ಸಿಎಂ ಬೊಮ್ಮಾಯಿಗೆ ನೈತಿಕತೆ ಇದ್ದರೆ ಪರಿಹಾರ ನೀಡಲಿ: ಗುಡಿಹಳ್ಳಿ ಹಾಲೇಶ

By Kannadaprabha News  |  First Published Jul 13, 2022, 10:47 AM IST

*  ಭೂ ಪರಿಹಾರಕ್ಕೆ ಒತ್ತಾಯ 2ನೇ ದಿನಕ್ಕೆ ಕಾಲಿಟ್ಟ ಮುಷ್ಕರ
*  ರಾಜ್ಯದಲ್ಲಿರುವ ನೀರಾವರಿ ಯೋಜನೆಗಳಲ್ಲಿ ಕೋಟಿ ಕೋಟಿ ಲೂಟಿ ಮಾಡುತ್ತಿರುವ ಸರ್ಕಾರ
*  ರೈತರ ಬಗ್ಗೆ ಕಾಳಜಿ ತೋರದ ರಾಜ್ಯ ಸರ್ಕಾರ 


ಹೂವಿನಹಡಗಲಿ(ಜು.13): ಇಲ್ಲಿನ ಸಿಂಗಟಾಲೂರು ಏತ ನೀರಾವರಿ ಕಚೇರಿಯ ಮುಂದೆ ರೈತ ಸಾಮೂಹಿಕ ಸಂಘಟನೆಗಳ ಒಕ್ಕೂಟ ನಡೆಸುತ್ತಿರುವ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ಅಖಿಲ ಭಾರತ ಕಿಸಾನ್‌ಸಭಾ ಜಿಲ್ಲಾಧ್ಯಕ್ಷ ಗುಡಿಹಳ್ಳಿ ಹಾಲೇಶ ಮಾತನಾಡಿ, ಈ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಮುನ್ನ ರೈತರ ಪರವಾಗಿದ್ದೇವೆ ಎಂದು ಭರವಸೆ ನೀಡಿ, ನಂತರದಲ್ಲಿ ಮತ ಹಾಕಿದ ರೈತರನ್ನೇ ಮರೆಯುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿಗೆ ಮುಖ್ಯಮತ್ರಿ ಸ್ಥಾನದಲ್ಲಿ ಕುಳಿತುಕೊಳ್ಳುವ ನೈತಿಕತೆ ಇದ್ದರೆ ಮೊದಲು ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡಲಿ ಎಂದು ಸವಾಲು ಹಾಕಿದರು.

ರಾಜ್ಯದಲ್ಲಿರುವ ನೀರಾವರಿ ಯೋಜನೆಗಳಲ್ಲಿ ಕೋಟಿ ಕೋಟಿ ಲೂಟಿ ಮಾಡುತ್ತಿರುವ ಈ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲ. ಕಳೆದ 20 ವರ್ಷಗಳಿಂದ ರೈತರು ಪರಿಹಾರಕ್ಕೆ ಅಲೆಡುತ್ತಿದ್ದಾರೆ. ಆದರೆ, ಆಡಳಿತ ಮಾಡಿರುವ ಸರ್ಕಾರಕ್ಕೆ ಪರಿಹಾರ ನೀಡದೇ ನಿರ್ಲಕ್ಷ್ಯ ತಾಳಿದ್ದಾರೆ. ಈಗಲ್ಲಾದರೂ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಿಂಗಟಾಲೂರು ಏತ ನೀರಾವರಿ ಯೋಜನೆಯ ಹಿನ್ನೀರು ಮತ್ತು ಕಾಲುವೆ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

Tap to resize

Latest Videos

undefined

ತುಂಗಭದ್ರಾ ಡ್ಯಾಂಗೆ ಹೆಚ್ಚಿದ ಒಳ ಹರಿವು: ಬರೀ 11 ದಿನದಲ್ಲಿ 50 ಟಿಎಂಸಿ ನೀರು ಸಂಗ್ರಹ

ನೀರಾವರಿ ಇಲಾಖೆಗೆ ಭೂಸ್ವಾಧೀನಾ ಪಡಿಸಿಕೊಂಡಿರುವ ಕಡತಗಳು, ಬೆಂಗಳೂರು ಸೇರಿದಂತೆ ವಿವಿಧ ವಿಭಾಗಗಳ ಇಲಾಖೆಗಳಲ್ಲಿ ಧೂಳು ತಿನ್ನುತ್ತಿವೆ. ಈ ಅಧಿಕಾರಿಗಳು ಸಮರ್ಪಕ ರೀತಿಯಲ್ಲಿ ಕೆಲಸ ನಿರ್ವಹಿಸದೆ ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದೆ ಎಂದರು.

