ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳ ನಿಗೂಢ ಸಾವು! ಕಾರಣವೇನು?

Published : Jul 04, 2025, 03:06 PM IST
pilikula biological park

ಸಾರಾಂಶ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಒಂಬತ್ತು ಪ್ರಾಣಿಗಳು ಮೃತಪಟ್ಟಿವೆ. ಇವುಗಳಲ್ಲಿ ಪುನುಗು ಬೆಕ್ಕು, ಬರಿಂಕ ಸೇರಿವೆ. ಮಳೆಯಿಂದಾಗಿ ಶೀತ ವಾತಾವರಣ ಹೆಚ್ಚಾದ ಪರಿಣಾಮ ಈ ಪ್ರಾಣಿಗಳು ಮೃತಪಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು (ಜು.4): ಮಂಗಳೂರು ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಪುನುಗು ಬೆಕ್ಕು, ಬರಿಂಕ ಸೇರಿದಂತೆ ಒಂಬತ್ತು ಪ್ರಾಣಿಗಳು ಮೃತಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚೆಗೆ ಪಿಲಿಕುಳ ಜೈವಿಕ ಉದ್ಯಾನವನದೊಳಗೆ ನೀರು ನುಗ್ಗಿ, ಕಂಪೌಂಡ್ ಕುಸಿದು ಪ್ರಾಣಿಗಳಿಗೆ ತೊಂದರೆಯಾಗಿತ್ತು. ಈ ಬಗ್ಗೆ ವನ್ಯಜೀವಿ ಸಂರಕ್ಷಕ ಭುವನ್ ದೇವಾಡಿಗ ಅವರು ಸೆಂಟ್ರಲ್ ಝೂ ಅಥಾರಿಟಿಗೆ ದೂರು ನೀಡಿದ್ದರು.‌ ಈ ದೂರಿನನ್ವಯ ಮುಖ್ಯ ವನ್ಯಜೀವಿ ವಾರ್ಡನ್‌ಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು. ಇದಾಗಿ ವಾರದೊಳಗೆ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಒಂಬತ್ತು ಪ್ರಾಣಿಗಳು ಮೃತಪಟ್ಟ ಬಗ್ಗೆ ಮಾಹಿತಿ ದೊರೆತಿದೆ.

ಪಿಲಿಕುಳದಲ್ಲಿ 2 ಕೃಷ್ಣಮೃಗ, 5 ಪುನುಗು ಬೆಕ್ಕು, 1 ಬಿಳಿ ಗೂಬೆ ಹಾಗೂ 1 ಬರಿಂಕ ಸೇರಿದಂತೆ 9 ಪ್ರಾಣಿಗಳು ಮೃತಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಪಿಲಿಕುಳದಲ್ಲಿ 2 ಪುನುಗು ಬೆಕ್ಕುಗಳು ಮತ್ತು ಒಂದು ಬರಿಂಕ ಮಾತ್ರ ಮೃತಪಟ್ಟಿದೆ. ಮಳೆಯ ಹಿನ್ನೆಲೆಯಲ್ಲಿ ಶೀತ ವಾತಾವರಣ ಹೆಚ್ಚಾದ ಪರಿಣಾಮ ಈ ಪ್ರಾಣಿಗಳು ಮೃತಪಟ್ಟಿದೆ ಎಂದು ಜೈವಿಕ ಉದ್ಯಾನವನದ ಪ್ರಭಾರ ನಿರ್ದೇಶಕರು ತಿಳಿಸಿದ್ದಾರೆ.

PREV
Read more Articles on
click me!

Recommended Stories

ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ವೇಳೆ ಹೊಸ ಪದ್ದತಿಗೆ ಮುನ್ನುಡಿ
ಮೃತದೇಹದ ಬಟ್ಟೆ ಮೇಲಿದ್ದ ಟ್ಯಾಗ್ ನೀಡಿತು ರೋಚಕ ಸುಳಿವು, ಒಂದೇ ವಾರಕ್ಕೆ ಕೊಲೆಯ ರಹಸ್ಯ ಬೇಧಿಸಿದ ಪೊಲೀಸರು