ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಆ. 11 ರಂದು ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತ್ತು. ಮಾರಾಮಾರಿಯಲ್ಲಿ ಇಬ್ಬರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿದ್ದನು.
ಕೊಪ್ಪಳ(ಆ.21): ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಇಂದಿನಿಂದ ಮತ್ತೆ ಐದು ದಿನ ನಿಷೇಧಾಜ್ಞೆ ಮುಂದುವರಿಸಿ ಕೊಪ್ಪಳ ಉಪವಿಭಾಗ ಅಧಿಕಾರಿ ಬಸವಣ್ಣಪ್ಪ ಕಲಶೆಟ್ಟಿ ಆದೇಶ ಹೊರಡಿಸಿದ್ದಾರೆ. ಇಂದಿನಿಂದ ಮತ್ತೆ ಐದು ದಿನಗಳ ಕಾಲ ಹುಲಿಹೈದರ್ ಗ್ರಾಮದ ಸುತ್ತ 2 ಕಿಮೀ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಆ. 11 ರಂದು ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತ್ತು. ಮಾರಾಮಾರಿಯಲ್ಲಿ ಇಬ್ಬರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿದ್ದನು. ಹೀಗಾಗಿ ಆ. 11 ರಿಂದ 20 ರ ವರೆಗೂ 144 ಸೆಕ್ಷನ್ ಜಾರಿ ಮಾಡಲಾಗಿತ್ತು.
ಹುಲಿಹೈದರ ಘರ್ಷಣೆ: ಪ್ರೇಮ ವಿವಾಹವೇ ಗಲಾಟೆಗೆ ಕಾರಣವಾಯ್ತಾ!
ಇದೀಗ ಮತ್ತೆ ಹುಲಿಹೈದರ್ ಗ್ರಾಮದಲ್ಲಿ ಐದು ದಿನ 144 ಸೆಕ್ಷನ್ ಜಾರಿ ಮಾಡಲಾಗಿದ್ದು ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಐದು ದಿನ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಹುಲಿಹೈದರ್ ಗ್ರಾಮದಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದೆ ಅಂತ ಕೊಪ್ಪಳ ಉಪವಿಭಾಗ ಅಧಿಕಾರಿ ಬಸವಣ್ಣಪ್ಪ ಕಲಶೆಟ್ಟಿ ಮಾಹಿತಿ ನೀಡಿದ್ದಾರೆ.