ಪೋಲಿಸರ ದೌರ್ಜನ್ಯದಿಂದ ಸಾವಿನ ಆರೋಪ : ಸಬ್ ಇನ್ಸ್ ಪೆಕ್ಟರ್ ವರ್ಗಾವಣೆ

By Kannadaprabha News  |  First Published Nov 8, 2023, 8:23 AM IST

ಪೋಲಿಸರ ದೌರ್ಜನ್ಯದಿಂದ ಸಾವಿಗೆ ಕಾರಣರಾಗಿರುವ ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಮತ್ತು ಮೂವರು ಪೇದೆಗಳನ್ನು ಅಮಾನತುಪಡಿಸಬೇಕೆಂದು ಆಗ್ರಹಿಸಿ ಮಸಾಲಾ ಜಯರಾಮ್ ಪ್ರತಿಭಟನೆಗೆ ಸಬ್ ಇನ್ಸ್ ಪೆಕ್ಟರ್ ಗಣೇಶ್ ರನ್ನು ವರ್ಗಾವಣೆ ಮಾಡಲಾಗಿದೆ.


 ತುರುವೇಕೆರೆ :  ಪೋಲಿಸರ ದೌರ್ಜನ್ಯದಿಂದ ಸಾವಿಗೆ ಕಾರಣರಾಗಿರುವ ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಮತ್ತು ಮೂವರು ಪೇದೆಗಳನ್ನು ಅಮಾನತುಪಡಿಸಬೇಕೆಂದು ಆಗ್ರಹಿಸಿ ಮಸಾಲಾ ಜಯರಾಮ್ ಪ್ರತಿಭಟನೆಗೆ ಸಬ್ ಇನ್ಸ್ ಪೆಕ್ಟರ್ ಗಣೇಶ್ ರನ್ನು ವರ್ಗಾವಣೆ ಮಾಡಲಾಗಿದೆ.

ಸರ್ಕಲ್ ಇನ್ಸ್ ಪೆಕ್ಟರ್ ಕಛೇರಿಯ ಎದುರು ಮಾಜಿ ಶಾಸಕ ಮಸಾಲಾ ಜಯರಾಮ್, ಬಿಜೆಪಿ ಕಾರ್ಯಕರ್ತರು, ವಿಶ್ವಕರ್ಮ ಸಮಾಜದ ಮುಖಂಡರು, ವಿವಿಧ ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತಡರಾತ್ರಿಯವರೆಗೂ ಮಾಜಿ ಶಾಸಕ ಮಸಾಲಾ ಜಯರಾಮ್ ಪ್ರತಿಭಟನೆ ನಡೆಯಿತು.

Latest Videos

undefined

ಸ್ಥಳಕ್ಕೆ ಆಗಮಿಸಿದ್ದಲಕ್ಷ್ಮೀಕಾಂತ್ ಮತ್ತು ಸಿಪಿಐ ಲೋಹಿತ್ ರನ್ನು ಸಮಾಧಾನಪಡಿಸಲು ಎಷ್ಟೇ ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಮಸಾಲಾ ಜಯರಾಮ್ ರೊಂದಿಗೆ ಮಾತನಾಡಿದ ಮರಿಯಪ್ಪ, ಕುಮಾರಾಚಾರ್ ಅವರ ಸಾವಿನ ಕುರಿತು ಈಗಾಗಲೇ ವಿಚಾರಣೆ ಅಂತಿಮ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ವರ್ಗಾವಣೆ: ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮುಖಂಡರ ಒತ್ತಡಕ್ಕೆ ಮಣಿದ ಮರಿಯಪ್ಪ, ಅಂತಿಮವಾಗಿ ಸಬ್ ಇನ್ಸ್‌ಪೆಕ್ಟರ್ ಗಣೇಶ್ ಅ ವರನ್ನು ಹಾಗೂ ಮೂವರು ಪೇದೆಗಳನ್ನೂ ಬೇರೆಡೆ ವರ್ಗಾವಣೆ ಭರವಸೆ ನೀಡಿದರು. 

ಲಾಕಪ್ ಡೆತ್ ಕೇಸ್

ತುರುವೇಕೆರೆ :  ಪೋಲಿಸರ ವಶದಲ್ಲಿದ್ದ ವ್ಯಕ್ತಿ ಮೃತಪಟ್ಟಿರುವ ಹಿನ್ನೆಲೆ ವ್ಯಕ್ತಿಯ ಸಾವಿಗೆ ಕಾರಣವಾದ ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಮತ್ತು ಸಿಬ್ಬಂದಿಯನ್ನು ಕೂಡಲೇ ಅಮಾನತು ಮಾಡಬೇಕೆಂದು ಬಿಜೆಪಿಯ ಮಾಜಿ ಶಾಸಕ ಮಸಾಲಾ ಜಯರಾಮ್ ಸರ್ಕಾರವನ್ನು ಆಗ್ರಹಿಸಿದ್ದಾರೆ.

