ಚಿಕ್ಕವಡ್ಡಟ್ಟಿ ಹಿರೇವಡ್ಡಟ್ಟಿ ಭಾಗದಲ್ಲಿ ಕಾಣಿಸಿಕೊಂಡ ಬೆಂಕಿ| 150-200 ಹೆಕ್ಟೇರ್ ಪ್ರದೇಶ ಬೆಂಕಿಗೆ ಆಹುತಿ| ಸಂಪೂರ್ಣವಾಗಿ ಸುಟ್ಟು ಕರಕಲಾದ ಗುಡ್ಡದ ಮೇಲಿನ ಹುಲ್ಲು| ಕೆಲವು ಔಷಧ ಸಸ್ಯಗಳು, ಪ್ರಾಣಿಗಳು ಬೆಂಕಿಗೆ ಆಹುತಿ| ಪ್ರಾಣಭಯದಿಂದ ಪಲಾಯನಗೈದ ಜಿಂಕೆಗಳು|
ಡಂಬಳ(ಮಾ.21): ಹೋಬಳಿಯ ಕೆಲೂರ ಮತ್ತು ಹಿರೇವಡ್ಡಟ್ಟಿ ವ್ಯಾಪ್ತಿಯ ಕಪ್ಪತ್ತಗುಡ್ಡದಲ್ಲಿನ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಮತ್ತೆ ಬೆಂಕಿ ಬಿದ್ದಿದ್ದು ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟು ನಂದಿಸಿದ್ದಾರೆ.
ಶುಕ್ರವಾರ ಸಂಜೆ ಚಿಕ್ಕವಡ್ಡಟ್ಟಿ ಹಿರೇವಡ್ಡಟ್ಟಿ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. 150-200 ಹೆಕ್ಟೇರ್ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಗುಡ್ಡದ ಮೇಲಿನ ಹುಲ್ಲು ಸಂಪೂರ್ಣ ಸುಟ್ಟಿದೆ. ಕೆಲವು ಔಷಧ ಸಸ್ಯಗಳು, ಪ್ರಾಣಿಗಳು ಬೆಂಕಿಗೆ ಆಹುತಿಯಾಗಿವೆ. ಜಿಂಕೆಗಳು ಪ್ರಾಣಭಯದಿಂದ ಪಲಾಯನಗೈದಿವೆ.
undefined
ಗದಗ: ಕಪ್ಪತ್ತಗುಡ್ಡದ ಸಸ್ಯ ಆಹುತಿ ಪಡೆಯುತ್ತಿರುವ ಬೆಂಕಿ..!
ಮುಂಡರಗಿ ವಲಯ ಅರಣ್ಯ ಅಧಿಕಾರಿ ಪ್ರದೀಪ ಪವಾರ ನೇತೃತ್ವದಲ್ಲಿ ಶಿರಹಟ್ಟಿಅರಣ್ಯ ವಲಯದ ಅಧಿಕಾರಿಗಳು 30ಕ್ಕೂ ಹೆಚ್ಚು ಸಿಬ್ಬಂದಿ ಮತ್ತು ಮುಂಡರಗಿ ವಲಯದ 35ಕ್ಕೂ ಹೆಚ್ಚು ಸಿಬ್ಬಂದಿ ಸತತವಾಗಿ ಹರಸಾಹಸ ಪಟ್ಟು ಶನಿವಾರ ರಾತ್ರಿ ಬೆಂಕಿ ನಂದಿಸಿದ್ದಾರೆ. ಕೆಲವು ಸಿಬ್ಬಂದಿಗೆ ಗಾಯಗಳಾಗಿವೆ. ಕಿಡಿಗೇಡಿಗಳೇ ಬೆಂಕಿ ಹಾಕಿರಬಹುದು ಎಂದು ಶಂಕಿಸಲಾಗಿದೆ.