ವಿಜಯನಗರ ಜಿಲ್ಲೆ ಬೇಡಿಕೆ ಸರಕಾರ ಈಡೇರಿಸುವ ಭರವಸೆ ಇದೆ: ಆನಂದ್ ಸಿಂಗ್

By Suvarna News  |  First Published Dec 9, 2019, 1:16 PM IST

ಕುಟುಂಬ ಸಮೇತ ವಿಶ್ವವಿಖ್ಯಾತ ಹಂಪಿ ವಿರೂಪಾಕ್ಷೇಶ್ವರ ದರ್ಶನ ಪಡೆದ ಆನಂದ್ ಸಿಂಗ್| ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರಕಾರ ಇದೆ| ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಸ್ಥಿರ ಸರಕಾರ ಇರಬೇಕೆಂದು ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿದ್ದಾರೆ|


ಹೊಸಪೇಟೆ(ಡಿ.09): ಜಿಲ್ಲೆಯ ವಿಜಯನಗರ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ ವಿರುದ್ಧ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರು ಗೆಲುವು ಸಾಧಿಸಿದ್ದಾರೆ.
ಬಳಿಕ ಆನಂದ್ ಸಿಂಗ್ ಕುಟುಂಬ ಸಮೇತ ವಿಶ್ವವಿಖ್ಯಾತ ಹಂಪಿ ವಿರೂಪಾಕ್ಷೇಶ್ವರ ದರ್ಶನ ಪಡೆದಿದ್ದಾರೆ. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇದು ಆನಂದಸಿಂಗ್ ಗೆಲುವು ಅಲ್ಲ, ಎಲ್ಲ ವಿಜಯನಗರ ಕ್ಷೇತ್ರದ ಗೆಲುವಾಗಿದೆ ಎಂದು ಹೇಳಿದ್ದಾರೆ. 

ವಿಜಯನಗರ ಜಿಲ್ಲೆ ಸೇರಿದಂತೆ ಎರಡು, ಮೂರು ಬೇಡಿಕೆಗಳು ಇವೆ. ಅವುಗಳನ್ನು ಸರಕಾರ ಈಡೇರಿಸುವ ಭರವಸೆ ಇದೆ. ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರಕಾರ ಇದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಸ್ಥಿರ ಸರಕಾರ ಇರಬೇಕೆಂದು ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. 

Tap to resize

Latest Videos

LIVE: ಮುಕ್ತಾಯದ ಹಂತಕ್ಕೆ ಮತ ಎಣಿಕೆ, 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲವು ಸಾಧ್ಯತೆ

ನನ್ನ ಗೆಲುವಿಗೆ ಶ್ರಮಿಸಿದ ಮುಖಂಡರು, ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಬಳಿಕ ಹೊಸಪೇಟೆ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಆನಂದ್ ಸಿಂಗ ಅವರನ್ನು ತೆರೆದ ವಾಹನದಲ್ಲಿ ಕರೆದುಕೊಂಡು ಹೋಗಿ ಸಂಭ್ರಮಾಚರಣೆ ಮಾಡಿದ್ದಾರೆ. ಇದೇ ವೇಳೆ ಅಭಿಮಾನಿಗಳು ಆನಂದ್ ಸಿಂಗ್ ಅವರ ಭಾವಚಿತ್ರಕ್ಕೆ ಹಾಲಿನ ಅಭಿಶೇಕ ಮಾಡಿದ್ದಾರೆ. 
 

click me!