Ballari: ವಿಚಾರಣೆ ನೆಪದಲ್ಲಿ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ರಾ ಎಸ್‌ಐ ರಾಥೋಡ್?

By Girish Goudar  |  First Published Mar 26, 2022, 9:14 AM IST

*  ಬಳ್ಳಾರಿ ಜಿಲ್ಲೆಯ ಕುರಗೋಡು ಪಟ್ಟಣದಲ್ಲಿ ನಡೆದ ಘಟನೆ
*  ಎಮ್ಮೆ ಕದ್ದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಯುವಕರಿಗೆ ಥಳಿತ
*  ಪೊಲೀಸರ ಗುಂಡಾ ವರ್ತನೆಗೆ ಗ್ರಾಮಸ್ಥರ ಆಕ್ರೋಶ
 


ಬಳ್ಳಾರಿ(ಮಾ.26):  ವಿಚಾರಣೆ ನೆಪದಲ್ಲಿ ಇಬ್ಬರು ಯುವಕರಿಗೆ ಮನಸೋ ಇಚ್ಛೆ ಹೊಡೆದ ಪೊಲೀಸರ(Police) ವಿರುದ್ಧ  ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ತಡರಾತ್ರಿ ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ಕುರಗೋಡು(Kurugodu) ಪಟ್ಟಣದಲ್ಲಿ ನಿನ್ನೆ(ಶುಕ್ರವಾರ) ನಡೆದಿದೆ. 

ಎಮ್ಮೆ ಕದ್ದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಯುವಕರಿಗೆ ಕುಗೋಡಯ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಪಿಎಸ್ಐ ರಾಥೋಡ್(PSI Rathod) ಅವರು ಮಾರಣಾಂತಿಕವಾಗಿ ಹಲ್ಲೆ(Assault) ನಡೆಸಿದ್ದಾರೆ ಅಂತ ಗ್ರಾಮಸ್ಥರು(Villagers) ಆರೋಪಿಸಿದ್ದಾರೆ. ವಿಚಾರಣೆ ನೆಪದಲ್ಲಿ ಮಂಜುನಾಥ ಹಾಗೂ ಭರತ್ ಎನ್ನುವವರ ಮೇಲೆ ಹಲ್ಲೆ ಪಿಎಸ್ಐ ರಾಥೋಡ್ ಅವರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 
ಪೊಲೀಸರ ಥಳಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಭರತ್‌ಗೆ ಚಿಕಿತ್ಸೆ(Treatment) ಕೊಡಿಸಲಾಗಿದೆ. ಸದ್ಯಕ್ಕೆ ಪ್ರಾಣಾಪಾಯವಿಲ್ಲ ಅಂತ ವೈದ್ಯರು ತಿಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕುರಗೋಡು ತಾಲೂಕಿನ ಒದ್ದಟ್ಟಿ ಗ್ರಾಮದಲ್ಲಿ ಎಮ್ಮೆ ಕದಿದ್ದಾರೆ ಎಂದು ಆರೋಪಿಸಲಾಗಿದೆ. 

Tap to resize

Latest Videos

Assault on Police: ಪೊಲೀಸರಿಗೇ ಹೊಡೆದ ಅಣ್ತಮ್ಮ ಅರೆಸ್ಟ್‌

ಪೊಲೀಸರ ಗುಂಡಾ ವರ್ತನೆಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ ನಿನ್ನೆ ತಡರಾತ್ರಿವರೆಗೂ ಪೊಲೀಸ್ ಠಾಣೆಯ ಮುಂದೆ ಗ್ರಾಮಸ್ಥರು ಪ್ರತಿಭಟನೆ(Protest) ಮಾಡಿದದಾರೆ. ಈ ವೇಳೆ ಪೊಲೀಸ್ ಠಾಣೆಗೆ ನುಗ್ಗಿದ ಜನರು ಪೊಲೀಸರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. 

