ಯಲ್ಲಾಪುರದ ಜಿಲ್ಲಾ ಪಂಚಾಯಿತಿ ಯೋಜನಾ ಉಪ ವಿಭಾಗದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರಾಗಿದ್ದ ರವಿ ರಾಂಪೂರೆ ಅವರು ಗಂಗಾವತಿ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಗೆ ಬಾರದ ಕಾರಣ ಇವರನ್ನು ಸಹ ಸರಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಗಂಗಾವತಿ(ಅ.21): ಇಲ್ಲಿಯ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಸತೀಶ್ ಅಮಾನತುಗೊಂಡಿದ್ದಾರೆ. ಗಂಗಾವತಿಯಲ್ಲಿ ಕಳೆದ ಎರುಡು ವರ್ಷಗಳಿಂದ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಕೆಲಸ ನಿರ್ವಹಿಸುತ್ತಿದ್ದ ಸತೀಶ್ ಅವರು ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರಕ್ಕೆ ವರ್ಗಾವಣಿಯಾಗಿದ್ದರೂ ಸಹ ಕೆಲಸಕ್ಕೆ ಹೋಗದ ಕಾರಣ ಗ್ರಾಮೀಣಾಬಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅದೀನ ಕಾರ್ಯದರ್ಶಿ ಚೇತನ್.ಎಂ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.
ಸತೀಶ್ ಅವರು ಕಳೆದ ಮೂರು ತಿಂಗಳಿನಿಂದ ಯಲ್ಲಾಪುರಕ್ಕೆ ವರ್ಗಾವಣೆಯಾದರೂ ಸಹ ಹೋಗದ ಕಾರಣ ಸರಕಾರ ಹಲವಾರು ಬಾರಿ ವರ್ಗಾವಣೆಯಾದ ಸ್ಥಳಕ್ಕೆ ತೆರುಳುವಂತೆ ವಿಡಿಯೋ ಸಂವಾದ ಮೂಲಕ ಸೂಚನೆ ನೀಡಿತ್ತು. ಆದರೆ ಸರಕಾರದ ಆದೇಶವನ್ನು ದಿಕ್ಕರಿಸಿದ ಹಿನ್ನಲೆಯಲ್ಲಿ ಅಮಾನತುಗೊಳಿಸಿದೆ. ಅಲ್ಲದೆ ಸರಕಾರದ ಯೋಜನೆಗಳನ್ನು ಅನುಷ್ಟಾನಗೊಳಿಸುವದರಲ್ಲಿ ವಿಫಲರಾಗಿದ್ದಲ್ಲದೆ ಜೆಜೆಎಂ ಕಾಮಗಾರಿಗಳಲ್ಲಿ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ನಡೆಸಿ ಕಬಳಿಸಿದ್ದಾರೆಂದು ಇತ್ತೀಚಿಗೆ ಸ್ಥಳೀಯ ಶಾಸಕರು ತಾಲೂಕ ಪಂಚಾಯಿತಿ ಕೆಡಿಪಿ ಸಭೆಯಲ್ಲಿ ಅರೋಪಿಸಿದ್ದರು.
undefined
ಕರ್ನಾಟಕ ಪಬ್ಲಿಕ್ ಶಾಲಾ ಮಕ್ಕಳಿಗೆ ಸ್ಕೂಲ್ ಬಸ್ ಭಾಗ್ಯ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಅದೇ ರೀತಿಯಾಗಿ ಯಲ್ಲಾಪುರದ ಜಿಲ್ಲಾ ಪಂಚಾಯಿತಿ ಯೋಜನಾ ಉಪ ವಿಭಾಗದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರಾಗಿದ್ದ ರವಿ ರಾಂಪೂರೆ ಅವರು ಗಂಗಾವತಿ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಗೆ ಬಾರದ ಕಾರಣ ಇವರನ್ನು ಸಹ ಸರಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಅಮಾನತುಗೊಂಡ ಅಧಿಕಾರಿಗಳು ಸರಕಾರದ ಅನುಮತಿ ಇಲ್ಲದೇ ಕೇಂದ್ರ ಸ್ಥಾನವನ್ನು ಡುವಂತಿಲ್ಲ ಎಂದು ಆದೇಶದಲ್ಲಿ ಸೂಚಿಸಿದೆ.