* ಉಡುಪಿ ಶ್ರೀಕೃಷ್ಣನ ದರ್ಶನಕ್ಕೆ ಭಕ್ತರಿಗೆ ಅವಕಾಶ
* ಉಡುಪಿ ಶ್ರೀಕೃಷ್ಣಾಷ್ಟಮಿಯಂದು ಭಕ್ತರಿಗೆ ದರ್ಶನಾವಕಾಶ
* ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ
ಉಡುಪಿ, (ಆ.28): ಜನ್ಮಾಷ್ಟಮಿ ಪ್ರಯುಕ್ತ ಉಡುಪಿಯ ಶ್ರೀಕೃಷ್ಣನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆ. 30ರಂದು ಬೆಳಗ್ಗೆ 8ರಿಂದ ಸಂಜೆ 6ರ ವರೆಗೆ, ಆ. 31ರ ಬೆಳಗ್ಗೆ 7.30ರಿಂದ ಮಧ್ಯಾಹ್ನ 1ರ ವರೆಗೆ, ರಥೋತ್ಸವದ ಬಳಿಕ ಸುಮಾರು 5 ಗಂಟೆಯಿಂದ ದರ್ಶನಾವಕಾಶವಿದೆ.
ಯಾತ್ರಾರ್ಥಿಗಳು ವಿಶ್ವಪಥದ ಮೂಲಕ, ಸುದರ್ಶನ ಪ್ರವೇಶ ಪತ್ರ ಹೊಂದಿದ ಸ್ಥಳೀಯರು ಉತ್ತರ ಮತ್ತು ದಕ್ಷಿಣ ದ್ವಾರದಿಂದ ದರ್ಶನ ಪಡೆಯಬಹುದು. ಭಕ್ತರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿ ದರ್ಶನ ನಡೆಸಬೇಕೆಂದು ಮಠದ ವ್ಯವಸ್ಥಾಪಕರು ಕೋರಿದ್ದಾರೆ.
ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಉಡುಪಿಗೆ ಬಂದ ಬೊಮ್ಮಾಯಿಗೆ ವಿಶೇಷ ಗಿಫ್ಟ್
ಶ್ರೀಕೃಷ್ಣ ಜನ್ಮಾಷ್ಟಮಿ ತಯಾರಿ ಭರದಿಂದ ನಡೆಯುತ್ತಿದೆ. ಆ. 30 ರಂದು ಬೆಳಗ್ಗೆ ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಲಕ್ಷತುಳಸಿ ಅರ್ಚನೆ ನಡೆಸುವರು. ತುಳಸಿ ಪುಷ್ಪ ನೀಡುವವರು ಆ. 29ರ ಒಳಗೆ ಒಪ್ಪಿಸಬಹುದು.
ಜನ್ಮಾಷ್ಟಮಿ ಪ್ರಯುಕ್ತ ಗರ್ಭಗುಡಿಯಲ್ಲಿ ಸ್ಯಾಕ್ಸೋಫೋನ್, ನಾಗಸ್ವರ, ವೇಣುವಾದನ ಕಛೇರಿ ನಡೆಯಲಿದೆ. ಆ. 30ರ ಮಧ್ಯರಾತ್ರಿ 12.30ರ ಬಳಿಕ ಅರ್ಘ್ಯ ಪ್ರದಾನಕ್ಕೆ ಭಕ್ತರಿಗೆ ಕನಕನ ಕಿಂಡಿ ಎದುರು ಮತ್ತು ವಸಂತ ಮಂಟಪದಲ್ಲಿ ಅವಕಾಶ ಕಲ್ಪಿಸಲಾಗಿದೆ.