ಪೊಲೀಸ್‌ ಠಾಣೆಯ ಮುಂದೆ ಟೆಂಟ್ ಹಾಕುವ ಮೂಲಕ ಇಂದೂ ಕೂಡ ಪ್ರತಿಭಟನೆ ಮುಂದುವರಿಯಲಿದೆ. ಕುರುಗೋಡು ಠಾಣೆಗೆ ಪೊಲೀಸರು ಬರೋವರೆಗೆ ಇಲ್ಲಿಂದ ಹೋಗೋದಿಲ್ಲವೆಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆ ನಂತರ ಎಸ್ಪಿ ಕುರುಗೋಡಿಗೆ ತೆರಳಲಿದ್ದಾರೆ. ಅಲ್ಲಿಯವರೆಗೆ ಪ್ರತಿಭಟನೆ ‌ಮುಂದುವರೆಸೋದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. 

ಕೊರಗರ ಮದುವೆಗೆ ನುಗ್ಗಿ ಪೊಲೀಸ್‌ ದಾಂಧಲೆ: ಮಹಿಳೆಯರ ಮೇಲೂ ಮನಬಂದಂತೆ ಥಳಿತ

ಕುಂದಾಪುರ: ಕೊರಗ ಸಮುದಾಯದ(Koraga Community) ಯುವಕನ ಮೆಹಂದಿ ಕಾರ್ಯಕ್ರಮದಲ್ಲಿ ಡಿಜೆ ಅಳವಡಿಸಿದ್ದನ್ನು ಆಕ್ಷೇಪಿಸಿ ಮದುಮಗನೂ ಸೇರಿದಂತೆ ಮೆಹಂದಿ ಕಾರ್ಯಕ್ರಮಕ್ಕೆ ಬಂದ ಕೊರಗ ಸಮುದಾಯದವರ ಮೇಲೆ ಪೊಲೀಸರು(Police) ಮನಬಂದಂತೆ ಥಳಿಸಿದ(Assault) ಘಟನೆ ರಾಜ್ಯ ಸಮಾಜ ಕಲ್ಯಾಣ ಸಚಿವರ ತವರೂರಾದ ಕೋಟತಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರಗ ಕಾಲನಿಯಲ್ಲಿ ಕಳೆದ ವರ್ಷದ ಡಿ.28 ರಂದು ನಡೆದಿತ್ತು. 
ಘಟನೆಯಲ್ಲಿ ಮದುಮಗ ರಾಜೇಶ್‌, ಕೊರಗ ಸಮುದಾಯದ ಮುಖಂಡ ಗಣೇಶ್‌ ಕೊರಗ, ಸುಂದರಿ, ಲಕ್ಷ್ಮೇ, ಬೇಬಿ, 12 ವರ್ಷ ಪ್ರಾಯದ ಬಾಲಕಿ, ಮದುಮಗನ ತಾಯಿ ಗಿರಿಜಾ, ಪ್ರವೀಣ್‌, ಶೇಖರ್‌ ಮೊದಲಾದವರಿಗೆ ಕೈ, ಕಾಲು, ತಲೆ, ಕುತ್ತಿಗೆ ಮೊದಲಾದೆಡೆ ಗಾಯಗಳಾಗಿತ್ತು. 

