ಗಣಿಬಾಧಿತ ಪ್ರದೇಶದಲ್ಲಿ ತಾಲೂಕಿಗೊಂದು ವೃಕ್ಷೋದ್ಯಾನ: ಸಚಿವ ಈಶ್ವರ್ ಖಂಡ್ರೆ

Published : Dec 22, 2024, 07:58 PM IST
ಗಣಿಬಾಧಿತ ಪ್ರದೇಶದಲ್ಲಿ ತಾಲೂಕಿಗೊಂದು ವೃಕ್ಷೋದ್ಯಾನ: ಸಚಿವ ಈಶ್ವರ್ ಖಂಡ್ರೆ

ಸಾರಾಂಶ

ಗಣಿಬಾಧಿತ ಪ್ರದೇಶಗಳಲ್ಲಿ ಪರಿಸರದ ಮೇಲಿನ ದುಷ್ಪರಿಣಾಮ ತಗ್ಗಿಸಲು ತಾಲೂಕಿಗೊಂದು ವೃಕ್ಷೋದ್ಯಾನ ನಿರ್ಮಿಸಲು ಕಾರ್ಯ ಯೋಜನೆ ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ ನೀಡಿದರು.   

ಬಳ್ಳಾರಿ (ಡಿ.22): ಗಣಿಬಾಧಿತ ಪ್ರದೇಶಗಳಲ್ಲಿ ಪರಿಸರದ ಮೇಲಿನ ದುಷ್ಪರಿಣಾಮ ತಗ್ಗಿಸಲು ತಾಲೂಕಿಗೊಂದು ವೃಕ್ಷೋದ್ಯಾನ ನಿರ್ಮಿಸಲು ಕಾರ್ಯ ಯೋಜನೆ ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ ನೀಡಿದರು. ಬಳ್ಳಾರಿಯ ಅರಣ್ಯ ಇಲಾಖೆ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಕರ್ನಾಟಕ ಗಣಿ ಪರಿಸರ ಪುನರ್ ಸ್ಥಾಪನೆ ನಿಗಮ (ಕೆಎಂಇಆರ್ಸಿ) ನಿಧಿ ಬಳಸಿಕೊಂಡು ಜೀವಿ ಪರಿಸ್ಥಿತಿಯ ಮೇಲಾಗಿರುವ ಹಾನಿ ತಗ್ಗಿಸಲು ಕ್ರಿಯಾಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು. ಗಣಿ ಪ್ರದೇಶಗಳಲ್ಲಿ ವನ್ಯಜೀವಿ ಸಂರಕ್ಷಣೆ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಹಾಗೂ ವನ್ಯ ಜೀವಿಗಳಿಗೆ ಬೇಸಿಗೆಯಲ್ಲಿ ನೀರಿನ ಕೊರತೆ ಬಾರದಂತೆ ನೀರುಗುಂಡಿಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಅವರು ಸೂಚಿಸಿದರು. 

ಬಳ್ಳಾರಿ ವೃತ್ತದಲ್ಲಿ ಎಷ್ಟು ಸಿ ಪ್ರವರ್ಗದ ಗಣಿಗಳಿವೆ? ಗಣಿ ಕಂಪನಿಗಳಿಗೆ ಪರಿಹಾರಾತ್ಮಕ ಅರಣ್ಯ ಬೆಳೆಸಲು ಎಷ್ಟು ಡಿಗ್ರೇಡೆಡ್ ಅರಣ್ಯ ಭೂಮಿ ನೀಡಲಾಗಿದೆ? ಎಷ್ಟು ಭೂಮಿಯಲ್ಲಿ ಪರಿಹಾರಾತ್ಮಕ ಅರಣ್ಯ ಬೆಳೆಸಲಾಗಿದೆ? ಅರಣ್ಯದಂಚಿನಲ್ಲಿ ಶ್ರೀಗಂಧ, ಬೀಟೆ, ತೇಗ ಮೊದಲಾದ ಬೆಲೆಬಾಳುವ ಮರಗಳ ಜಿಯೋ ಟ್ಯಾಗ್ ಮಾಡಲಾಗಿದೆಯೇ ಎಂಬ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದ ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು. ದಾವಣಗೆರೆ, ಕೊಪ್ಪಳ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ ವಿಭಾಗದಲ್ಲಿ ಹೆಚ್ಚಿನ ಸಸಿಗಳನ್ನು ನೆಟ್ಟು ಪೋಷಿಸಲು ಮತ್ತು ರೈತರ ಬೇಡಿಕೆಗೆ ಅನುಗುಣವಾಗಿ ಸಸಿಗಳನ್ನು ವಿತರಿಸಲು ನರ್ಸರಿಗಳಲ್ಲಿ ಸಸಿ ಬೆಳೆಸಲು ಹೆಚ್ಚಿನ ಮುತುವರ್ಜಿ ವಹಿಸುವಂತೆ ಸೂಚಿಸಿದರು. 

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿಲ್ಲ ಪಶು ವೈದ್ಯರು?: ಪ್ರಾಣಿಗಳು ಸತ್ತರೆ ಮರಣೋತ್ತರ ಪರೀಕ್ಷೆ ಹೇಗೆ?

