ಬೆಂಗಳೂರಿನ ಕಟ್ಟಡದಿಂದ ಕಾಲುಜಾರಿ ಬಿದ್ದು ಮೃತಪಟ್ಟ 23 ವರ್ಷದ ಯುವತಿ!

Published : Jun 24, 2025, 02:44 PM IST
Andhra Nandini died in Bengaluru

ಸಾರಾಂಶ

ಬೆಂಗಳೂರಿನ ಪರಪ್ಪನ ಅಗ್ರಹಾರದ ಬಳಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ೨೩ ವರ್ಷದ ಯುವತಿ ನಂದಿನಿ ಮೃತಪಟ್ಟಿದ್ದಾರೆ. ಘಟನೆ ಭಾನುವಾರ ಸಂಜೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು (ಜೂ. 24): ನಗರದ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಚೂಡಸಂದ್ರದಲ್ಲಿ ಭಾನುವಾರ ಸಂಜೆ ಭಯಾನಕ ಘಟನೆ ನಡೆದಿದೆ. ಕಟ್ಟಡದ ಮೇಲಿಂದ ಬಿದ್ದು 23 ವರ್ಷದ ಯುವತಿ ದುರಂತ ಸಾವಿಗೀಡಾಗಿದ್ದಾರೆ.

ಮೃತ ಯುವತಿ ಹೆಸರು ನಂದಿನಿ (23) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶ ಮೂಲದ ಈ ಯುವತಿ ತನ್ನ ಸ್ನೇಹಿತರ ಜೊತೆಗೆ ಚೂಡಸಂದ್ರದ ನಿರ್ಮಾಣ ಹಂತದ ಕಟ್ಟಡವೊಂದರ ಮೇಲಕ್ಕೆ ತೆರಳಿದ್ದ ವೇಳೆ, ಸಂಜೆ ಸುಮಾರು 5 ಗಂಟೆಗೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದೆ.

ಈ ಘಟನೆಯ ತಕ್ಷಣವೇ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸ್ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡ ನಂದಿನಿಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೂರ್ಣ ತನಿಖೆ ಮುಂದುವರಿದಿದೆ.

PREV
Read more Articles on
click me!

Recommended Stories

'ರಸ್ತೆ-ಚರಂಡಿ ನಿರ್ಮಾಣದಿಂದ ಬಡವರು ಉದ್ದಾರ ಆಗ್ತಾರಾ?' ಗ್ಯಾರಂಟಿ ಸ್ಕೀಂ ಟೀಕಿಸಿದ ವಿಪಕ್ಷಗಳಿಗೆ ಗೃಹಸಚಿವ ಪರಂ ತಿರುಗೇಟು!
ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ, ದಾವಣಗೆರೆ ವ್ಯಾಪ್ತಿಯ ಶಾಲೆಗಳಿಗೆ ನಾಳೆ ರಜೆ