ತಮ್ಮ ಫಾರಂ ಹೌಸ್ ನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ತಾಲೂಕಿನ ಕೆ.ಮಾವಿನಹಳ್ಳಿಯ ಹೊರಾಂಗಣದಲ್ಲಿ ಇಸ್ಪೀಟ್ ಆಟದಲ್ಲಿ ಕೆಲವರು ತೊಡಗಿದ್ದಾರೆ ಎಂಬ ದೂರಿನನ್ವಯ ಪೋಲಿಸರು ದಾಳಿ ಮಾಡಿದ್ದರು. ಆ ಸಂದರ್ಭದಲ್ಲಿ ಪೋಲಿಸರು ಮಾಡಿದ ದೌರ್ಜನ್ಯದಿಂದ ಕೆ.ಮಾವಿನಹಳ್ಳಿ ಗ್ರಾಮದ ಕುಮಾರಾಚಾರ್ ಮರಣ ಹೊಂದಿದ್ದರು ಎನ್ನಲಾಗಿದೆ. ಆದರೆ, ಪೋಲಿಸರು ಇದೊಂದು ಅಸ್ವಾಭಾವಿಕ ಸಾವೆಂದು ಪ್ರಕರಣ ದಾಖಲಿಸಿದ್ದಾರೆ. ಇದು ಖಂಡನೀಯ.

ಪೋಲಿಸರು ಹಲ್ಲೆಗೆ ಒಳಗಾಗಿದ್ದವರಲ್ಲಿ ಕುಮಾರಾಚಾರ್ ಸಹ ಒಬ್ಬರು. ದ್ವಿಚಕ್ರ ವಾಹನದಲ್ಲಿ ಪೋಲಿಸರು ಆರೋಪಿಗಳನ್ನು ಕರೆ ತರುವ ವೇಳೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಕುಮಾರಾಚಾರ್ ದಾರಿ ಮಧ್ಯೆಯೇ ಅಸುನೀಗಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ನೆಪ ಮಾತ್ರಕ್ಕೆ ಅವರಿಗೆ ಚಿಕಿತ್ಸೆ ಕೊಡಿಸುವ ನಾಟಕ ಮಾಡಿದ್ದಾರೆ. ಆದರೆ, ಆ ವೇಳೆಗಾಗಲೇ ಕುಮಾರಾ ಚಾರ್ ನಿಧನರಾಗಿದ್ದರು. ಸಬ್ ಇನ್ಸ್ ಪೆಕ್ಟರ್, ಸಹಾಯಕ ಸಬ್ ಇನ್ಸ್ ಪೆಕ್ಟರ್ ಮತ್ತು ಮೂವರು ಸಿಬ್ಬಂದಿ ಕಾರಣರಾಗಿದ್ದಾರೆ ಎಂದು ಮಸಾಲಾ ಜಯರಾಮ್ ಆರೋಪಿಸಿದರು.

ಒತ್ತಾಯ: ವಿಶ್ವಕರ್ಮ ಸಮುದಾಯಕ್ಕೆ ಸೇರಿದ ಅಮಾಯಕ ಕುಮಾರಾಚಾರ್ ರವರ ಸಾವಿನಿಂದಾಗಿ ಅವರ ಕುಟುಂಬ ಬೀದಿಗೆ ಬಿದ್ದಿದೆ. ವಾರಸುದಾರರೇ ಇಲ್ಲದಾಗಿದ್ದಾರೆ. ಪತ್ನಿ, ಮಕ್ಕಳು ಅನಾಥರಾಗಿದ್ದಾರೆ. ಕುಮಾರಾಚಾರ್ ರವರ ಸಾವಿಗೆ ಕಾರಣರಾಗಿರುವ ಪೋಲಿಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಅವರೆಲ್ಲರನ್ನೂ ಬಂಧಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆ: ಕುಮಾರಾಚಾರ್ ಸಾವಿಗೆ ಕಾರಣರಾಗಿರುವ ಎಲ್ಲಾ ಪೋಲಿಸ್ ಅಧಿಕಾರಿ, ಸಿಬ್ಬಂದಿ ಅಮಾನತು ಮಾಡದಿದ್ದಲ್ಲಿ ಸೋಮವಾರ ಕುಮಾರಾಚಾರ್ ರವರ ಕುಟುಂಬ ಮತ್ತು ಬಿಜೆಪಿಯ ಜಿಲ್ಲಾ ಮುಖಂಡರು ಮತ್ತು ತಾಲೂಕಿನ ಬಿಜೆಪಿ ಕಾರ್ಯಕರ್ತರೊಂದಿಗೆ ಸರ್ಕಲ್ ಇನ್ಸ್ ಪೆಕ್ಟರ್ ಕಛೇರಿಯ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿಯೂ ಎಚ್ಚರಿಕೆ ನೀಡಿದರು.

ಪರಿಹಾರ: ಪೋಲಿಸರ ದೌರ್ಜನ್ಯದಿಂದ ಮೃತಪಟ್ಟಿರುವ ಕುಮಾರಾಚಾರ್ ರವರ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು. ಸಾವಿಗೆ ಕಾರಣರಾಗಿರುವವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಸೂಕ್ತ ಪರಿಹಾರವನ್ನೂ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಕೊಂಡಜ್ಜಿ ವಿಶ್ವನಾಥ್, ವಿ.ಬಿ.ಸುರೇಶ್, ಹರಿಕಾನಹಳ್ಳಿ ಸಿದ್ದಪ್ಪಾಜಿ, ಚಿದಾನಂದ್, ಕುಮಾರಾಚಾರ್ ರವರ ಕುಟುಂಬದ ಸದಸ್ಯರು ಹಾಜರಿದ್ದರು.

click me!