ಬೆಂಗಳೂರು: ಅಪಾಯಕಾರಿ ಕಟ್ಟಡಗಳ ತೆರವಿಗೆ ಕಾಯ್ದೆ ತಿದ್ದುಪಡಿ, ಡಿ.ಕೆ.ಶಿವಕುಮಾರ್‌

By Kannadaprabha News  |  First Published Oct 25, 2024, 8:37 AM IST

ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಅಗತ್ಯ ಕ್ರಮ ಕೈಗೊಳ್ಳುವ ಸಂಪೂರ್ಣ ಅಧಿಕಾರವಿದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಯಾವುದೇ ಆಸ್ತಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದು. ಬಿಎಂಟಿಎಫ್, ಬಿಡಿಎ, ಬಿಬಿಎಂಪಿ, ಬಿಎಂಆರ್‌ಡಿಎ ಕೆಲವು ತಿದ್ದುಪಡಿ ತಂದು ಅವರಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ 


ಬೆಂಗಳೂರು(ಅ.25): ಅಪಾಯಕಾರಿ, ಶಿಥಿಲಗೊಂಡ ಹಾಗೂ ಅನಧಿಕೃತ ಕಟ್ಟಡ ತೆರವಿಗೆ ಕಾನೂನು ತಿದ್ದುಪಡಿ ಅಥವಾ ಸುಗ್ರೀವಾಜ್ಞೆ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದು ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. 

ನಗರದಲ್ಲಿ ಮಳೆ ಅವಾಂತರ ಕುರಿತು ಗುರುವಾರ ಅಧಿಕಾರಿಗಳೊಂದಿಗೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ತುರ್ತು ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಅಗತ್ಯ ಕ್ರಮ ಕೈಗೊಳ್ಳುವ ಸಂಪೂರ್ಣ ಅಧಿಕಾರವಿದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಯಾವುದೇ ಆಸ್ತಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದು. ಬಿಎಂಟಿಎಫ್, ಬಿಡಿಎ, ಬಿಬಿಎಂಪಿ, ಬಿಎಂಆರ್‌ಡಿಎ ಕೆಲವು ತಿದ್ದುಪಡಿ ತಂದು ಅವರಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದರು.

Latest Videos

undefined

'ಬ್ರ್ಯಾಂಡ್ ಬೆಂಗಳೂರು' ಬೇಡ ಸುರಕ್ಷಿತ ನಗರ ಸಾಕು: ಆರ್‌. ಅಶೋಕ್‌

ಸೋಮವಾರ ಕಟ್ಟಡ ಸರ್ವೇ:

ನಿರ್ಮಾಣ ಹಂತದ ಕಟ್ಟಡಗಳ ಬಗ್ಗೆ ಸೋಮವಾರದಿಂದಸಮೀಕ್ಷೆ ನಡೆಸಲಾಗುವುದು. ಖಾಸಗಿ ಹಾಗೂ ಪಾಲಿಕೆಯಿಂದ ಈ ಸಮೀಕ್ಷೆ ನಡೆಸಲಾಗುವುದು. ಯಾವುದಾದರೂ ಕಟ್ಟಡ ಕಾನೂನುಬಾಹಿರವಾಗಿ ನಿರ್ಮಾಣವಾಗು ತಿದೆಯೇ ಎಂದು ಪತ್ತೆ ಮಾಡಿ ನಿರ್ಮಾಣ ತಡೆಗಟ್ಟ ಲಾಗುವುದು. ಪ್ರತಿ ಕಟ್ಟಡದ ಫೋಟೋ ಹಾಗೂ ವಿಡಿಯೋಗಳನ್ನು ಸಂಗ್ರಹಿಸಲಾಗುವುದು. ಜಂಟಿ ಆಯುಕ್ತರ ನೇತೃತ್ವದಲ್ಲಿ ಡೋನ್ ಮೂಲಕ ಇದರ ಮೇಲ್ವಿಚಾರಣೆ ಮಾಡಲಾಗುವುದು ಎಂದರು.

