ನಾನು ಆರ್ ಟಿಐ ಅಡಿಯಲ್ಲಿ ಅರ್ಜಿ ಹಾಕುತ್ತಿದ್ದಾಗ ಎಚ್ಚೆತ್ತ ಪಾರ್ವತಿ ಅವರು, 12,782 ಚದ ರಡಿ ಜಾಗಕ್ಕೆ ಮಾತ್ರ ರಿಜಿಸ್ಟರ್ ಮಾಡಿಸಿಕೊಂಡಿದ್ದಾರೆ. ಈ ಬಗ್ಗೆ ದಾಖಲೆಗಳಿದ್ದು, ರಾಜ್ಯಪಾಲರಿಗೆ ದೂರು ನೀಡುವೆ ಎಂದು ತಿಳಿಸಿದ ಆರ್‌ಟಿಐ ಕಾರ್ಯಕರ್ತ ಗಂಗರಾಜು
ಮೈಸೂರು(ಅ.20): ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ವಿರುದ್ದ ಮತ್ತೊಂದು ಭೂಅಕ್ರಮ ಆರೋಪ ಕೇಳಿ ಬಂದಿದ್ದು, ಮುಡಾಗೆ ಸೇರಿದ 20 ಗುಂಟೆ ಜಾಗವನ್ನು ಪಾರ್ವತಿ ಅವರು 2023ರ ಸೆ.29ರಂದು ರಿಜಿ ಸ್ಟಾರ್ ಮೂಲಕ ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಆಪಾದಿಸಿದ್ದಾರೆ.
ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಿರುವ ಕೆಆರ್ ಎಸ್ ರಸ್ತೆಯಲ್ಲಿರುವ ಸರ್ವೇ ನಂಬರ್ 454ರ ಗಣೇಶ್ ದೀಕ್ಷಿತ್ ಎಂಬವರ 4 ಎಕ್ರೆ 11 ಗುಂಟೆ ಜಾಗದಲ್ಲಿ 20 ಗುಂಟೆ ಜಾಗ ವನ್ನು ಪಾರ್ವತಿ ಅವರು, ₹1.85 ಕೋಟಿಗೆ ಖರೀದಿಸಿದ್ದಾರೆ. 21,7 71,99 ಚದರಡಿ ಜಾಗವನ್ನು (20 ಗುಂಟೆ) ರಿಜಿಸ್ಟರ್ ಮಾಡಿಸಿಕೊಂಡಿದ್ದು, ಅದರಲ್ಲಿ 8998 ಚದರಡಿ ಜಾಗ ರಸ್ತೆ ಮತ್ತು ಪೈಪ್‌ಲೈನ್‌ಗೆ ಸೇರಿದ್ದ ಜಾಗವಾಗಿತ್ತು. ಅದನ್ನು ಸೇರಿಸಿಕೊಂಡು ತಮ್ಮ ಹೆಸರಿಗೆ ನೋಂದಣಿ ಮಾಡಿಸಿ ಕೊಂಡಿದ್ದರು.
ಜೈಲಿಗೆ ಹೋಗುವ ಸ್ಥಿತಿ ಬಂದಾಗ ಸಿದ್ದುಗೆ ದೇವರ ನೆನಪು: ಈಶ್ವರಪ್ಪ
ಈ ಸಂಬಂಧ ನಾನು ಆರ್ ಟಿಐ ಅಡಿಯಲ್ಲಿ ಅರ್ಜಿ ಹಾಕುತ್ತಿದ್ದಾಗ ಎಚ್ಚೆತ್ತ ಪಾರ್ವತಿ ಅವರು, 12,782 ಚದ ರಡಿ ಜಾಗಕ್ಕೆ ಮಾತ್ರ ರಿಜಿಸ್ಟರ್ ಮಾಡಿಸಿಕೊಂಡಿದ್ದಾರೆ. ಈ ಬಗ್ಗೆ ದಾಖಲೆಗಳಿದ್ದು, ರಾಜ್ಯಪಾಲರಿಗೆ ದೂರು ನೀಡುವೆ ಎಂದು ಗಂಗರಾಜು ತಿಳಿಸಿದ್ದಾರೆ.