3 ದಿನಗಳ ಕಾಲ ಅರಣ್ಯದಲ್ಲಿಎಲೆಗಳನ್ನೇ ತಿಂದು ಬದುಕಿದ ಐಸಮ್ಮ!

By Kannadaprabha News  |  First Published Mar 9, 2023, 12:58 PM IST

ಫೆ.28ರಂದು ಸಂಜೆ ವೇಳೆ ನಾಪತ್ತೆಯಾಗಿದ್ದ ಕೌಕ್ರಾಡಿ ಗ್ರಾಮದ ಹೊಸಮಜಲು ಸಮೀಪದ ದೋಂತಿಲ ನಿವಾಸಿ ಐಸಮ್ಮ (80) ಅವರು, ಮನೆಯಿಂದ ಸುಮಾರು 4 ಕಿ.ಮೀ. ದೂರದಲ್ಲಿರುವ ಅರಣ್ಯಪ್ರದೇಶದಲ್ಲಿ ಪತ್ತೆಯಾಗಿದ್ದಾರೆ. ಅರಣ್ಯದಲ್ಲೇ ಮೂರು ರಾತ್ರಿ ಹಾಗೂ ಎರಡು ಹಗಲು ಕಳೆದಿರುವ ಐಸಮ್ಮ ಕಾಡಿನಲ್ಲಿದ್ದ ಎಲೆಗಳನ್ನೇ ತಿಂದು ಸುರಕ್ಷಿತವಾಗಿ ಮನೆ ಸೇರಿರುವುದರಿಂದ ಮನೆಯವರು ನಿಟ್ಟುಸಿರು ಬಿಟ್ಟಿದ್ದಾರೆ.


ಉಪ್ಪಿನಂಗಡಿ (ಮಾ.9) : ಫೆ.28ರಂದು ಸಂಜೆ ವೇಳೆ ನಾಪತ್ತೆಯಾಗಿದ್ದ ಕೌಕ್ರಾಡಿ ಗ್ರಾಮದ ಹೊಸಮಜಲು ಸಮೀಪದ ದೋಂತಿಲ ನಿವಾಸಿ ಐಸಮ್ಮ (80) ಅವರು, ಮನೆಯಿಂದ ಸುಮಾರು 4 ಕಿ.ಮೀ. ದೂರದಲ್ಲಿರುವ ಅರಣ್ಯಪ್ರದೇಶದಲ್ಲಿ ಪತ್ತೆಯಾಗಿದ್ದಾರೆ. ಅರಣ್ಯದಲ್ಲೇ ಮೂರು ರಾತ್ರಿ ಹಾಗೂ ಎರಡು ಹಗಲು ಕಳೆದಿರುವ ಐಸಮ್ಮ ಕಾಡಿನಲ್ಲಿದ್ದ ಎಲೆಗಳನ್ನೇ ತಿಂದು ಸುರಕ್ಷಿತವಾಗಿ ಮನೆ ಸೇರಿರುವುದರಿಂದ ಮನೆಯವರು ನಿಟ್ಟುಸಿರು ಬಿಟ್ಟಿದ್ದಾರೆ.

ಐಸಮ್ಮ ಅವರು ತುಸು ಮಾನಸಿಕ ಅಸ್ವಸ್ಥೆಯಿಂದ ಬಳಲುತ್ತಿದ್ದರು. ವಯೋ ಸಹಜವಾಗಿ ಮಾತನಾಡುವುದು ಕಡಿಮೆಯಾಗಿತ್ತು. ಆದರೆ ತಮ್ಮ ನೆರೆಯ ಮನೆಗಳಿಗೆ ನಿತ್ಯವೂ ಭೇಟಿ ನೀಡಿ ಅವರೊಂದಿಗೆ ಬೆರೆತು ರಾತ್ರಿಯಾಗುತ್ತಲೇ ತಮ್ಮ ಮನೆ ಸೇರುತ್ತಿದ್ದರು. ಎಂದಿನಂತೆ ಫೆ.28ರಂದು ಸಂಜೆ ಮನೆಯಿಂದ ಹೊರಟವರು ನಾಪತ್ತೆಯಾಗಿದ್ದರು. ರಾತ್ರಿಯಾದರೂ ಐಸಮ್ಮ ಅವರು ಮನೆಗೆ ವಾಪಸ್‌ ಬರಲಿಲ್ಲ. ಅವರ ಮಗ ಮಹಮ್ಮದ್‌ ಹಾಗೂ ಸ್ಥಳೀಯ ಯುವಕರು ನೆರೆಮನೆಗಳಲ್ಲಿ, ಹೊಸಮಜಲು ಪೇಟೆಯ ಅಂಗಡಿಗಳಲ್ಲಿ ವಿಚಾರಿಸಿ ಹುಡುಕಾಡೀದರೂ ಪತ್ತೆಯಾಗಿರಲಿಲ್ಲ.

Tap to resize

Latest Videos

ಚಾಮುಂಡಿಬೆಟ್ಟ ಸೇರಿ 4 ಕಡೆ ಕಾಳ್ಗಿಚ್ಚು: ಅಪಾರ ಪ್ರಮಾಣದ ಅರಣ್ಯ ಪ್ರದೇಶ ಬೆಂಕಿಗೆ ಆಹುತಿ

ಏರ್ತಿಲ ಅರಣ್ಯದಲ್ಲಿ ಪತ್ತೆ: ಮಾ.3ರಂದು ಬೆಳಗ್ಗೆ ಹೊಸಮಜಲು ಹಾಲಿನ ಸೊಸೈಟಿಗೆ ಹಾಲು ತರುತ್ತಿದ್ದ ಶಿಜು ಎಂಬವರಿಗೆ ಮಣ್ಣಗುಂಡಿ ಸಮೀಪದ ಏರ್ತಿಲ ಎಂಬಲ್ಲಿ ರಕ್ಷಿತಾರಣ್ಯದಲ್ಲಿ ವೃದ್ಧೆಯೋರ್ವರು ಅಲೆದಾಡುತ್ತಿರುವುದು ಕಂಡಿದೆ. ಅವರು ನೀಡಿದ ಮಾಹಿತಿಯಂತೆ ಅರಣ್ಯದಲ್ಲಿ ಹುಡುಕಾಡಿದಾಗ ನಾಪತ್ತೆಯಾಗಿದ್ದ ಐಸಮ್ಮ ಕಂಡು ಬಂದರು. ಅವರನ್ನು ಬಳಿಕ ಮನೆಗೆ ಕರೆದುಕೊಂಡು ಬರಲಾಯಿತು.

click me!