ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಳೆ ಮುಂದೂವರೆದಿದೆ. ಅಲ್ಲಲ್ಲಿ ಆಗಾಗ್ಗೆ ಮಳೆಯಾಗುತ್ತಿದ್ದು ಮಳೆ ಸ್ವಲ್ಪಮಟ್ಟಿಗೆ ಕ್ಷೀಣಿಸಿದ್ದರು ಗಾಳಿಯ ಆರ್ಭಟ ಜೋರಾಗಿದೆ.ಭಾರೀ ಪ್ರಮಾಣದಲ್ಲಿ ಗಾಳಿ ಬೀಸುತ್ತಿದ್ದು ವಿದ್ಯುತ್ ಕಂಬಗಳು ಮರಗಳು ಧರೆಗುರುಳುತ್ತಿವೆ.
ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು
ಚಿಕ್ಕಮಗಳೂರು (ಜು.22): ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಳೆ ಮುಂದೂವರೆದಿದೆ. ಅಲ್ಲಲ್ಲಿ ಆಗಾಗ್ಗೆ ಮಳೆಯಾಗುತ್ತಿದ್ದು ಮಳೆ ಸ್ವಲ್ಪಮಟ್ಟಿಗೆ ಕ್ಷೀಣಿಸಿದ್ದರು ಗಾಳಿಯ ಆರ್ಭಟ ಜೋರಾಗಿದೆ.ಭಾರೀ ಪ್ರಮಾಣದಲ್ಲಿ ಗಾಳಿ ಬೀಸುತ್ತಿದ್ದು ವಿದ್ಯುತ್ ಕಂಬಗಳು ಮರಗಳು ಧರೆಗುರುಳುತ್ತಿವೆ. ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ನಡೆಸುತ್ತಿದೆ.ಮೇಸ್ಕಾ ಇಲಾಖೆ ಸಿಬ್ಬಂದಿಗಳು ಮಳೆಯ ನಡುವೆ ನಿರಂತರ ಹರಸಾಹಸ ಪಟ್ಟು ವಿದ್ಯುತ್ ಸಂಪರ್ಕ ಸರಿಪಡಿಸುತ್ತಿದ್ದರು ಬಾರೀ ಗಾಳಿಯ ಹೊಡೆತಕ್ಕೆ ಮರ, ವಿದ್ಯುತ್ ಕಂಬಗಳು ಬಿಳುತ್ತಿರುವುದರಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ.
undefined
ಮಳೆಯಿಂದ ಜಿಲ್ಲೆಯಲ್ಲಿ 1849 ವಿದ್ಯುತ್ ಕಂಬಗಳಿಗೆ ಹಾನಿ: ಮಲೆನಾಡು ಭಾಗದಲ್ಲಿ ಕಳೆದೊಂದು ವಾರ ಮಳೆ ಅಬ್ಬರಿಸಿತ್ತು. ಆದರೆ ಕಳೆದ ಎರಡ್ಮೂರು ದಿನಗಳಿಂದ ಮಳೆ ಕಡಿಮೆಯಾಗಿದ್ದರೂ ಬೀಸ್ತಿರೋ ರಣ ಗಾಳಿಗೆ ಬೃಹತ್ ಮರ ಹಾಗೂ ವಿದ್ಯುತ್ ಕಂಬಗಳು ಮುರಿದು ಬೀಳುತ್ತಿದೆ.ವಸ್ತಾರೆ ಸಮೀಪದ ಆಮೆಕಟ್ಟೆ ಬಳಿ ರಣ ಗಾಳಿಗೆ 66 ಕೆ.ವಿ ವಿದ್ಯುತ್ ಟವರ್ ಅರ್ಧಕ್ಕೆ ಮುರಿದು ಬಿದ್ದಿದೆ. ಇದರಿಂದಾಗಿ ಆಲ್ದೂರು ಹೋಬಳಿಯ ಹತ್ತಾರು ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಬಂದ್ ಆಗಿದ್ದು, ಇನ್ನು ಎರಡು ದಿನ ಕತ್ತಲಲ್ಲಿ ಗ್ರಾಮದ ಜನರು ಕಳೆಯುವಂತೆ ಆಗಿದೆ.
