ವಿಜಯಪುರ: ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ..!

Published : Mar 23, 2023, 01:00 AM IST
ವಿಜಯಪುರ: ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ..!

ಸಾರಾಂಶ

ಕರ್ನಾಟಕ ಉಚ್ಛ ನ್ಯಾಯಾಲಯದ ಹಿರಿಯ ನ್ಯಾಯಮೂರ್ತಿಗಳು ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರ ನಿರ್ದೇಶನದಂತೆ ಎಲ್ಲ ವರ್ಗದ ಕಕ್ಷಿದಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿಲ್ಲಾ ಕೇಂದ್ರ ಹಾಗೂ ಜಿಲ್ಲೆಯ ಎಲ್ಲ ತಾಲೂಕಾ ನ್ಯಾಯಾಲಯಗಳಲ್ಲಿ ಜೂನ್.24 ರಂದು  ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 

ಷಡಕ್ಷರಿ‌ ಕಂಪೂನವರ್, ಏಷ್ಯಾನೆಟ್ ಸುವರ್ಣ ನ್ಯೂಸ್, ವಿಜಯಪುರ

ವಿಜಯಪುರ(ಮಾ.23): ವಿಜಯಪುರ ಜಿಲ್ಲಾ ಕೇಂದ್ರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಜೂನ್ 24 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತನಲ್ಲಿ ಕಕ್ಷಿದಾರರು ಭಾಗವಹಿಸಿ, ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿದೆ. ಹೀಗಾಗಿ ಈ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಕಕ್ಷಿದಾರರಿಗೆ ಅನುಕೂಲವಾಗಲು ಜಿಲ್ಲೆಯಾದ್ಯಂತ ಲೋಕಾದಾಲತ್..!

ಕರ್ನಾಟಕ ಉಚ್ಛ ನ್ಯಾಯಾಲಯದ ಹಿರಿಯ ನ್ಯಾಯಮೂರ್ತಿಗಳು ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರ ನಿರ್ದೇಶನದಂತೆ ಎಲ್ಲ ವರ್ಗದ ಕಕ್ಷಿದಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿಲ್ಲಾ ಕೇಂದ್ರ ಹಾಗೂ ಜಿಲ್ಲೆಯ ಎಲ್ಲ ತಾಲೂಕಾ ನ್ಯಾಯಾಲಯಗಳಲ್ಲಿ ಜೂನ್.24 ರಂದು  ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಉರಿಗೌಡ-ನಂಜೇಗೌಡ ಮುಗಿದ ಅಧ್ಯಾಯ: ಸಿಎಂ ಬೊಮ್ಮಾಯಿ

ರಾಜಿಯಾಗಬಲ್ಲ ಪ್ರಕರಣಗಳು ಲೋಕಾದಾಲತ್‌ನಲ್ಲಿ ಇತ್ಯರ್ಥ..!

ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ರಾಜಿಗೆ ಒಳಪಡಬಹುದಾದ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು, ವರ್ಗಾವಣೆಗಳ ಲಿಖಿತ ಕಾಯ್ದೆಯ ಪ್ರಕರಣಗಳು (ಚೆಕ್ ಬೌನ್ಸ್ ಕೇಸುಗಳು) ಮೋಟಾರು ವಾಹನ ಅಪಘಾತದಲ್ಲಿ ಪರಿಹಾರ ಕೋರಿ ಸಲ್ಲಿಸಿರುವ ಪ್ರಕರಣಗಳು, ವಿಚ್ಛೇದನವನ್ನು ಹೊರತುಪಡಿಸಿ ಇರುವ ಕೌಟುಂಬಿಕ ವ್ಯಾಜ್ಯಗಳು, ಆಸ್ತಿಯಲ್ಲಿ ವಿಭಾಗ ಕೋರಿರುವ ದಾವೆಗಳು ಹಾಗೂ ಇತರೆ ಸಿವಿಲ್ ವ್ಯಾಜ್ಯಗಳು, ದೂರವಾಣಿ ಬಾಕಿ ಬಿಲ್ಲುಗಳ ಪಾವತಿ ಪ್ರಕರಣಗಳು, ನೀರಿನ ಬಿಲ್ಲ ಪಾವತಿ ಪ್ರಕರಣಗಳು, ಜೀವನಾಂಶ ಭತ್ಯೆ ಕೋರಿರುವ ಪ್ರಕರಣಗಳು, ಕಾರ್ಮಿಕ ವ್ಯಾಜ್ಯಗಳು, ಭೂ-ಸ್ವಾಧೀನ ಪ್ರಕರಣಗಳು, ಕಂದಾಯ ಪ್ರಕರಣಗಳು, ಸಾಲ ವಸೂಲಾತಿ ಪ್ರಕರಣಗಳು, ಬ್ಯಾಂಕ್ ವ್ಯಾಜ್ಯಗಳು ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾತ್‍ನಲ್ಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ಜಿಲ್ಲೆಯಲ್ಲಿ ಜೂನ್.24 ರಂದು ಜರುಗುವ ರಾಷ್ಟ್ರೀಯ ಲೋಕ್ ಅದಾತ್‍ನಲ್ಲಿ ಕಕ್ಷಿದಾರರು ತಮ್ಮ  ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡು ನೆಮ್ಮದಿಯ ಜೀವನಕ್ಕೆ ನಾಂದಿ ಹಾಡಲು ಸುವರ್ಣಾವಕಾಶ ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ವೆಂಕಣ್ಣ ಬಿ ಹೊಸಮನಿ ಅವರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Read more Articles on
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