ಮತದಾರರಿಂದ ಮತ ಭಿಕ್ಷೆ ಪಡೆದು ಸಂವಿಧಾನದ ಪ್ರಕಾರ ಅಧಿಕಾರ ಮಾಡುತ್ತಿರುವ, ಈ ಸರ್ಕಾರಗಳು ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ. ನಿಯಮಗಳ ಪ್ರಕಾರ ರೈತರಿಗೆ ನೀಡಬೇಕಾದ ಪರಿಹಾರದ ಕಡತಗಳನ್ನು, ವಿಲೇವಾರಿ ಮಾಡಲು ಇಲ್ಲಿನ ವಿಶೇಷ ಭೂ ಸ್ವಾಧೀನಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೇ ಇಲ್ಲ ಮೊದಲು ಹುದ್ದೆಗಳನ್ನು ಭರ್ತಿ ಮಾಡಿ ರೈತರ ಕೆಲಸ ಮಾಡಲು ಅನುಕೂಲ ಮಾಡಬೇಕು ಎಂದು ಆಗ್ರಹಿಸಿದರು.

ಕ್ಷೇತ್ರದ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಹರಪನಹಳ್ಳಿ-ಹೂವಿನಹಡಗಲಿ ಕ್ಷೇತ್ರದಲ್ಲಿ ಸೇರಿ 4 ಬಾರಿ ಶಾಸಕರಾಗಿ ಸಚಿವರಾಗಿದ್ದಾರೆ. ಆದರೆ, ಸಿಂಗಟಾಲೂರು ಏತ ನೀರಾವರಿ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಕೊಡಿಸುವಲ್ಲಿ ಹಿಂದೇಟು ಹಾಕುತ್ತಿದ್ದಾರೆ. ನಿಮ್ಮ ದುರಂಹಕಾರದ ಆಡಳಿತ ಬಹಳ ದಿನ ನಡೆಯುವುದಿಲ್ಲ. ಯೋಜನೆ ಕಳಪೆಯಾಗಿದ್ದರೂ ವಿಧಾನಸೌಧದಲ್ಲಿ ಮಾತನಾಡಿಲ್ಲ. ಕ್ಷೇತ್ರದಲ್ಲಿ ಕೇವಲ ರಸ್ತೆ ಮಾಡಿ ಸೈ ಎನಿಸಿಕೊಂಡರೆ ಸಾಲದು, ಮೊದಲು ರೈತರ ಬಗ್ಗೆ ಧ್ವನಿ ಎತ್ತುವ ಕೆಲಸ ಮಾಡಲಿ ಎಂದು ಹೇಳಿದರು.

Vijayanagara News: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕ ಕಿಡ್ನಾಪ್: ಸಿನಿಮೀಯ ಶೈಲಿಯಲ್ಲಿ ಅಪಹರಣಕಾರರ ಬಂಧನ

ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಗೆಲ್ಲುವುದಕ್ಕಿಂತ ಮುನ್ನ ಸಿಂಗಟಾಲೂರು ಏತ ನೀರಾವರಿ ಯೋಜನೆ, ವಿಸ್ತರಣೆ ಮಾಡುತ್ತೇನೆ ಎಂದು ನೀಡಿದ್ದ ಭರವಸೆ ಇನ್ನೂ ಈಡೇರಿಲ್ಲ. ಎಲ್ಲ ಪಕ್ಷದ ಶಾಸಕರು ಪಕ್ಷಾತೀತವಾಗಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಅವರೆಲ್ಲ ರೈತರ ಸಮಸ್ಯೆಯನ್ನು ಆಲಿಸದೇ ಭರವಸೆಯಲ್ಲೇ ಕಾಲ ಕಳೆಯುತ್ತಾರೆ ಎಂದು ದೂರಿದರು.

ಎಐಕೆಎಸ್‌ನ ಸಂಚಾಲಕ ಸುರೇಶ ಹಲಗಿ ಮಾತನಾಡಿ, ಭೂ ಪರಿಹಾರಕ್ಕಾಗಿ ನಡೆಯುತ್ತಿರುವ ಮುಷ್ಕರ 2ನೇ ದಿನಕ್ಕೆ ಕಾಲಿಟ್ಟಿದ್ದು, ಬುಧವಾರ ರೈತರು ಕುಟುಂಬ ಸಮೇತರಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ಸ್ಥಳಕ್ಕೆ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ, ತಹಸೀಲ್ದಾರ್‌ ಸೇರಿದಂತೆ ಸಂಬಂಧ ಪಟ್ಟಅಧಿಕಾರಿಗಳು ಆಗಮಿಸಿ ಸಮಸ್ಯೆ ಆಲಿಸದಿದ್ದರೇ ಪ್ರತಿಭಟನೆ ಹಾಗೆಯೆ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಎಐಟಿಯುಸಿ ಸಂಚಾಲಕ ಶಾಂತರಾಜ್‌ ಜೈನ್‌, ರಾಜ್ಯ ಈರುಳ್ಳಿ ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಎನ್‌.ಎಂ. ಸಿದ್ದೇಶ, ಎಐಕೆಎಸ್‌ನ ಮುಕುಂದಗೌಡ, ಜೆಡಿಎಸ್‌ ಮುಖಂಡ ಪುತ್ರೇಶ, ಎಸ್‌.ಎಂ. ಶಿವಲಿಂಗಯ್ಯ ಸೇರಿದಂತೆ ಹೊಸಹಳ್ಳಿ, ಅಂಗೂರು ಗ್ರಾಮಗಳ ರೈತರು ಭಾಗವಹಿಸಿದ್ದರು.

click me!