ರಾಜಕಾಲುವೆ ಪಕ್ಕ 50 ಅಡಿ ಬಫ‌ರ್, 300 ಕಿ. ಮೀರಸ್ತೆ:ರಾಜಕಾಲುವೆಯ ಅಕ್ಕಪಕ್ಕದಲ್ಲಿ 50 ಅಡಿ ಅಂತರದಲ್ಲಿಯಾರೂಕಟ್ಟಡಕಟ್ಟುವಂತಿಲ್ಲ.ಇಂತಹ ಜಾಗದಲ್ಲಿ 300 ಕಿ.ಮೀ. ಉದ್ದದ ರಸ್ತೆ ನಿರ್ಮಾಣ ಮಾಡಲಾಗುವುದು. ನೀರು ಹರಿಯಲು ಕೆರೆ ನಡುವೆ ಸಂಪರ್ಕ ಜಾಲ: ಎಲ್ಲಾ ಕೆರೆಗಳ ನಡುವೆ ಸಂಪರ್ಕ ಏರ್ಪಡಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸಲು ಸೂಚಿಸಲಾಗಿದೆ. ಬರಗಾಲದಲ್ಲಿಕೆರೆಗಳು ಬತ್ತಿ ಹೋಗಿದ್ದವು. ಕೆರೆಗಳು ತುಂಬಬೇಕು, ಅಂತರ್ಜಲ ಪುನಶ್ಚತನಗೊಳ್ಳ ಬೇಕು. ಹೀಗಾಗಿ, ಈಕ್ರಮಕೈಗೊಳ್ಳಲಾಗಿದೆಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಪ್ರವಾಹದ ನೀರು ಕೆರೆಗೆ ಹೋಗುವುದು ಹಾಗೂ ಕೆರೆಯಿಂದ ಕೋಡಿ ಬೀಳುವ ನೀರು ಸರಾಗವಾಗಿ ಹೋಗಲು ಅನುವಾಗುವಂತೆ ಗೇಟ್ ಅಳವಡಿಸಲು ಸೂಚಿಸಿದ್ದೇನೆ. ಇದಕ್ಕೆ ಬೇಕಾಗಿರುವ ಮೂಲ ಸೌಕರ್ಯತಯಾರಿ ಮಾಡಿಕೊಳ್ಳಲು ಬಿಡಿಎ, ಬಿಬಿಎಂಪಿ, ಕೆರೆ ಅಭಿವೃದ್ದಿ ಪ್ರಾಧಿಕಾರಕ್ಕೆ ಸೂಚಿಸಿದ್ದೇನೆ ಎಂದರು. ಬಿಬಿಎಂಪಿ ಆಡಳಿತಾಧಿಕಾರಿ ಉಮಾ ಶಂಕರ್, ಮುಖ್ಯ ಆಯುಕ್ತ ತುಷಾ‌ರ್ ಇದ್ದರು.

ಮನೆ ಬಿಡಲು ಒಪ್ಪದಿದ್ದರೆ ಮುಚ್ಚಳಿಕೆ ಬರೆದುಕೊಡಿ 

ಕೇಂದ್ರಿಯ ವಿಹಾರ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ. ಕೇಂದ್ರಿಯ ವಿಹಾರ ಅಪಾರ್ಟ್‌ಮೆಂಟ್‌ನ ಕೆಲವು ಕುಟುಂಬದ ವರುಸ್ಥಳಾಂತರಗೊಳ್ಳಲು ಒಪ್ಪುತ್ತಿಲ್ಲ. ಹೀಗಾ ಗಿ, ಆ ಕುಟುಂಬದವರಿಂದ ಮುಚ್ಚಳಿಕೆ ಪತ್ರ ಬರೆಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿ ದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಹೇಳಿದರು.

click me!