ಎಮ್ಮೆ ಕೋಣಗಳನ್ನು ಕಡಿದು ಹಾಕುವುದಾದರೇ ಹಸುಗಳನ್ನು ಏಕೆ ಕಡಿಯಬಾರದು?: ಸಚಿವರ ಪ್ರಶ್ನೆ

By Gowthami KFirst Published Jun 3, 2023, 3:05 PM IST
Highlights

ಗೋ ಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ವಿಚಾರವಾಗಿ ಮಾತನಾಡಿರುವ   ಸಚಿವ ಕೆ  ವೆಂಕಟೇಶ್ ಅವರು ಎಮ್ಮೆ ಕೋಣಗಳನ್ನು ಕಡಿದು ಹಾಕುವುದಾದರೇ ಹಸುಗಳನ್ನು ಏಕೆ ಕಡಿಯಬಾರದು? ಎಂದು ಪ್ರಶ್ನಿಸಿದ್ದಾರೆ.

ಮೈಸೂರು(ಮೇ.3): ಗೋ ಹತ್ಯೆ ನಿಷೇಧ ಕಾಯ್ದೆ (cattle slaughter act) ರದ್ದುಗೊಳಿಸುವ ವಿಚಾರವಾಗಿ ಮಾತನಾಡಿರುವ ಪಶು ಸಂಗೋಪನೆ ಸಚಿವ ಕೆ  ವೆಂಕಟೇಶ್ ಅವರು ಎಮ್ಮೆ ಕೋಣಗಳನ್ನು ಕಡಿದು ಹಾಕುವುದಾದರೇ ಹಸುಗಳನ್ನು ಏಕೆ ಕಡಿಯಬಾರದು? ನನ್ನ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ತುಂಬಾ ಕಷ್ಟ ಪಡಬೇಕಾಯಿತು. 25 ಮಂದಿ ಬಂದರೂ ಸತ್ತ ಹಸುವಿನ ಮೃತದೇಹ ಎತ್ತಲು ಸಾಧ್ಯವಾಗಲಿಲ್ಲ. ಕೊನೆಗೆ ಜೆಸಿಬಿ ತರಿಸಿ ಮೃತ ಹಸುವನ್ನು ಎತ್ತಿಸಿ ಗುಂಡಿ ತೋಡಿ ಹೂಳಬೇಕಾಯಿತು. ಹೀಗಾಗಿ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದು ಸಚಿವ ಕೆ ವೆಂಕಟೇಶ್ ಮೈಸೂರಿನಲ್ಲಿ ಹೇಳಿದ್ದಾರೆ.

ರಾಜ್ಯಕ್ಕೆ ಅಮುಲ್ ಬಂದಿಲ್ಲ. ಅಮುಲ್ ನಿಂದ ನಂದಿನಿಗೆ ತೊಂದರೆ ಆಗಿಲ್ಲ. ಮುಂದಿನ ದಿನಗಳಲ್ಲಿ ಅಮುಲ್ ಬಂದಾಗ ನೋಡೋಣ. ನಂದಿನಿ ಉತ್ಪನ್ನಗಳ ಉತ್ತೇಜನಕ್ಕೆ ಕ್ರಮ ಕೈಗೊಳ್ಳುತ್ತೇವೆ. ಹಸು ದತ್ತು ಯೋಜನೆ ಏನಾಗಿದೆ ಎಂದು ಪರಿಶೀಲಿಸುತ್ತೇವೆ. ಗೋ ಶಾಲೆಗಳ ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ. ಆದರೆ ನಿರ್ವಹಣೆ ಸರಿಯಾಗಿ ಆಗಿಲ್ಲ. ಮುಂದೆ ಎಲ್ಲವನ್ನೂ ಸರಿಪಡಿಸುತ್ತೇವೆ ಎಂದು ಸಚಿವ ಕೆ ವೆಂಕಟೇಶ್ ಮೈಸೂರಿನಲ್ಲಿ ಹೇಳಿದ್ದಾರೆ.

ಜಿಂಕೆ ಕೊಂದು ಅರಣ್ಯ ಪ್ರದೇಶದಲ್ಲೆ ಮಾಂಸ ಕತ್ತರಿಸುತ್ತಿದ್ದವರ ಬಂಧನ, ಮೂವರು ಪರಾರಿ!

ಇನ್ನು ಈಗಾಗಲೇ ರಾಜ್ಯ ಕಾಂಗ್ರೆಸ್ ನಾಯಕರು  ‘ಗೋ ಹತ್ಯೆ ನಿಷೇಧ, ಮತಾಂತರ ನಿಷೇಧ ಸೇರಿದಂತೆ ಬಿಜೆಪಿ ಅವಧಿಯ ಜನ ವಿರೋಧಿ ಕಾಯಿದೆಗಳ ಬಗ್ಗೆ ಪರಿಶೀಲಿಸಲಾಗುವುದು. ಯಾವುದು ಸಮಾಜದ ಶಾಂತಿ ಕದಡುವ ಹಾಗೂ ಜನವಿರೋಧಿ ಅಂಶಗಳನ್ನು ಹೊಂದಿದೆಯೋ ಅದನ್ನು ಪರಿಶೀಲಿಸಿ ಸೂಕ್ತ ತೀರ್ಮಾನ ಮಾಡುತ್ತೇವೆ’ ಎಂದಿದ್ದಾರೆ.

ಕೆಲಸಕ್ಕೆ ಹೋಗು ಎಂದಿದ್ದೇ ತಪ್ಪಾಯ್ತು, ಹೆಂಡತಿಯನ್ನು ಕತ್ತು ಹಿಸುಕಿ ಕೊಂದ ಪತಿ!

 

click me!