ಸಮಾಜದ ಎಲ್ಲಾ ಕ್ಷೇತ್ರಗಳು ಕೂಡ ಇಂದು ತಾಂತ್ರಿಕತೆಯನ್ನು ಹೆಚ್ಚು ಅವಲಂಬಿಸಿರುವುದರಿಂದ ಎಂಜಿನಿಯರಿಂಗ್ ಓದುವ ವಿದ್ಯಾರ್ಥಿಗಳು ಹೆಚ್ಚು ಕೌಶಲ್ಯಗಳನ್ನು ಬೆಳೆಸಿಕೊಂಡು ಗುಣಮಟ್ಟದ ಶಿಕ್ಷಣ ಪಡೆಯಬೇಕಿದೆಯೆಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಚಿಕ್ಕಬಳ್ಳಾಪುರ (ಡಿ.06): ಸಮಾಜದ ಎಲ್ಲಾ ಕ್ಷೇತ್ರಗಳು ಕೂಡ ಇಂದು ತಾಂತ್ರಿಕತೆಯನ್ನು ಹೆಚ್ಚು ಅವಲಂಬಿಸಿರುವುದರಿಂದ ಎಂಜಿನಿಯರಿಂಗ್ ಓದುವ ವಿದ್ಯಾರ್ಥಿಗಳು ಹೆಚ್ಚು ಕೌಶಲ್ಯಗಳನ್ನು ಬೆಳೆಸಿಕೊಂಡು ಗುಣಮಟ್ಟದ ಶಿಕ್ಷಣ ಪಡೆಯಬೇಕಿದೆಯೆಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ನಗರದ ಹೊರ ವಲಯದ ಎಸ್ ಜೆ ಸಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೋಮವಾರ ಬಿ.ಜಿ.ಎಸ್ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದ್ದ 2022-23ನೇ ಸಾಲಿನ ಪ್ರಥಮ ವರ್ಷದ ಬಿ.ಇ ವಿದ್ಯಾರ್ಥಿಗಗಳ ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮತನಾಡಿದರು.
ಸಂಶೋಧನೆಯತ್ತ ಒಲವಿರಬೇಕು ಎಲ್ಲ ವೃತ್ತಿಗಳಿಗಿಂತ ಎಂಜಿನಿಯರ್ ವೃತ್ತಿ ಇಂದು ಅತ್ಯಂತ ವಿಭಿನ್ನ ಹಾಗೂ ಮಹತ್ವವಾದದು. ಸಮಾಜ ಪ್ರತಿ ನಿತ್ಯ ಒಂದಲ್ಲ ಒಂದು ಸಮಸ್ಯೆ, ಸವಾಲುಗಳನ್ನು ಎದುರಿಸುತ್ತಿದೆ. ಅದಕ್ಕೆ ಪರಿಹಾರ ಕಂಡು ಹಿಡಿಯುವ ನಿಟ್ಟಿನಲ್ಲಿ ತಾಂತ್ರಿಕ ಕ್ಷೇತ್ರ ನೆರವಾಗಬೇಕಿದೆ. ಆದ್ದರಿಂದ ಬಿ.ಇ ಓದುವ ವಿದ್ಯಾರ್ಥಿಗಳಿಗೆ ಸಂಶೋಧನೆ ಕಡೆಗೆ ತುಡಿತ ಇರಬೇಕು. ಗ್ರಾಮೀಣ ಜನರ ಅಭಿವೃದ್ದಿಗೆ ಒತ್ತು ಕೊಡಬೇಕು. ಕೋವಿಡ್ ಸಾಂಕ್ರಾಮಿಕ ರೋಗ ಹರಡಿದಾಗ ವೈದ್ಯಕಿಯ ಕ್ಷೇತ್ರಕ್ಕೆ ಬೇಕಾದ ಸಾಕಷ್ಟು ಯಂತ್ರೋಪಕರಣಗಳು ಶರವೇಗದಲ್ಲಿ ಉತ್ಪಾದನೆ ಆಗಲು ಎಂಜಿನಿಯರ್‌ಗಳ ಪರಿಶ್ರಮವೇ ಕಾರಣ ಎಂದರು.
