ನರಗುಂದದಲ್ಲಿ ಮತ್ತೆ ಭೂಕುಸಿತ: ಕಂಗಾಲಾದ ಜನತೆ

Published : Nov 20, 2019, 04:13 PM IST
ನರಗುಂದದಲ್ಲಿ ಮತ್ತೆ ಭೂಕುಸಿತ: ಕಂಗಾಲಾದ ಜನತೆ

ಸಾರಾಂಶ

ನರಗುಂದ ಪಟ್ಟಣದ ಕಸಬಾ ಓಣಿಯಲ್ಲಿ ಮತ್ತೆ ಭೂಕುಸಿತ| ಭೂಕುಸಿತದಿಂದ  ಮನೆ ಬಿಟ್ಟು ಹೋದ ಮನೆ ಮನೆಯ ಮಾಲೀಕ| ಭೂಕುಸಿತದಿಂದ ಮನೆಯ ಗೋಡೆಗಳಲ್ಲಿ ಬಿರುಕು|   

ಗದಗ(ನ.20): ಕೆಲದಿನಗಳಿಂದ ಜಿಲ್ಲೆಯ ಹಲವೆಡೆ ಭೂಕುಸಿತ ಉಂಟಾಗುತ್ತಿದೆ. ಹೀಗಾಗಿ ಜನತೆ ಆತಂಕದಲ್ಲಿದ್ದಾರೆ. ಇದೀಗ ಮತ್ತೆ ಭೂಕುಸಿತವಾದ ಘಟನೆ ನರಗುಂದ ಪಟ್ಟಣದ ಕಸಬಾ ಓಣಿಯಲ್ಲಿ ಮಂಗಳವಾರ ನಡೆದಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಭೂಕುಸಿತ ಉಂಟಾಗಿದ್ದರಿಂದ ಮನೆಯ ಮಾಲೀಕ ಮನೆ ಬಿಟ್ಟು ಹೋಗಿದ್ದಾನೆ. ನಬೀಸಾಬ್ ಮೊಕಾಶಿ ಅವರ ಮನೆಯಲ್ಲಿ ಭೂಕುಸಿತ ಉಂಟಾಗಿದೆ. ಭೂಕುಸಿತದಿಂದ ಮನೆಯ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ಗ್ರಾಮಸ್ಥರಲ್ಲಿ ಆತಂಕ ಎದುರಾಗಿದೆ. 

ನರಗುಂದದಲ್ಲಿ ದಿಢೀರ್‌ ಭೂ ಕುಸಿತ: ನಿದ್ದೇ ಮಾಡೋಕು ಭಯ ಪಡ್ತಿದ್ದಾರೆ ಜನ!

ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ ಎಂಟನೇ ಬಾರಿ ಕುಸಿದ ಭೂಕುಸಿತ ಉಂಟಾಗಿದಡೆ. ಇದರಿಂದ ಜನರು ‌ಕಂಗಾಲಾಗಿದ್ದಾರೆ. ಕಳೆದ ಎರಡು ಮೂರು ತಿಂಗಳಲ್ಲಿ ನಿರಂತರವಾಗಿ ಮಳೆಯಾಗಿದ್ದರಿಂದ ಹೀಗೆ ಭೂಕುಸಿತ ಉಂಟಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳೇ ಉತ್ತರ ನೀಡಬೇಕಾಗಿದೆ. 
 

PREV
click me!

Recommended Stories

ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