ಮಳೆ ಜೊತೆಗೆ ಮಡಿಕೇರಿ ನಗರಸಭೆ ಎಡವಟ್ಟಿನಿಂದ ಕುಸಿಯುತ್ತಿರುವ ಸಾಯಿ ಕ್ರೀಡಾಂಗಣ ಜಂಕ್ಷನ್ ರಸ್ತೆ!
ಜಿಲ್ಲೆಯಲ್ಲಿ ಧಾರಾಕಾರ ಮಳೆಯ ಜೊತೆಗೆ ಗಂಟೆಗೆ 45 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿಯು ಬೀಸುತ್ತಿರುವುದರಿಂದ ಹಾನಿಯ ಪ್ರಮಾಣ ಹೆಚ್ಚಾಗಿದೆ. ಭಾರಿ ಗಾಳಿಯಿಂದಾಗಿ ಮನೆಗಳ ಮೇಲೆ ಹಾಗೂ ವಿದ್ಯುತ್ ಕಂಬಗಳ ಮೇಲೆ ಮರಗಳು ಉರುಳಿ ಬಿದ್ದು ಹೆಚ್ಚಿನ ಹಾನಿ ಸಂಭವಿಸಿದೆ ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿ 1849 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಇದರಿಂದಾಗಿ ವಿದ್ಯುತ್ ಸಂಪರ್ಕದಲ್ಲೂ ವ್ಯತ್ಯಯ ಉಂಟಾಗಿತ್ತು. ಹೀಗಾಗಿ ಈಗಾಗಲೇ 1693 ವಿದ್ಯುತ್ ಕಂಬಗಳನ್ನು ಬದಲಿಸಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ.
ಕೂದಲೆಳೆ ಅಂತರಲ್ಲಿ ಪಾರು: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕೂದಲೆಳೆ ಅಂತರದಲ್ಲಿ ಕಾರಿನಲ್ಲಿದ್ದವರು ಪಾರಾಗಿದ್ದಾರೆ. ಅಂತಹದೆ ಘಟನೆ ಸೋಮವಾರ ನಡೆದಿದ್ದು ನಡೆದು ಹೋಗುತ್ತಿದ್ದ ವ್ಯಕ್ತಿಯ ಮೇಲೆ ವಿದ್ಯುತ್ ಕಂಬ ಬಿದ್ದು ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.ಮೂಡಿಗೆರೆ ತಾಲೂಕು ತುಂಬರಗಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ದಿವೀತ್ ಎಂಬ ಯುವಕ ಬಸ್ ಇಳಿದು ಮನೆಗೆ ತೆರಳುತ್ತಿದ್ದ ಈ ವೇಳೆ ವಿದ್ಯುತ್ ಕಂಬ ಮೈಮೇಲೆ ಬಿದ್ದಿದೆ. ಯುವಕನ ತಲೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ.
ಜೈಲಿನಲ್ಲಿ ದರ್ಶನ್ ಹಾಗೂ ವಿನೋದ್ ರಾಜ್ ಭೇಟಿ: ಬಾಚಿ ಅಪ್ಪಿಕೊಂಡು ಪರಸ್ಪರ ಕಣ್ಣೀರಿಟ್ಟರು!
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಲೆನಾಡಲ್ಲಿ ಮಳೆ ಇಲ್ಲದಿದ್ರು ರಣ ಗಾಳಿ ಅಬ್ಬರದಿಂದ ತೇವಗೊಂಡಿದ್ದ ಮನೆ ಗೋಡೆ ಕುಸಿತವಾಗಿದೆ. ಚಿಕ್ಕಮಗಳೂರು ತಾಲೂಕಿನ ಚಂಡಗೋಡು ಗ್ರಾಮದಲ್ಲಿ ಘಟನೆ ನಡೆದಿದ್ದು ಮನೆಯಲ್ಲಿ ಮೂವರು ಮಲಗಿದ್ದರು, ಮೂವರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡುವ ಕಾರ್ಮಿಕರ ಮನೆಯಾಗಿದ್ದು ಸ್ಥಳಕ್ಕೆ ಗ್ರಾಮ ಪಂಚಾಯತಿ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದಾರೆ.