ಬೈಂದೂರು, ಕಾರವಾರದಲ್ಲಿ ವಿಮಾನ ನಿಲ್ದಾಣ

Kannadaprabha News   | Asianet News
Published : Mar 22, 2021, 08:52 AM ISTUpdated : Mar 22, 2021, 08:57 AM IST
ಬೈಂದೂರು, ಕಾರವಾರದಲ್ಲಿ ವಿಮಾನ ನಿಲ್ದಾಣ

ಸಾರಾಂಶ

ಬೈಂದೂರು, ಕಾರವಾರದಲ್ಲಿ ನಾಗರಿಕ ವಿಮಾನ ನಿಲ್ದಾಣಗಳನ್ನು ಸ್ಥಾಪಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಜಗದಿಶ್ ಶೆಟ್ಟರ್ ಹೇಳಿದ್ದಾರೆ. 

ಮಂಗಳೂರು (ಮಾ.22):  ಕೇಂದ್ರ ಸರ್ಕಾರದ ಉಡಾನ್‌ ಯೋಜನೆಯ ಮುಂದುವರಿದ ಭಾಗವಾಗಿ ಬೈಂದೂರು, ಕಾರವಾರದಲ್ಲಿ ನಾಗರಿಕ ವಿಮಾನ ನಿಲ್ದಾಣಗಳನ್ನು ಸ್ಥಾಪಿಸಲು ಚಿಂತನೆ ನಡೆಸಲಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ. 

ಫೆಡರೇಶನ್‌ ಆಫ್‌ ಇಂಡಿಯನ್‌ ಚೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರಿ (ಫಿಕ್ಕಿ) ವತಿಯಿಂದ ನಗರದಲ್ಲಿ ಭಾನುವಾರ ‘ಕರ್ನಾಟಕ ಕೋಸ್ಟ್‌ ಲೈನ್‌ ಬ್ಯುಸಿನೆಸ್‌ ಕಾನ್‌ಕ್ಲೇವ್‌’ ಉದ್ಘಾಟಿಸಿದ ಅವರು, ವಿಮಾನ ನಿಲ್ದಾಣಗಳು ಆರಂಭವಾದರೆ ಮುಂದಿನ ದಿನಗಳಲ್ಲಿ ವ್ಯಾಪಾರ-ವಹಿವಾಟಿಗೆ ಸಹಕಾರಿಯಾಗಲಿದೆ ಎಂದರು.

ಕೊಪ್ಪಳ ಉಡಾನ್‌ಗೆ ಎಂಎಸ್‌ಪಿಎಲ್‌ ಷರತ್ತುಬದ್ಧ ಸಮ್ಮತಿ

ಬಂದರು ಅಭಿವೃದ್ಧಿಗೆ ವರದಿ:  ಪ್ರಸ್ತುತ ಸರಕು ರಫ್ತು ಮಾಡಲು ಚೆನ್ನೈ ಬಂದರನ್ನು ಹೆಚ್ಚಾಗಿ ಅವಲಂಬಿಸಿದ್ದಾರೆ. ಮಂಗಳೂರು ಬಂದರಿನತ್ತ ರಫ್ತುದಾರರನ್ನು ಆಕರ್ಷಿಸಲು ಬೇಕಾದ ಅಭಿವೃದ್ಧಿ ಕೆಲಸಗಳ ವರದಿ ನೀಡಿದರೆ ಅದನ್ನು ಕಾರ್ಯಗತಗೊಳಿಸಲು ಸರ್ಕಾರ ಬದ್ಧವಾಗಿದೆ. ಬೇಲೆಕೇರಿ ಬಂದರನ್ನು ಅಭಿವೃದ್ಧಿಗೊಳಿಸಿದರೆ ಇಡೀ ಉತ್ತರ ಕರ್ನಾಟಕದ ಸರಕು ರಫ್ತಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಬೇಲೆಕೇರಿ ಬಂದರು ಅಭಿವೃದ್ಧಿಗೆ ಡಿಪಿಆರ್‌ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು.

PREV
click me!

Recommended Stories

ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಹೊಸ ಮಾರ್ಗಗಳಿಗೆ ಬರಲಿವೆ ಚಾಲಕ ರಹಿತ ರೈಲು