ಸುರಪುರ: ಪರಸ್ಪರ ಬಡಿದಾಡಿಕೊಂಡ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು

Suvarna News   | Asianet News
Published : Dec 27, 2019, 10:15 AM IST
ಸುರಪುರ: ಪರಸ್ಪರ ಬಡಿದಾಡಿಕೊಂಡ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು

ಸಾರಾಂಶ

ಕಟೌಟ್ ಕಟ್ಟುವ ವಿಚಾರಕ್ಕೆ ಜಗಳ| ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ವಾಗ್ವಾದ| ಸುರಪುರ ಪಟ್ಟಣದಲ್ಲಿ ಬುಧವಾರ ತಡರಾತ್ರಿ ನಡೆದ ಘಟನೆ| ಸುರಪುರ ಕ್ಷೇತ್ರದ ಬಿಜೆಪಿ ಶಾಸಕ ರಾಜಗೌಡ ಹುಟ್ಟುಹಬ್ಬದ ನಿಮಿತ್ತ ಬಿಜೆಪಿ ಕಾರ್ಯಕರ್ತರು ಬ್ಯಾನರ್ ಹಾಗೂ ಕಟೌಟ್‌ಗಳನ್ನು ಕಟ್ಟಲು ನಗರಕ್ಕೆ ಆಗಮಿಸಿದ್ದರು| ಬರ್ತ್ ಡೇ ಬ್ಯಾನರ್ ಹರಿದು ಹಾಕಿದ ಕಾಂಗ್ರೆಸ್ ಕಾರ್ಯಕರ್ತರು|

ಯಾದಗಿರಿ(ಡಿ.27): ಬ್ಯಾನರ್ ಹಾಗೂ ಕಟೌಟ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಧ್ಯೆ ಜಗಳವಾದ ಘಟನೆ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ಬುಧವಾರ ತಡರಾತ್ರಿ ನಡೆದಿದೆ. 

ಸುರಪುರ ಕ್ಷೇತ್ರದ ಬಿಜೆಪಿ ಶಾಸಕ ರಾಜುಗೌಡ ಅವರ ಹುಟ್ಟುಹಬ್ಬದ ನಿಮಿತ್ತ ಬಿಜೆಪಿ ಕಾರ್ಯಕರ್ತರು ಬ್ಯಾನರ್ ಹಾಗೂ ಕಟೌಟ್‌ಗಳನ್ನು ಕಟ್ಟಲು ನಗರಕ್ಕೆ ಆಗಮಿಸಿದ್ದರು. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.

ಜಗಳ ತಾರಕಕ್ಕೇರಿದ್ದರಿಂದ ಒಬ್ಬರಿಗೊಬ್ಬರು ಕೈ ಕೈ ಮಿಲಾಯಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಬ್ಯಾನರ್ ಕಟ್ಟಲು ತಂದಿದ್ದ ಟಾಟಾ ಏಸ್ ವಾಹನದ ಗ್ಲಾಸ್ ಧ್ವಂಸಗೊಳಿಸಲಾಗಿದೆ. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರು ಬರ್ತ್ ಡೇ ಬ್ಯಾನರ್ ಹರಿದು ಹಾಕಿದ್ದಾರೆ.  
 

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!