ಮಹಾರಾಷ್ಟ್ರದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ| ಉಜನಿ,ವೀರ್ ಜಲಾಶಯಗಳಿಂದ ಭೀಮಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ| ಯಾದಗಿರಿ ಜಿಲ್ಲೆಯಲ್ಲಿ ಮತ್ತೆ ಪ್ರವಾಹದ ಭೀತಿ| ನದಿ ತೀರದಲ್ಲಿರುವ ಕಂಗಳೇಶ್ವರ ದೇವಾಲಯ ಮುಳುಗಡೆಯಾಗಿದೆ| ಆತಂಕದಲ್ಲಿ ನದಿ ಪಾತರದ ಜನತೆ| ನದಿ ತೀರಕ್ಕೆ ತೆರಳದಂತೆ ಜಿಲ್ಲಾಡಳಿತ ಸೂಚನೆ|
ಯಾದಗಿರಿ(ಸೆ.29): ಮಹಾರಾಷ್ಟ್ರದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾದ ಪರಿಣಾಮ ಅಲ್ಲಿನ ಉಜನಿ,ವೀರ್ ಜಲಾಶಯಗಳಿಂದ ಭೀಮಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಹೀಗಾಗಿ ರಾಜ್ಯದ ಯಾದಗಿರಿ ಜಿಲ್ಲೆಯಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಉಜನಿ,ವೀರ್ ಜಲಾಶಯಗಳಿಂದ ಭಾರಿ ಪ್ರಮಾಣದಲ್ಲಿ ನೀರು ಬಿಟ್ಟಿದ್ದರಿಂದ ಯಾದಗಿರಿ ನಗರದ ಹೊರ ಭಾಗದ ಭೀಮಾ ನದಿಯಲ್ಲಿ ಭಾರಿ ನೀರಿನ ಹರಿವು ಹೆಚ್ಚಳಗಾಗಿದೆ. ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ನದಿ ತೀರದಲ್ಲಿರುವ ಕಂಗಳೇಶ್ವರ ದೇವಾಲಯ ಮುಳುಗಡೆಯಾಗಿದೆ. ಇದರಿಂದ ನದಿ ಪಾತ್ರದ ಜನರು ಆತಂಕ ಪಡುವಂತಾಗಿದೆ. ಹೀಗಾಗಿ ನದಿ ತೀರಕ್ಕೆ ತೆರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಭೀಮಾ ತೀರದಲ್ಲಿ ಮತ್ತೆ ಪ್ರವಾಹ ಭೀತಿ: ಆತಂಕದಲ್ಲಿ ಜನತೆ
ಇನ್ನು ಗುರುವಾರ ಹಾಗೂ ಶುಕ್ರವಾರ ಉಜನಿ ಜಲಾಶಯದಿಂದ 1. 73 ಲಕ್ಷ ಕ್ಯೂಸೆಕ್ ನೀರು ಬಿಟ್ಟಿದ್ದರಿಂದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ವ್ಯಾಪ್ತಿಯ ಭೀಮ ನದಿ ದಂಡೆ ಮೇಲಿನ ವಿವಿಧ ಗ್ರಾಮಗಳಲ್ಲಿ ಮತ್ತೆ ಪ್ರವಾಹದ ಭೀತಿ ಉಂಟಾಗಿತ್ತು. ಇಂಡಿ ತಾಲೂಕಿನ ಹಿಂಗಣಿ, ಚಣೆಗಾಂವ್ ಬಾಂದಾರಗಳ ಮೇಲೆ ನೀರು ನುಗ್ಗಿ ಜಲಾವೃತಗೊಂಡು ಬಾಂದಾರದ ಮೇಲಿನ ಸಂಚಾರ ಸ್ಥಗಿತಗೊಂಡಿತ್ತು.