ಕಲಬುರಗಿ: 3 ಹೊಸ ರೈಲು ಓಡಿಸಲು ರೇಲ್ವೆ ಸಚಿವರಿಗೆ ಮಲ್ಲಿ​ಕಾ​ರ್ಜುನ ಖರ್ಗೆ ಪತ್ರ

By Kannadaprabha News  |  First Published May 26, 2023, 11:31 PM IST

ಕಲಬುರಗಿ- ಬೆಂಗಳೂರು ಮತ್ತು ಬೀದರ್‌- ಬೆಂಗಳೂರು ನಡುವೆ ರೈಲು ಸಂಚಾ​ರಕ್ಕೆ ಮಲ್ಲಿ​ಕಾ​ರ್ಜುನ ಖರ್ಗೆ ಪತ್ರ


ಕಲಬುರಗಿ(ಮೇ.26):  ಕಲಬುರಗಿ ಮತ್ತು ಬೆಂಗಳೂರು ನಡುವೆ ಎರಡು ನೂತನ ರೈಲುಗಳು ಹಾಗೂ ಬೀದರ್‌ ಮತ್ತು ಬೆಂಗಳೂರು ನಡುವೆ ಒಂದು ನೂತನ ರೈಲು ಓಡಿಸುವಂತೆ ಆಗ್ರಹಿಸಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಪತ್ರ ಬರೆದಿದ್ದಾರೆ.

Tap to resize

Latest Videos

undefined

ಕಲಬುರಗಿ - ಬೆಂಗಳೂರು ಹಾಗೂ ಬೀದರ್‌ - ಬೆಂಗಳೂರು ನಡುವಿನ ಪ್ರಯಾಣಿಕರ ದಟ್ಟಣೆಯ ಕುರಿತಂತೆ ವಿಸ್ತಾರವಾಗಿ ವಿವರಿಸಿರುವ ಖರ್ಗೆ ಅವರು ಕಲಬುರಗಿಯಿಂದ ಬೆಂಗಳೂರಿಗೆ ಪ್ರತಿನಿತ್ಯ ಸುಮಾರು 6000 ಪ್ರಯಾಣಿಕರು ಸಂಚರಿಸುತ್ತಿದ್ದು ಅವರಲ್ಲಿ ಬಹುತೇಕ ವಲಸೆ ಕೂಲಿ ಕಾರ್ಮಿಕರಾಗಿದ್ದಾರೆ. ಮೀಸಲು ಬೋಗಿಗಳಲ್ಲಿ ಆಸನ ಕಾಯ್ದಿರಿಸಲು ಹಣಕಾಸಿನ ದೃಷ್ಠಿಯಿಂದ ಅವರ ಶಕ್ತಿಗೆ ಮೀರಿದ್ದಾಗಿದ್ದು ಹಾಗಾಗಿ ಅವರು ಜನರಲ್‌ ಬೋಗಿಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಇದು ಜನದಟ್ಟಣೆ ಹೆಚ್ಚಾಗಲು ಕಾರಣವಾಗಿದ್ದು, ಪ್ರಯಾಣಿಕರು ಆಸನದ ಕೊರತೆಯಿಂದಾಗಿ ಹಾಸಲು ಮೇಲೆ ಮಲಗಿಕೊಂಡು ಪ್ರಯಾಣಿಸುತ್ತಿದ್ದಾರೆ. ಇದು ಪರಿಸ್ಥಿತಿ ಮತ್ತಷ್ಟುಉಲ್ಬಣಗೊಳ್ಳುವಂತೆ ಮಾಡಿದೆ.
ಪ್ರಸ್ತುತ ಕಲಬುರಗಿ ಹಾಗೂ ಬೆಂಗಳೂರು ನಡುವೆ ಪ್ರತಿನಿತ್ಯ ಉದ್ಯಾನ ಎಕ್ಸ್‌ಪ್ರೆಸ್‌, ಕರ್ನಾಟಕ ಎಕ್ಸ್‌ಪ್ರೆಸ್‌, ಎಕ್ಸ್‌ಪ್ರೆಸ್‌ ಪ್ರೆಸ್‌, ಸೋಲಾಪುರ- ಹಾಸನ ಎಕ್ಸ್‌ಪ್ರೆಸ್‌ ಮತ್ತು ಕೊಯಮತ್ತೂರು ಎಕ್ಸ್‌ಪ್ರೆಸ್‌ ಹೀಗೆ ಒಟ್ಟು 5 ರೈಲು ಸಂಚರಿಸುತ್ತಿವೆ.

