ಕೊಲ್ಲೂರು ಮೂಕಾಂಬಿಕಾ ದರ್ಶನ ಪಡೆದ ಅನಂತ್ ಅಂಬಾನಿ, ವಿಶೇಷ ಪೂಜೆ ಸಲ್ಲಿಸಿದ ಉದ್ಯಮಿ

Published : Jun 14, 2026, 09:18 PM IST
Anant Ambani Seeks Blessings at Kollur Mookambika

ಸಾರಾಂಶ

ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಭೇಟಿ ನೀಡಿದ್ದಾರೆ. ಹಲವು ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುವ ಅನಂತ್ ಅಂಬಾನಿ ಇದೀಗ ಕೊಲ್ಲೂರಿನಲ್ಲಿ ದೇವಿ ದರ್ಶನ ಪಡೆದಿದ್ದಾರೆ.

ಉಡುಪಿ (ಜೂ.14) ಕರ್ನಾಟಕ ಪ್ರಸಿದ್ಧ ಕ್ಷೇತ್ರ ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನಕ್ಕೆ ಪ್ರತಿ ದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ದೇವಿ ದರ್ಶನ ಪಡೆಯುತ್ತಾರೆ. ಇತ್ತೀಚೆಗೆ ತಮಿಳುನಾಡು ಮುಖ್ಯಮಂತ್ರಿ ಜೊಸೆಫ್ ವಿಜಯ್ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದು ಮರಳಿದ್ದರು. ಇದರ ಬೆನ್ನಲ್ಲೇ ಇದೀಗ ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರಿ ಅನಂತ್ ಅಂಬಾನಿ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಮೂಕಾಂಬಿಕೆ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಅಂಬಾನಿ ಕುಟುಂಬದ ಗುರೂಜಿಯ ಜೊತೆ ಆಗಮಿಸಿ ದರ್ಶನ

ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನಕ್ಕೆ ಆಗಮಿಸಿದ ಅನಂತ್ ಅಂಬಾನಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮುಕಾಂಬಿಕಾ ಸನ್ನಿಧಾನದಲ್ಲಿ ಪೂಜೆ ಕೈಗೊಂಡಿದ್ದಾರೆ. ದೇಗುಲಕ್ಕೆ ಆಗಮಿಸಿದ ಅನಂತ್ ಅಂಬಾನಿಗೆ ದೇವಾಲಯದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು.

ಜೂನ್ 13ರಂದು ಅನಂತ್ ಅಂಬಾನಿ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ದಿನಾಂಕ ನಿಗದಿಯಾಗಿತ್ತು. ಆದರೆ ಮುಂಬೈನಲ್ಲಿ ಭಾರಿ ಮಳೆ ಕಾರಣದಿಂದ ಪ್ರವಾಸ ಮುಂದೂಡಲಾಗಿತ್ತು. ಇಂದು ಸಂಜೆ ವೇಳೆಗೆ ಕೊಲ್ಲೂರು ಮೂಕಾಂಬಿಕೆ ತಲುಪಿದ ಅನಂತ್ ಅಂಬಾನಿ ದೇವಿ ದರ್ಶನ ಪಡೆದಿದ್ದಾರೆ.

ಹಲವು ದೇವಸ್ಥಾನ ದರ್ಶನ ಮಾಡುತ್ತಿರುವ ಅನಂತ್ ಅಂಬಾನಿ

ಅನಂತ್ ಅಂಬಾನಿಗೆ ದೇವರ ಮೇಲೆ ಅಪಾರ ನಂಬಿಕೆ ಹಾಗೂ ಭಕ್ತಿ ಇದೆ. ಇತ್ತೀಚೆಗೆ ಅನಂತ್ ಅಂಬಾನಿ ಸತತವಾಗಿ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇತ್ತೀಚೆಗಷ್ಟೇ ಕೇರಳಕ್ಕೆ ತೆರಳಿ ಹಲವು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಇನ್ನು ತಿರುಪತಿಗೆ ಕುಟುಂಬ ಸಮೇತ ತೆರಳಿ ಪೂಜೆ ಸಲ್ಲಿಸಿದ್ದರು. ಇದೀಗ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದಿದ್ದಾರೆ.

 

PREV
Read more Articles on
click me!

Recommended Stories

Ballari News: ಮಹಿಳೆಗೆ ಅಶ್ಲೀಲ ಮೆಸೇಜ್ ಮಾಡಿ ರೇಣುಕಾಸ್ವಾಮಿಯಂತೆ ಕಾಲುವೆ ಪಕ್ಕದಲ್ಲಿ ಬೀದಿ ಹೆಣವಾದ ಬಸವನಗೌಡ!
Shivamogga: ಹಿರಿಯ ಪತ್ರಕರ್ತನ ಹೆಂಡತಿ ನಿಗೂಢ ಸಾವು; ದೇವರ ಕೋಣೆಯಲ್ಲಿ ಹೆಣ ಕೊಳೆತು ನಾರಿದರೂ ಗೊತ್ತೇ ಆಗಲಿಲ್ಲ!