ಸರ್ಕಾರಿ ಶಾಲೆ ಜಾಗದಲ್ಲಿ ಶಾದಿ ಮಹಲ್ ನಿರ್ಮಾಣ ಆರೋಪ : ಸ್ಪಷ್ಟೀಕರಣಕ್ಕೆ ಬಿಜೆಪಿ ಒತ್ತಾಯ

Published : Jan 26, 2026, 12:49 PM IST
Construction Building

ಸಾರಾಂಶ

ಸರಕಾರಿ ಪಬ್ಲಿಕ್ ಶಾಲೆಗೆ ಸೇರಿದ ಜಾಗದಲ್ಲಿ ಶಾದಿ ಮಹಲ್ ನಿರ್ಮಾಣವಾಗುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಶಾಲೆಯ ಜಾಗದಲ್ಲಿ ನಡೆಯುತ್ತಿರುವ ಈ ನಿರ್ಮಾಣವನ್ನು ತಕ್ಷಣವೇ ನಿಲ್ಲಿಸಿ, ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಿ ಸ್ಪಷ್ಟೀಕರಣ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಮಡಿಕೇರಿ : ನಾಪೋಕ್ಲು ಸರಕಾರಿ ಪಬ್ಲಿಕ್ ಶಾಲೆಗೆ ಸೇರಿದ ಜಾಗದಲ್ಲಿ ಶಾದಿ ಮಹಲ್ ನಿರ್ಮಾಣವಾಗುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿದ್ದು, ಈ ಬಗ್ಗೆ ಶಾಸಕರು ಹಾಗೂ ಅಧಿಕಾರಿಗಳು ಸ್ಪಷ್ಟೀಕರಣ ನೀಡಬೇಕೆಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ಒತ್ತಾಯಿಸಿದ್ದಾರೆ.

ಅಧಿಕಾರಿಗಳಿಂದ ಸಿಗದ ಸ್ಪಷ್ಟನೆ?

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈಗಾಗಲೇ ಶಾದಿ ಮಹಲ್ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಇದು ಶಾಲೆಗೆ ಸೇರಿದ ಜಾಗ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಶಾಲೆಯ ಪ್ರಾಂಶುಪಾಲರು ಕೂಡ ಶಾಸಕರು ಹಾಗೂ ಅಧಿಕಾರಿಗಳ ಗಮನ ಸೆಳೆದು ಮನವರಿಕೆ ಮಾಡಿಕೊಟ್ಟಿದ್ದಾರೆ. ಆದರೆ ಯಾರಿಂದಲೂ ಯಾವುದೇ ಸ್ಪಂದನೆ ದೊರೆತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಶಾಲೆಗೆ ಸೇರಿದ ಜಾಗ ಶೈಕ್ಷಣಿಕ ಕಟ್ಟಡಗಳ ನಿರ್ಮಾಣ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗಷ್ಟೇ ಸೀಮಿತವಾಗಿರಬೇಕು. ಶಾಲೆಯ ಜಾಗದಲ್ಲಿ ಶಾದಿ ಮಹಲ್ ಸೇರಿದಂತೆ ಬೇರೆ ಯಾವುದೇ ಕಟ್ಟಡ ನಿರ್ಮಾಣಕ್ಕೆ ಅವಕಾಶವಿರುವುದಿಲ್ಲ. ಆದರೂ ಶಾದಿ ಮಹಲ್ ನಿರ್ಮಾಣಗೊಳ್ಳುತ್ತಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Kodagu: ಕೊಡಗಿನ ಕಾಡು ಕಾಯಲು 'ಅಗ್ನಿ' ರಣತಂತ್ರ: ಬೆಂಕಿ ರೇಖೆ ನಿರ್ಮಾಣ ಕಾರ್ಯ ಬಿರುಸು

ಕಾಮಗಾರಿ ಸ್ಥಗಿತಗೊಳಿಸುವಂತೆ ಬಿಜೆಪಿ  ಒತ್ತಾಯ!

ಬೇರೆ ಯಾವುದೋ ಜಾಗದ ಆರ್ ಟಿಸಿ ತೋರಿಸಿ ಸರ್ಕಾರದಿಂದ ಶಾದಿ ಮಹಲ್ ಗೆ ಮಂಜೂರಾತಿ ಪಡೆದಿರುವುದು ಕಂಡು ಬಂದಿದೆ. ಆದ್ದರಿಂದ ಸಂಬಂಧಿಸಿದ ಹಿರಿಯ ಅಧಿಕಾರಿಗಳು ಈ ಕುರಿತು ತನಿಖೆ ಕೈಗೊಂಡು ಸಾರ್ವಜನಿಕರಿಗೆ ಸ್ಪಷ್ಟೀಕರಣ ನೀಡಬೇಕು ಮತ್ತು ಶಾಲೆಗೆ ಸೇರಿದ ಜಾಗದಲ್ಲಿ ನಡೆಯುತ್ತಿರುವ ಶಾದಿ ಮಹಲ್ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ ಮಾಡಲೆಂದೇ ವಿರೋಧ ಪಕ್ಷದವರು ಮಸೂದೆಗೆ ವಿರೋಧ?: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಪ್ರಶ್ನೆ

PREV
Read more Articles on
click me!

Recommended Stories

ಬೆಂಗಳೂರು ಟೆಕ್ಕಿ ಶರ್ಮಿಳಾ ಹತ್ಯೆ ಕೇಸಲ್ಲಿ ಟ್ವಿಸ್ಟ್; ಫಸ್ಟ್ ರ‍್ಯಾಂಕ್‌ ಕೊಲೆಗಾರನ ಉದ್ದೇಶವೇ ಬೇರೆಯಾಗಿತ್ತು!
BSNL ನೆಟ್‌ವರ್ಕ್‌ ಸಮಸ್ಯೆ: ಮಂಗಳೂರಿನ ವ್ಯಕ್ತಿಗೆ ಪರಿಹಾರ ನೀಡಲು ನ್ಯಾಯಾಲಯ ಆದೇಶ