Mandya: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ವಿದ್ಯುತ್‌ ಕಂಬ; ವಾಹನ ಸಂಚಾರಕ್ಕೆ ಕೆಲಕಾಲ ತೊಂದರೆ

By Kannadaprabha News  |  First Published May 11, 2023, 3:16 AM IST

ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಿದ್ಯುತ್‌ ಕಂಬ ಉರುಳಿ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗಿರುವ ಘಟನೆ ತಾಲೂಕಿನ ರುದ್ರಾಕ್ಷಿಪುರ ಗ್ರಾಮದ ಬಳಿ ಬುಧವಾರ ಸಂಜೆ ನಡೆದಿದೆ.


ಮದ್ದೂರು (ಮೇ.11) : ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಿದ್ಯುತ್‌ ಕಂಬ ಉರುಳಿ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗಿರುವ ಘಟನೆ ತಾಲೂಕಿನ ರುದ್ರಾಕ್ಷಿಪುರ ಗ್ರಾಮದ ಬಳಿ ಬುಧವಾರ ಸಂಜೆ ನಡೆದಿದೆ.

ವಿದ್ಯುತ್‌ ಕಂಬ ಹೆದ್ದಾರಿಗೆ ಬಿದ್ದ ಪರಿಣಾಮ ಅರ್ಧ ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡು ವಾಹನ ಸವಾರರು ಪರದಾಡಿದರು. ಅಲ್ಲದೇ, ಅವಘಡದಿಂದ ಪಾರಾಗಿದ್ದಾರೆ. ತಕ್ಷಣವೇ ಸೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ ಹೆದ್ದಾರಿಯಿಂದ ಕಂಬವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Tap to resize

Latest Videos

ಅಮೆರಿಕದಲ್ಲಿ 113 ಕಿ.ಮೀ ವೇಗದಲ್ಲಿ ಬೀಸುತ್ತಿರುವ ಸುಂಟರಗಾಳಿ: ಕನಿಷ್ಠ 26 ಜನ ಬಲಿ

ಸೋಮನಹಳ್ಳಿ ಗ್ರಾಪಂ ವ್ಯಾಪ್ತಿಯ ಕೆ.ಕೋಡಿಹಳ್ಳಿ ಸೇರಿದಂತೆ ವಿವಿಧ ಮತಗಟ್ಟೆಗಳಿಗೆ ಸರಬರಾಜಾಗುತ್ತಿದ್ದ ವಿದ್ಯುತ್‌ ಸಂಪರ್ಕ ಕಡಿತವಾಗಿ ಚುನಾವಣಾ ಪ್ರಕ್ರಿಯೆ ಅರ್ಧ ಗಂಟೆಗೂ ಹೆಚ್ಚು ಕಾಲ ಸ್ಥಗಿತಗೊಂಡ ಪರಿಣಾಮ ಮತದಾನಕ್ಕೆ ಬಂದಿದ್ದ ಮತದಾರರು ಗಂಟೆ ಗಟ್ಟಲೆ ನಿಂತು ಹಿಡಿಶಾಪ ಹಾಕುತ್ತಿದ್ದ ಸನ್ನಿವೇಶಗಳು ಕಂಡು ಬಂದು ರಾತ್ರಿ 8 ಗಂಟೆಯವರೆಗೂ ಮತದಾನ ಪ್ರಕ್ರಿಯೆ ನಡೆಯಿತು.

ಹೆದ್ದಾರಿಯಲ್ಲಿ ಅಳವಡಿಸಿರುವ ವಿದ್ಯುತ್‌ ಕಂಬಗಳ ಸಹಾಯಕ್ಕೆ ಅಳವಡಿಸಿದ್ದ ಕಬ್ಬಿಣದ ತುಂಡುಗಳನ್ನು ದುಷ್ಕರ್ಮಿಗಳು ಕೆಲ ತಿಂಗಳುಗಳ ಹಿಂದೆ ಕಳವು ಮಾಡಿರುವ ಹಿನ್ನೆಲೆಯಲ್ಲಿ ದುಸ್ಥಿತಿಯಲ್ಲಿದ್ದ ವಿದ್ಯುತ್‌ ಕಂಬಗಳನ್ನು ಸರಿಪಡಿಸುವಂತೆ ಹಲವಾರು ಬಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸಾರ್ವಜನಿಕರು ಮತ್ತು ವಾಹನ ಸವಾರರು ಮನವಿ ಮಾಡಿದ್ದರು.

ಚಂದ್ರ ಗ್ರಹಣದ ನಂತರ...ಮೋಚಾ ಸೈತಾನ್ ಆರ್ಭಟ ಮೋಚಾ ಅಲಿಯಾಸ್ ಮೋಖಾ..ಏನಿದು ಮೋಖಾ ಸೀಕ್ರೆಟ್..?

 

ಆದರೆ, ಪ್ರಾಧಿಕಾರದ ಅಧಿಕಾರಿಗಳು ಬೇಜವಾಬ್ದಾರಿತನ ತೋರುತ್ತಿರುವ ಪರಿಣಾಮ ಕಂಬಗಳು ನೆಲ ಕಚ್ಚುತ್ತಿವೆ. ಇನ್ನಾದರೂ ಮಳೆಗಾಲಕ್ಕೂ ಮುನ್ನ ಅಧಿಕಾರಿಗಳು ಎಚ್ಚೆತ್ತು ಕೊಂಡು ಮುಂದಾಗುವ ದೊಡ್ಡ ಅನಾಹುತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

click me!