ರಂಗನತಿಟ್ಟಿನಲ್ಲಿ ಅನಿಲ್ ಕುಂಬ್ಳೆ ದೋಣಿ ವಿಹಾರ

Kannadaprabha News   | Asianet News
Published : Jan 22, 2020, 07:37 AM IST
ರಂಗನತಿಟ್ಟಿನಲ್ಲಿ ಅನಿಲ್ ಕುಂಬ್ಳೆ ದೋಣಿ ವಿಹಾರ

ಸಾರಾಂಶ

ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ರಂಗನತಿಟ್ಟಿನಲ್ಲಿ ದೋಣಿ ವಿಹಾರ ನಡೆಸಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಕ್ಯಾಮೆರಾ ಮೂಲಕ ಪಕ್ಷಿಗಳ, ಮೊಸಳೆಗಳ ಫೋಟೋಗಳನ್ನು ಕ್ಲಿಕ್ಕಿಸಿ ಖುಷಿಪಟ್ಟಿದ್ದಾರೆ.

ಮಂಡ್ಯ(ಜ.22): ಮಾಜಿ ಕ್ರಿಕೆಟಿಗ ಅನಿಲ್‌ ಕುಂಬ್ಳೆ ಶ್ರೀರಂಗಪಟ್ಟಣದಲ್ಲಿರುವ ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮಕ್ಕೆ ಮಂಗಳವಾರ ಭೇಟಿ ನೀಡಿ ದೋಣಿ ವಿಹಾರ ನಡೆಸಿ ಪಕ್ಷಿಗಳ ವೀಕ್ಷಣೆ ನಡೆಸಿದ್ದಾರೆ.

ಶ್ರೀರಂಗಪಟ್ಟಣದಲ್ಲಿ ತಮ್ಮ ಇಬ್ಬರು ಸ್ನೇಹಿತರೊಡನೆ ಆಗಮಿಸಿದ ಅನಿಲ್ ಕುಂಬ್ಳೆ ಪಕ್ಷಿಧಾಮದಲ್ಲಿ ಕೆಲ ಕಾಲ ದೋಣಿವಿಹಾರ ನಡೆಸುವ ಮೂಲಕ ವಿವಿಧ ಪಕ್ಷಿಗಳು ಹಾಗೂ ಮೊಸಳೆಗಳ ಛಾಯಾ ಚಿತ್ರಗಳನ್ನು ತಮ್ಮ ಕ್ಯಾಮರಾದಿಂದ ಸೆರೆ ಹಿಡಿದಿದ್ದಾರೆ.

ಸರ್ಕಾರಿ ಕಚೇರಿಯೇ ಇವರಿಗೆ ಸಿನಿಮಾ ಥಿಯೇಟರ್..!

ನಂತರ ಮಾತನಾಡಿದ ಅವರು, ನನಗೆ ಸಮಯ ಸಿಕ್ಕಿದಾಗಲೆಲ್ಲ ಇಲ್ಲಿಗೆ ಆಗಮಿಸಿ ಇಲ್ಲಿನ ಸೌಂದರ್ಯ ಹಾಗೂ ಪಕ್ಷಿಗಳ ಛಾಯಾಚಿತ್ರಗಳನ್ನು ತೆಗೆಯುತ್ತೇನೆ. ಪ್ರಾಣಿ ಪಕ್ಷಿಗಳೆಂದರೆ ನನಗೆ ತುಂಬಾ ಇಷ್ಟ ಎಂದು ಹೇಳಿದ್ದಾರೆ.

ರಂಗನತಿಟ್ಟು ವಲಯ ಅರಣ್ಯಾಧಿಕಾರಿ ಪುಟ್ಟಮಾದೇಗೌಡ ಮಾತನಾಡಿ, ಕ್ರಿಕೆಟಿಗ ಅನಿಲ್‌ ಕುಂಬ್ಳೆ ನಮ್ಮ ಅರಣ್ಯ ಇಲಾಖೆಯ ರಾಯಭಾರಿಯಾಗಿ ಇಲ್ಲಿಗೆ ಅನೇಕ ಬಾರಿ ಆಗಮಿಸಿದ್ದಾರೆ. ಮತ್ತೆ ರಂಗನತಿಟ್ಟು ಪಕ್ಷಿಧಾಮಕ್ಕೆ ಆಗಮಿಸಿರುವುದು ಪಕ್ಷಿ ಪ್ರೇಮಿಗಳಿಗೆ ಸಂತಸ ತಂದಿಗೆ ಎಂದರು.

PREV
click me!

Recommended Stories

ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ
ನ್ಯಾಷನಲ್ ಹೆರಾಲ್ಡ್ ಪ್ರಕರಣ ರೀತಿ RSS ವಿರುದ್ಧ ಯಾಕೆ ಕೇಸ್ ಇಲ್ಲ? ಕೇಂದ್ರದ ವಿರುದ್ಧ ಪ್ರಿಯಾಂಕ್ ಪ್ರಶ್ನೆಗಳ ಸುರಿಮಳೆ!