಭಾನುವಾರ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹಲವು ವಿಚಾರಗಳನ್ನು ಚರ್ಚಿಸಿದರು. ಭಾನುವಾರ ಸಿದ್ದರಾಮಯ್ಯ ಅವರ ಅಧಿಕೃತ ಸರ್ಕಾರಿ ನಿವಾಸದಲ್ಲಿ ಭೇಟಿಯಾದ ಅವರು, ರಾಜ್ಯದಲ್ಲಿನ ಇತ್ತೀಚೆಗಿನ ಬೆಳವಣಿಗೆಗಳು, ಸದಸ್ಯತ್ವ ನೋಂದಣಿ, ಸಿ.ಎಂ.ಇಬ್ರಾಹಿಂಗೆ ಪ್ರತಿಪಕ್ಷ ಸ್ಥಾನ ತಪ್ಪಿದ ಬಳಿಕ ಉಂಟಾಗಿರುವ ಬೆಳವಣಿಗೆಗಳು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜು (ಕೊಪ್ಪುಲ ರಾಜು) ಅವರು ಕಾಂಗ್ರೆಸ್‌ನ ಆನ್‌ಲೈನ್ ಸದಸ್ಯತ್ವ ನೋಂದಣಿ ( digital enrollment for Congress) ಉಸ್ತುವಾರಿಯಾಗಿದ್ದಾರೆ. ಶುಕ್ರವಾರ ಅರಮನೆ ಮೈದಾನದಲ್ಲಿ ನಡೆದ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯಕ್ಕೆ ಆಗಮಿಸಿದ್ದರು.
ಇದೇ ವೇಳೆ ಸೌಜನ್ಯಕ್ಕಾಗಿ ಭೇಟಿ ನೀಡಿದ್ದಾರೆ. ಯಾವುದೇ ನಿರ್ದಿಷ್ಟವಿಚಾರದ ಚರ್ಚೆಗೆ ಅವರು ಬಂದಿರಲಿಲ್ಲ ಎಂದು ಸ್ಪಷ್ಟಪಡಿಸಿದರು.ಇದೇ ವೇಳೆ ಹಾಜರಿದ್ದ ಮಾಜಿ ಸಚಿವ ಜಮೀರ್ ಅಹಮದ್ ಖಾನ್, ಬೇರೆ ಯಾವ ವಿಚಾರವನ್ನೂ ಅವರು ಚರ್ಚಿಸಿಲ್ಲ. ಸಹಜವಾಗಿ ಮಾತುಕತೆ ನಡೆಸಿದ್ದಾರಷ್ಟೆಎಂದರು.
ಇದನ್ನೂ ಓದಿ: Siddaramaiah Press Conference ನಾನು ಯಾವಾಗಲೂ ಕೂಲ್ ಆಗಿ ಇರ್ತೀನಿ, ಆದ್ರೆ…
ಸಿದ್ದು, ಡಿಕೆಶಿ ಇಬ್ಬರಿಗೂ ಸಿಎಂ ಆಗುವ ಹುಚ್ಚು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರಿಬ್ಬರಿಗೂ ಮುಖ್ಯಮಂತ್ರಿಯಾಗುವ ಹುಚ್ಚು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಕಿಡಿಕಾರಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೂಕ್ಷ್ಮ ವಿಚಾರಗಳಲ್ಲಿ ಕಾಂಗ್ರೆಸ್(Congress) ಪಕ್ಷ ರಾಜಕೀಯ(Politics) ಮಾಡುವುದನ್ನು ಬಿಡಬೇಕು. ಇಬ್ಬರಿಗೂ ಓಟು ಪಡೆಯುವ ಹಾಗೂ ಸಿಎಂ ಆಗುವ ಹುಚ್ಚುತನ ಹತ್ತಿಕೊಂಡಿದೆ. ಸಮಾಜಕ್ಕೆ ಒಳ್ಳೆಯದಾಗಲಿ ಎನ್ನುವುದು ಅವರಿಗಿಲ್ಲ. ಬಿಜೆಪಿಯವರಿಗೆ ಕೂಡ ಮತ ಪಡೆಯುವ ಹುಚ್ಚು ಬಂದಿದೆ ಎಂದು ಟೀಕಾ ಪ್ರಹಾರ ನಡೆಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಒಬ್ಬೊಬ್ಬರು ಒಂದೊಂದು ಮಾತು ಹೇಳುತ್ತಾರೆ. ಸಿದ್ದರಾಮಯ್ಯ ಒಂದು ಮಾತು ಹೇಳಿದೆ, ಡಿ.ಕೆ.ಶಿವಕುಮಾರ್ ಒಂದು ಮಾತು ಹೇಳುತ್ತಾರೆ. ಇವರಲ್ಲಿ ಒಬ್ಬರಿಗೆ ಮುಸ್ಲಿಮರ(Muslim) ಮತಗಳನ್ನು ಪಡೆಯುವ ಉಮೇದು. ಮತ್ತೊಬ್ಬರಿಗೆ ಮುಸ್ಲಿಮರ ಪರ ಮಾತಾಡಿದರೆ ಏನು ಹೆಚ್ಚು ಕಡಿಮೆಯಗುತ್ತದೋ ಎಂಬ ಭಯ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: Karnataka: ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿಗೆ ಚಾಲನೆ
ಮಹದಾಯಿ ಬಗ್ಗೆ ಎರಡು ನಾಲಿಗೆ: ಮಹದಾಯಿ(Mahadayi) ನದಿ ನೀರಿನ ವಿವಾದ ಬಗ್ಗೆ ಕಾಂಗ್ರೆಸ್ ಎರಡು ನಾಲಿಗೆ ನೀತಿ ಅನುಸರಿಸುತ್ತಿದೆ. ಮಹದಾಯಿ ಬಗ್ಗೆ ಆ ಪಕ್ಷದ ನಾಯಕ ಸತೀಶ್ ಜಾರಕಿಹೊಳಿ ಪಾದಯಾತ್ರೆ ಮಾಡುತ್ತೇವೆ ಎಂದು ಹೇಳುತ್ತಾರೆ. ಆದರೆ, ಕಾಂಗ್ರೆಸ್‌ನ ವರಿಷ್ಠ ರಾಹುಲ್ ಗಾಂಧಿ ಅವರು ಬಿಡುಗಡೆ ಮಾಡಿದ ಗೋವಾ ಚುನಾವಣೆ ಪ್ರಣಾಳಿಕೆಯಲ್ಲಿ ಯಾವುದೇ ಕಾರಣಕ್ಕೂ ಮಹದಾಯಿ ನೀರನ್ನು ಗೋವಾದಿಂದ ಬಿಟ್ಟುಕೊಡಲ್ಲ ಎಂದು ಹೇಳಿಕೊಂಡಿದ್ದಾರೆ. ಇದು ಅವರ ದ್ವಿಮುಖ ನೀತಿ ತೋರಿಸುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ತೊರೆಯಲು ಮುಂದಾಗಿರುವ ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ(CM Ibrahim) ಅವರು ಒಳ್ಳೆಯ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ. ಇಬ್ರಾಹಿಂ ಮೊದಲಿನಿಂದಲೂ ಜೆಡಿಎಸ್ ಜತೆ ಗುರುತಿಸಿಕೊಂಡವರು. ನಡುವೆ ಕೆಲ ವ್ಯತ್ಯಾಸಗಳಾಗಿದ್ದವು. ಈಗ ಮತ್ತೆ ಜೆಡಿಎಸ್ ಜತೆ ಸೇರಿ ಮತ್ತೊಂದು ರಂಗ ರಚನೆ ಬಗ್ಗೆ ಅವರು ಮುಂದಾದರೆ ಸ್ವಾಗತ ಮಾಡುತ್ತೇನೆ ಎಂದರು.