ಅರಣ್ಯ ಒತ್ತುವರಿ ಬಗ್ಗೆ ನಿಗಾ ಇಡಲು ಸೂಚನೆ ಗುತ್ತಿಗೆ ನೀಡಿರುವ ಪ್ರದೇಶಕ್ಕಿಂತ ಹೆಚ್ಚುವರಿಯಾಗಿ ಗಣಿಗಾರಿಕೆಗೆ ಅರಣ್ಯ ಪ್ರದೇಶ ಒತ್ತುವರಿಯಾಗುತ್ತಿರುವ ಬಗ್ಗೆ ದೂರುಗಳಿದ್ದು, ಉಪಗ್ರಹ ಚಿತ್ರ ಮತ್ತು ಕೆ.ಎಂ.ಎಲ್. ನಕ್ಷೆ ಆಧರಿಸಿ ಅರಣ್ಯ ಸಂರಕ್ಷಿಸುವಂತೆಯೂ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಶಾಸಕ ಭರತ ರೆಡ್ಡಿ, ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ ನಾಯಕ್, ಉಪ ವಲಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಅರ್ನಲಾನ್, ಸಂದೀಪ್ ಸೂರ್ಯವಂಶಿ, ಮಾರ್ಕಂಡೇಯ ಮತ್ತು ಜಿ.ಜೆ. ರವಿ ಮತ್ತಿತರರು ಉಪಸ್ಥಿತರಿದ್ದರು.

ಪರಿಸರ ಸಮತೋಲನ ಇಲ್ಲದಿದ್ದರೆ ಪ್ರಕೃತಿ ಉಳಿಯದು: ಭೂ ಭಾಗದ ಶೇ.33ರಷ್ಟು ಇರಬೇಕಿದ್ದ ಅರಣ್ಯ ಸಂಪತ್ತು ಇಂದು ಶೇ.22ಕ್ಕೆ ಇಳಿದಿರುವುದರಿಂದ ಮಾನವ ಕುಲ ಅನೇಕ ಸವಾಲು ಎದುರಿಸಬೇಕಿದೆ. ಪರಿಸರ ಸಮತೋಲನ ಇಲ್ಲದಿದ್ದರೆ ಪ್ರಕೃತಿ ಉಳಿಯದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಕಳವಳ ವ್ಯಕ್ತಪಡಿಸಿದರು. ತಾಲೂಕಿನ ಹಿಡಕಲ್ ಜಲಾಶಯದ ಬಳಿ ಮಂಗಳವಾರ ಸುಮಾರು ₹2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಉಮೇಶ ಕತ್ತಿ ಚಿಟ್ಟೆ ಉದ್ಯಾನವನ ಉದ್ಘಾಟಿಸಿ ಮಾತನಾಡಿದರು.

ಗೃಹ ಆರೋಗ್ಯ ಯೋಜನೆ ಫೆಬ್ರವರಿಯಲ್ಲಿ ರಾಜ್ಯವ್ಯಾಪಿ ವಿಸ್ತರಣೆ: ಸಚಿವ ದಿನೇಶ್ ಗುಂಡೂರಾವ್

ಮೈಸೂರು ಬೃಂದಾವನ ಮಾದರಿಯಲ್ಲಿ ಹಿಡಕಲ್ ಡ್ಯಾಮ್ ಬಳಿ ನಿರ್ಮಾಣ ಹಂತದ ರಾಜಾ ಲಖಮಗೌಡ ಉದ್ಯಾನಕಾಶಿ ಅಭಿವೃದ್ಧಿಗೆ ಅಗತ್ಯ ಆರ್ಥಿಕ ನೆರವು ಕಲ್ಪಿಸಲಾಗುವುದು. ಸಾರ್ವಜನಿಕ ಸಹಭಾಗಿತ್ವದಡಿ ಈ ಪ್ರದೇಶದಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಿ ಪ್ರೇಕ್ಷಣೀಯ ಸ್ಥಳವನ್ನಾಗಿ ರೂಪಿಸಲಾಗುವುದು. ಆರೋಗ್ಯಕರ ವಾತಾವರಣ ಸೃಷ್ಟಿಸಲು ಚಿಟ್ಟೆ ಪಾರ್ಕ್ ಸ್ಥಾಪಿಸಿರುವುದು ಹೆಮ್ಮೆಯ ಸಂಗತಿ. ಈ ಮೂಲಕ ಅಳಿವಿನಂಚಿನ ಕೀಟ ಸಂಕುಲ ಉಳಿಸಿಕೊಳ್ಳಬೇಕೆಂಬುವುದು ದಿ.ಉಮೇಶ ಕತ್ತಿ ಕನಸು ನನಸಾಗಿದ್ದು, ಅವರು ಮಾಡಿರುವ ಕೆಲಸಗಳು ಅಜರಾಮರವಾಗಿವೆ ಎಂದು ಬಣ್ಣಿಸಿದರು.

PREV
Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ರಾಜ್ಯದಲ್ಲಿ ರಾಜಕೀಯ ಹೊಲಸೆದ್ದು, ಎಲ್ಲ ಪಕ್ಷಗಳು ಗಬ್ಬೆದ್ದು ಹೋಗಿವೆ: ಕೆ.ಎಸ್.ಈಶ್ವರಪ್ಪ