ಮಂಗಳೂರು ಗಲಭೆಯಲ್ಲಿ ಕಾನೂನು ಸ್ಪಷ್ಟಉಲ್ಲಂಘನೆ ಮಾಡಿದ್ದಲ್ಲದೆ, ಗಲಭೆ ಸೃಷ್ಟಿಸಿ ಹಿಂಸಾಚಾರದಲ್ಲಿ ತೊಡಗಿದ್ದರು. ಈ ಬಗ್ಗೆ ಪೊಲೀಸ್ ಇಲಾಖೆ ಸಮಗ್ರ ದಾಖಲೆಗಳನ್ನು ಹೊಂದಿದ್ದು, ಈ ಪ್ರಕರಣದ ಸಂಪೂರ್ಣ ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ ಎಂದು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್. ಹರ್ಷ ಪ್ರತಿಕ್ರಿಯಿಸಿದ್ದಾರೆ.
ಮಂಗಳೂರು(ಜ.12): ನಗರದಲ್ಲಿ ಸೆಕ್ಷನ್ 144ರನ್ವಯ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಕೆಲವು ಸಂಘಟನೆಗಳು ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಕಾನೂನು ಸ್ಪಷ್ಟಉಲ್ಲಂಘನೆ ಮಾಡಿದ್ದಲ್ಲದೆ, ಗಲಭೆ ಸೃಷ್ಟಿಸಿ ಹಿಂಸಾಚಾರದಲ್ಲಿ ತೊಡಗಿದ್ದರು. ಈ ಬಗ್ಗೆ ಪೊಲೀಸ್ ಇಲಾಖೆ ಸಮಗ್ರ ದಾಖಲೆಗಳನ್ನು ಹೊಂದಿದ್ದು, ಈ ಪ್ರಕರಣದ ಸಂಪೂರ್ಣ ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ ಎಂದು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್. ಹರ್ಷ ಪ್ರತಿಕ್ರಿಯಿಸಿದ್ದಾರೆ.
ಮಂಗಳೂರು ಗಲಭೆ ಸಂಬಂಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಿಡಿ ಬಿಡುಗಡೆಗೊಳಿಸಿದ ಹಿನ್ನೆಲೆಯಲ್ಲಿ ಶನಿವಾರ ಪೊಲೀಸ್ ಕಮಿಷನರ್ ಡಾ.ಹರ್ಷ ಈ ಸ್ಪಷ್ಟನೆ ನೀಡಿದ್ದಾರೆ.
undefined
ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಗ್ಯಾಂಗ್‌ಸ್ಟರ್ ಪರಾರಿ: ಮಂಗಳೂರಲ್ಲಿ ಹೈಅಲರ್ಟ್
ಗಲಭೆಕೋರರ ಗುಂಪು ಹಿಂಸಾಚಾರಕ್ಕೆ ತೊಡಗಿದಾಗ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಶಾಂತಿ-ಸುವ್ಯವಸ್ಥೆ ಪುನರ್ ಸ್ಥಾಪಿಸುವಲ್ಲಿ ಶ್ರಮಿಸಿದ್ದಾರೆ. ಈ ಘಟನೆ ಸಂಬಂಧಿಸಿ ಕೆಲವು ದೃಶ್ಯಾವಳಿಗಳನ್ನು ಈಗಾಗಲೇ ಮಂಗಳೂರು ನಗರ ಪೊಲೀಸ್‌ನ ಅಧಿಕೃತ ಫೇಸ್‌ಬುಕ್‌ನಲ್ಲಿ ಹಾಕಲಾಗಿದೆ. ಇದಕ್ಕೆ ಸಾರ್ವಜನಿಕರು ಉತ್ತಮವಾಗಿ ಸ್ಪಂದಿಸಿ ಹಿಂಸಾಚಾರಕ್ಕೆ ಸಂಬಂಧಿಸಿದ ವಿಡಿಯೋ, ದಾಖಲೆಗಳನ್ನು ಕಳುಹಿಸಿ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ಘಟನೆಯನ್ನು ಎಳೆಎಳೆಯಾಗಿ ದೃಶ್ಯ, ಪತ್ರಿಕಾ ಮಾಧ್ಯಮಗಳು ಎಳೆಎಳೆಯಾಗಿ ಬಿಡಿಸಿಟ್ಟಿವೆ ಎಂದು ಕಮಿಷನರ್ ಹೇಳಿದ್ದಾರೆ.
ಸೀಕ್ವೆನ್ಸ್ ಬದಲಿಸಿ ವಿಡಿಯೋ ಬಿಡುಗಡೆ ಮಾಡಿದ್ರಾ ಕುಮಾರಸ್ವಾಮಿ..?
ಆದರೆ ಘಟನೆಯ ಬಗ್ಗೆ ಕೆಲವರು ಅನುಕ್ರಮಗಳು ಮತ್ತು ಪರಿಪೂರ್ಣತೆಯಿಲ್ಲದ ಕೆಲವು ಆಯ್ದ ತುಣುಕುಗಳನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದಾರೆ. ಸಮರ್ಪಕ ಮಾಹಿತಿ ನೀಡದ ಈ ತುಣುಕುಗಳನ್ನು ಸಂಪೂರ್ಣ ಆಡಿಯೋ ದೃಶ್ಯದೊಂದಿಗೆ ನೋಡಬೇಕಾಗಿ ಮತ್ತು ಸರಿಯಾಗಿ ಪರಿಶೀಲಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಸ್ವತಂತ್ರ ತನಿಖಾ ಸಂಸ್ಥೆಗಳಾದ ಸಿಐಡಿ ಮತ್ತು ಮ್ಯಾಜಿಸ್ಪ್ರೇಟ್ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದು, ಎಲ್ಲ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿದೆ. ಸಂಪೂರ್ಣ ತನಿಖೆಯಾದ ಬಳಿಕ ಘಟನೆಯ ಸತ್ಯಾಸತ್ಯತೆ ತಿಳಿದು ಬರಲಿದೆ ಎಂದು ಕಮಿಷನರ್ ಹೇಳಿದರು.