ಮುಂದುವರಿದ ಕಾಂಗ್ರೆಸ್‌ ಗ್ಯಾರಂಟಿ ಗಲಾಟೆ..!

ಇವುಗಳೊಂದಿಗೆ ವಾರಕ್ಕೊಮ್ಮೆ ನಾಗರಕೋಯಿಲ್‌ ಎಕ್ಸ್‌ಪ್ರೆಸ್‌, ತುತೂಕುಡಿ ವಿವೇಕ ಎP್ಸ…ಪ್ರೆಸ್‌, ತಿರುವನಂತಪುರಂ ಸೆಂಟ್ರಲ್‌ ಎಕ್ಸ್‌ಪ್ರೆಸ್‌, ಎಂಜಿಆರ್‌ ಚೆನ್ನೈ ಎಕ್ಸ್‌ಪ್ರೆಸ್‌, ತಿರುವನಂತಪುರಂ ಸೆಂಟ್ರಲ್‌ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ಹಾಗೂ ಯಶವಂತಪುರ ಸುವಿಧಾ ಎಕ್ಸ್‌ಪ್ರೆಸ್‌ಮತ್ತು ಮೈಸೂರು ಸೆಂಟ್ರಲ್‌ ಸೂಪರ್‌ ಫಾಸ್ವ್‌ ಎಕ್ಸ್‌ಪ್ರೆಸ್‌ ವಾರದಲ್ಲಿ ಎರಡು ದಿನ ಸಂಚರಿಸುತ್ತದೆ. ಪ್ರಮುಖವಾಗಿ, ಕೋವಿಡ್‌ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಈ ಎಲ್ಲ ರೈಲುಗಳ ಬೋಗಿಗಳನ್ನು ಕಡಿತಗೊಳಿಸಲಾಗಿತ್ತು. ಈಗ ಪರಿಸ್ಥಿತಿ ಸುಧಾರಿಸಿದ್ದು ಪುನಃ ಕಡಿತಗೊಳಿಸಲಾದ ಬೋಗಿಗಳನ್ನು ಆಯಾ ರೈಲುಗಳಿಗೆ ಜೋಡಿಸುವುದು ಅತಿ ಅವಶ್ಯಕವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಪತ್ರದಲ್ಲಿ ವಿವರಿಸಿದ್ದಾರೆ.

ಬೀದರ್‌ ಹಾಗೂ ಬೆಂಗಳೂರು ನಡುವೆ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು ಈ ಎರಡು ನಗರಗಳಿಗೆ ನಿಗದಿಪಡಿಸಿದ ಮೀಸಲಿರಿಸಿರುವ ಆಸನಗಳ ಸಂಖ್ಯೆ ತೀರಾ ಕಡಿಮೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಕಲಬುರಗಿ- ಬೆಂಗಳೂರು ನಡುವೆ ಎರಡು ನೂತನ ರೈಲುಗಳು ಹಾಗೂ ಬೀರ್ದ- ಬೆಂಗಳೂರು ನಡುವೆ ಒಂದು ನೂತನ ರೈಲು ಓಡಿಸುವ ಅವಶ್ಯಕತೆ ಇದ್ದು ಇದರಿಂದ ಜನಸಂದಣಿ ಕಡಿಮೆಯಾಗುವುದರ ಜೊತೆಗೆ ಪ್ರಯಾಣಿಕರು ಎದುರಿಸುತ್ತಿರುವ ಅನಾನುಕೂಲತೆ ಕಡಿಮೆಯಾಗಲಿದೆ ಎಂದೂ ಪತ್ರದ ಮೂಲಕ ಖರ್ಗೆ ಅವರು ರೇಲ್ವೆ ಸಚಿವರ ಗಮನ ಸೆಳೆದಿದ್ದಾರೆ.

click me!