ಕೋಟತಟ್ಟು ಪ.ಪಂ ವ್ಯಾಪ್ತಿಯ ಕೊರಗ ಕಾಲನಿಯಲ್ಲಿ ಕೊರಗ ಸಮುದಾಯದ ರಾಜೇಶ್‌ ಎನ್ನುವವರ ಮದುವೆ(Marriage) ಡಿ.29ಕ್ಕೆ ಕುಮಟಾದಲ್ಲಿ ನಡೆಯಲಿದ್ದು, ಸೋಮವಾರ ಮನೆಯಲ್ಲಿಯೇ ಅದ್ದೂರಿ ಮೆಹಂದಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಡಿಜೆ ವ್ಯವಸ್ಥೆಯೂ ಇದ್ದು ರಾತ್ರಿ 9.30ರಿಂದ ಊಟ ವ್ಯವಸ್ಥೆ ಮಾಡಲಾಗಿತ್ತು. 10 ಗಂಟೆಯ ಬಳಿಕ ಪೊಲೀಸ್‌ ಆಗಮಿಸಿ ಡಿಜೆ ತೆಗೆಯುವಂತೆ ಸೂಚಿಸಿದ್ದು, ಕೆಲವೇ ಕ್ಷಣಗಳಲ್ಲಿ ಬಂದ ಕೋಟ ಪಿಎಸ್‌ಐ ಸಂತೋಷ್‌ ಬಿ.ಪಿ ಹಾಗೂ ಇತರ ಕೆಲ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರ ಮೇಲೆ ಲಾಠಿಯಿಂದ(Lathi) ಹಲ್ಲೆ ನಡೆಸಿ ಅವಾಚ್ಯವಾಗಿ ಬೈದಿದ್ದಾರೆ. ಈ ವೇಳೆಯಲ್ಲಿ ತಪ್ಪಿಸಲು ಹೋದ ಮಹಿಳೆಯರ(Woman) ಮೇಲೂ ಥಳಿಸಿದ ಪೊಲೀಸರು, ವಿಡಿಯೋ ಚಿತ್ರೀಕರಣ ಮಾಡಿದವರ ಮೊಬೈಲ್‌ ಕಸಿದುಕೊಂಡು ವಿಡಿಯೋವನ್ನು ಡಿಲೀಟ್‌ ಮಾಡಿದ್ದರು. 

Bengaluru: ಹಿಗ್ಗಾಮುಗ್ಗ ಥಳಿತಕ್ಕೆ ಆರೋಪಿಯ ಬಲಗೈ ಕಟ್‌: ಪೊಲೀಸರ ಅಮಾನತು

ಮೂತ್ರ ವಿಸರ್ಜನೆಗೆ ತೆರಳಿದ್ದ ಮಹಿಳೆಯರ ಮೇಲೂ ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೇ ಕೊರಗ ಮುಖಂಡ ಗಣೇಶ್‌ ಬಾರಕೂರು ಸೇರಿದಂತೆ ನಾಲ್ಕೈದು ಕೊರಗ ಸಮುದಾಯದ ಯುವಕರನ್ನು ಠಾಣೆಗೆ ಕರೆದೊಯ್ದು ಶರ್ಟ್‌ ಬಿಚ್ಚಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮದುಮಗನ(Groom) ಅಣ್ಣ ಗಿರೀಶ್‌, ಸುದರ್ಶನ ಹಾಗೂ ಸಚಿನ್‌ ಎನ್ನುವವರನ್ನು ಕೂಡ ಠಾಣೆಗೆ ಕರೆದೊಯ್ದು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ ಎಂದು ನೊಂದವರು ಆರೋಪಿಸಿದ್ದರು. ಈ ಬಗ್ಗೆ ಗಣೇಶ್‌ ಕೊರಗ ಪ್ರತಿಕ್ರಿಯೆ ನೀಡಿ, ಡಿಜೆ ಶಬ್ದ ಕಡಿಮೆ ಮಾಡಲು ಹೇಳಿ ತೆರಳುವಾಗಲೇ ಏಳೆಂಟು ಮಂದಿ ಪೊಲೀಸರು ಬಂದು ಏಕಾಏಕಿ ಜೀಪಿಗೆ ಎಳೆದೊಯ್ದರು. ಬಾಯಿಗೆ ಬಂದಂತೆ ಅವ್ಯಾಚವಾಗಿ ಬೈದರು. ಹೆಂಗಸರು, ಮಕ್ಕಳು, ವೃದ್ಧರು ಎಂದು ನೋಡದೆ ಹಲ್ಲೆ ಮಾಡಿದ್ದಾರೆ. ಕೊರಗ ಚಳವಳಿಯ ನನ್ನ ಸುದೀರ್ಘ ಜೀವನದಲ್ಲಿ ಪೊಲೀಸರಿಂದ ಈ ರೀತಿಯಾಗಿ ಅಮಾನವೀಯ ಹಲ್ಲೆ ನಾನು ಇದುವರೆಗೂ ಕಂಡಿಲ್ಲ ಎಂದು ಹೇಳಿದ್ದರು. 
 

click me!