ಮಂಗಳೂರಲ್ಲಿ ಎಲ್ಲ ಪೆಟ್ರೋಲ್ ಬಂಕ್ ಬಂದ್‌..!

By Suvarna News  |  First Published Dec 20, 2019, 11:47 AM IST

ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆ ಮಂಗಳೂರಿನಲ್ಲಿ ತೀವ್ರ ಸ್ವರೂಪ ಪಡೆದುಕೊಂಡ ಪರಿಣಾಮ ಕರ್ಫ್ಯೂ ಜಾರಿ ಮಾಡಲಾಗಿದ್ದು, ಇದೀಗ ಮುಂಜಾಗೃತಾ ಕ್ರಮವಾಗಿ ಎಲ್ಲಾ ಪೆಟ್ರೋಲ್‌ ಬಂಕ್‌ಗಳನ್ನೂ ಬಂದ್ ಮಾಡಲಾಗಿದೆ.


ಮಂಗಳೂರು(ಡಿ.20): ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆ ಮಂಗಳೂರಿನಲ್ಲಿ ತೀವ್ರ ಸ್ವರೂಪ ಪಡೆದುಕೊಂಡ ಪರಿಣಾಮ ಕರ್ಫ್ಯೂ ಜಾರಿ ಮಾಡಲಾಗಿದ್ದು, ಇದೀಗ ಮುಂಜಾಗೃತಾ ಕ್ರಮವಾಗಿ  ಎಲ್ಲಾ ಪೆಟ್ರೋಲ್‌ ಬಂಕ್‌ಗಳನ್ನೂ ಬಂದ್ ಮಾಡಲಾಗಿದೆ.

ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹಿಂಸಾಚಾರ ವಿಚಾರವಾಗಿ ಎಲ್ಲಡೆ ಕಟ್ಟೆಚ್ಚರ ವಹಿಸಲಾಗಿದ್ದು, ಕರ್ಫ್ಯೂ ಜಾರಿ ಮಾಡಲಾಗಿದೆ. ಹಾಗೆಯೇ ಸುರಕ್ಷತಾ ದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಮಂಗಳೂರು ನಗರದಾದ್ಯಂತ ಪೆಟ್ರೋಲ್ ಪಂಪ್‌ಗಳು ಬಂದ್ ಮಾಡಲಾಗಿದೆ.

Tap to resize

Latest Videos

undefined

ಮಂಗಳೂರು ಹಿಂಸಾಚಾರ ಪೊಲೀಸರ ಪ್ಲಾನ್‌ ಎಂದ ಎಂಎಲ್‌ಸಿ

ಅಹಿತಕರ ಘಟನೆಗೆ ಪೆಟ್ರೋಲ್ ಬಳಸುವ ಸಾಧ್ಯತೆ ಇರುವುದರಿಂದ ಪೆಟ್ರೋಲ್ ಪಂಪ್ ಗಳನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಪೆಟ್ರೋಲ್ ಪಂಪ್‌ಗಳು ಬಂದ್ ಆಗಿವೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುರುವಾರ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ನಂತರದಲ್ಲಿ ಪೊಲೀಸರು ಲಾಠಿ ಚಾರ್ಜ್, ಗೋಲಿಬಾರ್ ನಡೆಸಿದ್ದಾರೆ. ಮಂಗಳೂರಿನಲ್ಲಿ ಪೌರತ್ವದ ಕಿಚ್ಚಿಗೆ ಇಬ್ಬರು ಬಲಿಯಾಗಿದ್ದಾರೆ.

ಮಂಗಳೂರು: ಮಾಧ್ಯಮದ ಹೆಸರಲ್ಲಿ ಕೇರಳದಿಂದ ಬಂದವರ ಬಂಧನ

ಡಿಸೆಂಬರ್ 20ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!