*ತಾಯಿ ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಆರೋಪ
*ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು
*ತಾಯಿ ಮೃತಪಟ್ಟ ಬಳಿಕ ಮೃತ ಮಗುವನ್ನು ಹೊರತೆಗೆದ ಆರೋಪ
ಮಂಗಳೂರು (ಜ. 22): ಮಂಗಳೂರಿನಲ್ಲಿ (Mangaluru) ತಾಯಿ ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಆರೋಪದಡಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆ ವೈದ್ಯರ ವಿರುದ್ದ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಶುಕ್ರವಾರ ಬೆಳಗ್ಗೆ ಆಸ್ಪತ್ರೆಗೆ ಗರ್ಭಿಣಿ ಸವಿತಾ(25) ಬಂದಿದ್ದರು. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕುಂಡಡ್ಕ ಗ್ರಾಮದ ನಿವಾಸಿ ಸವಿತಾ ಆಸ್ಪತ್ರೆಗೆ ಬೆಳಗ್ಗೆ ಬಂದಾಗ ಹೊಟ್ಟೆಯಲ್ಲೆ ಮಗು ಸಾವನ್ನಪ್ಪಿದೆ ಎಂದು ವೈದ್ಯರು ಹೇಳಿದ್ದರು. ಆದರೆ ಸಂಜೆವರೆಗೂ ಮಗುವನ್ನು ವೈದ್ಯರು ಹೊರ ತೆಗೆಯದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಮಗು ಹೊರ ತೆಗೆಯುವ ಮುಂಚೆಯೇ ಸಂಜೆ ವೇಳೆಗೆ ತಾಯಿ ಕೂಡ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬೆನ್ನಲ್ಲೇ ಫಾದರ್ ಮುಲ್ಲರ್ ಆಸ್ಪತ್ರೆ ವೈದ್ಯರ ವಿರುದ್ದ ಆರೋಪ ಮಾಡಲಾಗಿದೆ. ತಾಯಿ ಮೃತಪಟ್ಟ ಬಳಿಕ ಮೃತ ಮಗುವನ್ನು ಹೊರತೆಗೆದಿದ್ದಾರೆ, ಸಂಜೆ ಆದ್ರು ಮಗು ಹೊರ ತೆಗೆಯದೇ ಇದ್ದಿದ್ದರಿಂದ ಗರ್ಭಿಣಿ ಸಾವುಗಿಡಾಗಿದ್ದಾಳೆ ಎಂದು ಪತಿ ಗಣೇಶ್ ಮತ್ತು ಸಂಬಂಧಿಕರು ಆರೋಪಿಸಿದ್ದಾರೆ.
undefined
ಇದನ್ನೂ ಓದಿ: Rubella Vaccine ಪಡೆದಿದ್ದ 3 ಮಕ್ಕಳ ನಿಗೂಢ ಸಾವು: ತನಿಖೆಗೆ ಆದೇಶ!
ಬೆಳಗಾವಿ, ಚುಚ್ಚುಮದ್ದು ಪಡೆದ ಮಕ್ಕಳ ಸಾವು: ಳಗಾವಿ (Belagavi) ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಮೂರು ಮಕ್ಕಳ (Children) ಸಾವು ಪ್ರಕರಣದ ಕುರಿತು ತನಿಖಾ ವರದಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಬೆಳಗಾವಿ ಜಿಲ್ಲಾಧಿಕಾರಿ ಗಳಿಗೆ ಸೂಚನೆ ನೀಡಿದ್ದಾರೆ. ಧಡಾರ ರೋಗ ತಡೆಗೆ ನೀಡಲಾಗುವ ರುಬೆಲ್ಲ ಚುಚ್ಚುಮದ್ದನ್ನು ಪಡೆದ ಸಂದರ್ಭದಲ್ಲಿ ಆ ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಪ್ರಕರಣದ ಕುರಿತು ಮುಖ್ಯಮಂತ್ರಿಗಳು ಡಿಸಿ ಅವರಿಂದ ವಿವರವಾದ ವರದಿ ಕೇಳಿದ್ದಾರೆ.
ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ. ರೂಬೆಲ್ಲಾ ಲಸಿಕೆ (Rubella) ಪಡೆದಿದ್ದ ಮೂರು ಕಂದಮ್ಮಗಳು ನಿಗೂಢವಾಗಿ ಅಸುನೀಗಿರುವ ಮನಕಲಕುವ ಘಟನೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ (Belagavi) ನಡೆದಿತ್ತು. ಘಟನೆ ಬೆನ್ನಲ್ಲೇ ಎಚ್ಚೆತ್ತಿರುವ ಆರೋಗ್ಯ ಇಲಾಖೆ ತನಿಖೆಗೆ ಆದೇಶಿಸಿತ್ತು. . ಜಿಲ್ಲೆಯ ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದ ಪವಿತ್ರಾ ಹುಲಗೂರ (13 ತಿಂಗಳು), ಮಧು ಕರಗುಂದಿ (14 ತಿಂಗಳು) ಹಾಗೂ ಮಲ್ಲಾಪುರ ಗ್ರಾಮದ ಚೇತನ ಪೂಜಾರಿ (18 ತಿಂಗಳು) ಮೃತಪಟ್ಟಿದ್ದರು.
ಇದನ್ನೂ ಓದಿ: Karnataka High Court: ನಿರ್ಲಕ್ಷ್ಯ ಆರೋಪದಿಂದ ವೈದ್ಯರು ಮತ್ತು ರೋಗಿ ಸಂಬಂಧ ಹಳಸುತ್ತಿದೆ
ಈ ಮಕ್ಕಳಿಗೆ ಜನವರಿ 12ರಂದು ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ರೂಬೆಲ್ಲಾ ಚುಚ್ಚುಮದ್ದು ನೀಡಿದ್ದರು. ಚುಚ್ಚುಮದ್ದು ಹಾಕಿಸಿಕೊಂಡು ಮನೆಗೆ ಹೋಗಿದ್ದ ಮಕ್ಕಳಲ್ಲಿ ಐವರು ಮಕ್ಕಳು ತೀವ್ರ ಅಸ್ವಸ್ಥಗೊಂಡು ವಾಂತಿ-ಭೇದಿಯಿಂದ ಬಳಲಿದ್ದರು. ಕುಟುಂಬಸ್ಥರು ತಕ್ಷಣವೇ ಐದೂ ಮಕ್ಕಳನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಕರೆತಂದಿದ್ದರು. ಈ ಪೈಕಿ ಮೂವರು ಮಕ್ಕಳಿಗೆ ಐಸಿಯುನಲ್ಲಿ ಆಮ್ಲಜನಕದ ನೆರವಿನೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೂವರು ಕಂದಮ್ಮಗಳು ನಿಗೂಢವಾಗಿ ಅಸುನೀಗಿದ್ದವು.