ರೈತರಿಗೆ ಇದು ಗುಡ್ ನ್ಯೂಸ್, ಇನ್ಮುಂದೆ ನಿಮ್ಮ ಮನೆ ಬಾಗಿಲ್ಲೇ ಈ ಸೇವೆ ಸಿಗಲಿದೆ. ಇದಕ್ಕಾಗಿ ಹೊರಗೆ ಹೋಗಬೇಕಾದ ಅವಶ್ಯಕತೆ ಇಲ್ಲ.
ಚಿಕ್ಕಬಳ್ಳಾಪುರ (ಸೆ.18): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆರಂಭಿಸಿರುವ 108 ಆ್ಯಂಬುಲೆನ್ಸ್ ಮಾದರಿಯಲ್ಲಿ ರಾಜ್ಯ ಪಶು ಸಂಗೋಪನಾ ಇಲಾಖೆ, ಪಶು ಸಂಪತ್ತನ್ನು ಆಪತ್ತಿನ ತುರ್ತು ಸಂದರ್ಭದಲ್ಲಿ ರಕ್ಷಿಸಿಸಲು ರೈತರ ಮನೆ ಬಾಗಿಲಿಗೆ ಪಶು ವೈದ್ಯಕೀಯ ಸೇವೆಗೆ ಪಶು ಆ್ಯಂಬುಲೆನ್ಸ್ ಸೇವೆ ಆರಂಭಿಸಿದೆ.
ಬಯಲು ಸೀಮೆಯ ಬರದ ನಾಡು ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬಿಸಿಲುನಾಡು ಯಾದಗಿರಿ, ಬೀದರ್, ರಾಯಚೂರು, ಕಲಬುರಗಿ ಸೇರಿ ಮೊದಲ ಹಂತದಲ್ಲಿ 15 ಜಿಲ್ಲೆಗಳಿಗೆ ಅತ್ಯಾಧುನಿಕ ಸೌಲಭ್ಯಗಳು ಹೊಂದಿರುವ ಪಶು ಚಿಕಿತ್ಸಾ ವಾಹನವನ್ನು ಸರ್ಕಾರ ನೀಡಿದ್ದು ಅನ್ನದಾತರಲ್ಲಿ ಹರ್ಷ ತಂದಿದೆ.
ಟೊಮೆಟೋಗೆ ಈಗ ಭಾರೀ ಬಂಪರ್ : ರೈತನಿಗೆ ಫುಲ್ ಖುಷ್ .
ಸುಸಜ್ಜಿತವಾದ ಪಶು ಚಿಕಿತ್ಸಾ ವಾಹನದಲ್ಲಿ ಆಧುನಿಕ ಪಶು ವೈದ್ಯಕೀಯ ಸೇವೆಗಳಾದ ಶಸ್ತ್ರ ಚಿಕಿತ್ಸಾ ಘಟಕ, ಪ್ರಯೋಗಾಲಯ, ಸ್ಕ್ಯಾನಿಂಗ್ ಉಪಕರಣಗಳ ಅಳವಡಿಕೆಗೆ ಅವಕಾಶ, 250 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್, 200 ಕೆಜಿಯ ಸಾಮರ್ಥ್ಯದ ಶಸ್ತ್ರ ಚಿಕಿತ್ಸಾ ಟೇಬಲ್, ಹವಾನಿಯಂತ್ರಿತ ವ್ಯವಸ್ಥೆ, ಪಶು ವೈದ್ಯರು ಹಾಗೂ ಸಿಬ್ಬಂದಿ ಕುಳಿತುಕೊಳ್ಳುವ ಆಸನಗಳು ಸೇರಿದಂತೆ ವಿವಿಧ ರೀತಿಯ ಸೌಲಭ್ಯಗಳು ಇವೆ.