Chikkaballapur: ಮಹಾರಾಷ್ಟ್ರದವರು ಉದ್ಧಟತನ ಬಿಡಬೇಕು: ಸಚಿವ ಸುಧಾಕರ್
ಮನುಷ್ಯನ ಆರೋಗ್ಯ ಪರೀಕ್ಷೆಗೆ ಅವಿಷ್ಕಾರಗೊಂಡಿರುವ ಸಾಕಷ್ಟುಯಂತ್ರೋಪಕರಣಗಳು ಕೇಲವೇ ನಿಮಿಷಗಳಲ್ಲಿ ಸಂಪೂರ್ಣ ಆರೋಗ್ಯ ಮಾಹಿತಿ ನೀಡುತ್ತವೆ. ಅಷ್ಟರ ಮಟ್ಟಿಗೆ ಇಂದು ಆರೋಗ್ಯ ಕ್ಷೇತ್ರ ಕೂಡ ತಾಂತ್ರಿಕೆಯನ್ನು ಅವಲಂಬಿಸಿದೆಯೆಂದರು. ಬಿ.ಇ ಓದುವ ವಿದ್ಯಾರ್ಥಿಗಳು ಸಾಮಾಜಿಕ ಸೇವಾ ಮನೋಭಾವ ಹೊಂದಬೇಕು. ಬದುಕಿಗೆ ಮೌಲ್ಯಗಳನ್ನು ಇಟ್ಟುಕೊಳ್ಳಬೇಕೆಂದರು.
ವಿದ್ಯಾರ್ಥಿಗಳಿಗೆ ಪ್ರಶಸ್ತಿ: ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ ಡಾ.ಕೆ. ಚಿದಾನಂದ ಗೌಡ ಮಾತನಾಡಿ, ಶಿಸ್ತು ಸಾಧನೆಗೆ ದಾರಿ ಮಾಡಿಕೊಡುತ್ತದೆ ಎಂದರು. ಕಾರ್ಯ ಕ್ರಮದಲ್ಲಿ ಶೈಕ್ಷಣಿಕ ವರ್ಷದಲ್ಲಿ ಹೆಚ್ಚಿನ ಫಲಿತಾಂಶ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಹಾಗೆಯೇ ಪ್ರಥಮ ವರ್ಷದ ವಿದ್ಯಾರ್ಥಿಗಳಲ್ಲಿ ಅತೀ ಹೆಚ್ಚು ಸರ್ಟಿಫಿಕೇಟ್ ಕೋರ್ಸ್‌ಗಳನ್ನು ಮುಗಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ನೀಡಲಾಯಿತು. ವೇದಿಕೆಯಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧಿಪತಿಗಳಾದ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು.
ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ, ಟಿ.ಸಿ.ಎಸ್ ಆರ್.ಎಂ.ಜಿ ಗ್ಲೋಬಲ್ ಮುಖ್ಯಸ್ಥ ಇ.ಎಸ್. ಚಕ್ರವರ್ತಿ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ಎಸ್.ವಿದ್ಯಾಶಂಕರ್, ಬಿಜಿಎಸ್ ಆಡಳಿತ ಮಂಡಳಿ ನಿರ್ದೇಶಕ ಡಾ.ಕೆ.ಪಿ.ಶ್ರೀನಿವಾಸಮೂರ್ತಿ, ಬಿಜಿಎಸ್ ಮುಖ್ಯ ಆಡಳಿತಾಧಿಕಾರಿ ಡಾ.ಎನ್.ಶಿವರಾಮರೆಡ್ಡಿ, ಎಸ್‌ಜೆಸಿಐಟಿ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಟಿ.ರಾಜು, ರಿಜಿಸ್ಟ್ರಾರ್ ಜೆ.ಸುರೇಶ್, ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕರಾದ ಡಾ.ಕೆ.ಪಿ.ಶ್ರೀನಿವಾಸ ಮೂರ್ತಿ, ಡಾ.ಶ್ರೀನಿವಾಸ್, ಡಾ.ಸೂರ್ಯ ನಾರಾಯಣ ರಾಜು ಇದ್ದರು. ಕಾರ್ಯಕ್ರಮದಲ್ಲಿ ಪೋಷಕರು, ಪ್ರಥಮ ವರ್ಷದ ವಿದ್ಯಾರ್ಥಿಗಳು, ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಶ್ವತ ನೀರಾವರಿ ಅನುಷ್ಠಾನಕ್ಕೆ ಬದ್ಧ: ಸಚಿವ ಸುಧಾಕರ್
ಇಡೀ ರಾಷ್ಟ್ರದಲ್ಲಿಯೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮೊದಲ ಬಾರಿಗೆ ಅನುಷ್ಟಾನಗೊಳಿಸುವ ಮೂಲಕ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಅದೇ ರೀತಿ ಬಂಡವಾಳ ಹೂಡಿಕೆಯಲ್ಲಿ ಕೂಡ ಕರ್ನಾಟಕ ಕೂಡ ಮುಂಚೂಣಿಯಲ್ಲಿದ್ದು ಬೆಂಗಳೂರು ನಗರ ಆಗ್ರಸ್ಥಾನದಲ್ಲಿದೆ. ತಾಂತ್ರಿಕ ಕ್ಷೇತ್ರ ಅಭಿವೃದ್ಧಿಯಲ್ಲೂ ಕರ್ನಾಟಕ ವಿಶ್ವಕ್ಕೆ ಮಾದರಿ.
-ಡಾ.ಕೆ.ಸುಧಾಕರ್, ಆರೋಗ್ಯ ಸಚಿವ