ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿರುವ ಆರೋಪ ಸಂಬಂಧಿಕರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಸಪ್ತಗಿರಿ ಆಸ್ಪತ್ರೆಯಲ್ಲಿ ನಡೆದಿದೆ.
ತುಮಕೂರು (ಜೂ.30) ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿರುವ ಆರೋಪ ಸಂಬಂಧಿಕರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಸಪ್ತಗಿರಿ ಆಸ್ಪತ್ರೆಯಲ್ಲಿ ನಡೆದಿದೆ.
ನಾಲ್ಕು ತಿಂಗಳ ಗಂಡು ಮಗು ಆಯಷ್ ಸಾವು. ಕೆಂಕೆರೆ ಗ್ರಾಮದ ದಿವಾಕರ್ ಮತ್ತು ಅರುಣಾ ದಂಪತಿಯ ಮಗು. ಸ್ಯಾಚುರೇಷನ್ ಕಡಿಮೆ ಇದ್ದದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರು ಲಭ್ಯ ಇಲ್ಲದೇ ಇದ್ದುದರಿಂದ ಪ್ರಾಥಮಿಕ ಚಿಕಿತ್ಸೆ ನೀಡಿದ ಸಿಬ್ಬಂದಿ. ಪ್ರಾಥಮಿಕ ಚಿಕಿತ್ಸೆ ಬಳಿಕ ಮಗುವಿನ ಉಸಿರಾಟದಲ್ಲಿ ಏರುಪೇರು. ಕೂಡಲೇ ಚುಂಚನಗಿರಿ ಆಸ್ಪತ್ರೆಗೆ ಶಿಫ್ಟ್ ಮಾಡುವಂತೆ ಹೇಳಿದ್ದ ಸಿಬ್ಬಂದಿ. ಅಷ್ಟರಲ್ಲಾಗಲೇ ಮಗು ಸಪ್ತಗಿರಿ ಆಸ್ಪತ್ರೆಯಲ್ಲೇ ಸಾವು. ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವು ಎಂದು ಆರೋಪಿಸಿರುವ ಕುಟುಂಬಸ್ಥರು. ಆಸ್ಪತ್ರೆ ವಿರುದ್ಧ ಆಕ್ರೋಶಗೊಂಡು ಪ್ರತಿಭಟನೆ ನಡೆಸುತ್ತಿರುವ ಕುಟುಂಬಸ್ಥರು.
ಚಿಕಿತ್ಸೆ ನೀಡುವಾಗ ತುಟಿಯನ್ನೇ ಕಟ್ ಮಾಡಿದ ಬೆಂಗಳೂರಿನ ವೈದ್ಯ, ಪರಿಹಾರ ನೀಡಲು ನ್ಯಾಯಾಲಯ ಆದೇಶ
ಸ್ಕೂಟರ್ ಡಿಕ್ಕಿ: ಇಬ್ಬರ ಸಾವು
ರಾಮನಗರ: ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಸ್ಕೂರ್ಟ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಬಿಡದಿಯ ಕೆಂಪನಹಳ್ಳಿ ಗೇಚ್ ಸಮೀಪದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಬುಧವಾರ ರಾತ್ರಿ ನಡೆದಿದೆ. ಬೆಂಗಳೂರಿನ ಬಾಪೂಜಿ ನಗರದ ನಿವಾಸಿಗಳಾದ ಸನಾವುಲ್ಲಾ ಬೇಗಂ ಮತ್ತು ನೂರ್ ಜಹಾನ್ ಬೇಗಂ ಮೃತರು. ಕಾರ್ಯ ನಿಮಿತ್ತ ರಾಮನಗರಕ್ಕೆ ಬಂದಿದ್ದ ಇಬ್ಬರೂ, ರಾತ್ರಿ 7.30ರ ಸುಮಾರಿಗೆ ಬೆಂಗಳೂರಿಗೆ ಸ್ಕೂಟರ್‌ನಲ್ಲಿ ವಾಪಸ್ಸಾಗುತ್ತಿದ್ದರು. ವೇಗವಾಗಿ ಸ್ಕೂಟರ್ ಚಾಲನೆ ಮಾಡುತ್ತಿದ್ದ ಬೇಗ್ ಅವರು, ಕೆಂಪನಹಳ್ಳಿ ಗೇಚ್ ಬಳಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಬಿಡದಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕæೂಂಡಿದ್ದಾರೆ.
ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರ ಸಾವು
ಮಾಗಡಿ: ಪಟ್ಟಣದ ಸೋಮೇಶ್ವರ ದೇವಸ್ಥಾನದ ಸಮೀಪ ಖಾಸಗಿ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Shivamogga: ಇಂಜೆಕ್ಷನ್ ಪಡೆದ ಬಳಿಕ ಕಾಲಿನ ಸ್ವಾಧೀನ ಕಳೆದುಕೊಂಡ ಬಾಲಕಿ! ವೈದ್ಯರ ನಿರ್ಲಕ್ಷ್ಯ?
ಪಟ್ಟಣದ ರಾಜೀವ್‌ಗಾಂಧಿನಗರ ವಾಸಿಗಳಾದ ರಾಜು(44) ಮತ್ತು ಪ್ರಶಾಂತ್ (23) ಮೃತಪಟ್ಟವರು. ರಾಜೀವ್‌ಗಾಂಧಿನಗರದಿಂದ ಬುಧವಾರ ರಾತ್ರಿ ಇಬ್ಬರು ಮಾಗಡಿಗೆ ಬರು ವಾಗ ಸೋಮೇಶ್ವರ ದೇವಾಲಯದ ಬಳಿ ಬೈಕ್ ಅನ್ನು ಬಲಕ್ಕೆ ತಿರುಗಿಸುತ್ತಿದ್ದಾಗ ಮಾಗಡಿಯಿಂದ ಕುಣಿಗಲ್ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮಾಗಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.